ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ದೀಪ್ಕೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ದೆಹಲಿ ಪೊಲೀಸ್ ಡಿಸಿಪಿಯ ಹಳೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಗ್ಯಾಂಗ್‌ಸ್ಟರ್‌ಗೆ ತೋರುವಷ್ಟು ಗೌರವವನ್ನು ದೆಹಲಿ ಪೊಲೀಸರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರಿಗೆ ಏಕೆ ತೋರಿಸುವುದಿಲ್ಲ? ಎಂದು ಬರೆದಿದ್ದಾರೆ.
ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳಿಗಾಗಿ ದೀಪ್ಕೆನನ್ನು ದೆಹಲಿ ಪೊಲೀಸರು ಹಲವಾರು ಬಾರಿ ಬಂಧನ ಮಾಡಿದ್ದ ಬೆನ್ನಲ್ಲೇ ಈ ಪೋಸ್ಟ್ ಬಂದಿದೆ. ದೀಪ್ಕೆ ಎಕ್ಸ್‌ನಲ್ಲಿ ಹಂಚಿಕೊಂಡ ಡಿಸಿಪಿಯ ಹಳೆಯ ವೀಡಿಯೊದಲ್ಲಿ, ಡಿಸಿಪಿ ಅವರನ್ನು "ಲಾರೆನ್ಸ್ ಬಿಷ್ಣೋಯ್ ಸಾಹೇಬ್" ಎಂದು ಕರೆಯುವುದು ಕೇಳುತ್ತದೆ. ಈ ಬಗ್ಗೆ ದೀಪ್ಕೆ ದೆಹಲಿ ಪೊಲೀಸರ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ದೆಹಲಿ ಪೊಲೀಸರು ದರೋಡೆಕೋರರ ಬಗ್ಗೆ ಹೊಂದಿರುವ ಗೌರವ, ಆ ಗೌರವದ 10ರಷ್ಟಾದರೂ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರಿಗೆ ತೋರಿಸಬೇಕೆಂದು ನಾನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನಿನ್ನೆ ಸಂಜೆ ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಹರಿಯಾಣದ ರೆಹಾನ್ ಅಲಿಯಾಸ್ ಸುಕ್ಕಾ, ಬಿಹಾರದ ಹೃತಿಕ್ ಕುರ್ಮಿ ಅಲಿಯಾಸ್ ರೋಷನ್ ಮತ್ತು ಒಬ್ಬ ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.