ಸಿಎಂ ನಿವಾಸದ ಹೊರಗೆ ಪ್ರತಿಭಟನೆ 
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಉಗ್ರರಿಂದ ಮೂವರ ಹತ್ಯೆ; ಭುಗಿಲೆದ್ದ ಆಕ್ರೋಶ, ಸಿಎಂ ನಿವಾಸದ ಹೊರಗೆ ಪ್ರತಿಭಟನೆ!

ಮಣಿಪುರದಲ್ಲಿ ಮೂವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದು ಈ ಘಟನೆಯ ನಂತರ ಮುಖ್ಯಮಂತ್ರಿ ನಿವಾಸದ ಹೊರಗೆ ಶವಗಳನ್ನಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿ ಮರ ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.

ಮಣಿಪುರದಲ್ಲಿ ಮೂವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದು ಈ ಘಟನೆಯ ನಂತರ ಮುಖ್ಯಮಂತ್ರಿ ನಿವಾಸದ ಹೊರಗೆ ಶವಗಳನ್ನಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿ ಮರ ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.

ದಾಳಿಯಲ್ಲಿ ಅರುಬಮ್ ರೋನಿಲ್ (35) ಮತ್ತು ಲೈರೆನ್ಲಕ್ಪಮ್ ಇನಾವೊಬಿ (51) ಸ್ಥಳದಲ್ಲೇ ಸಾವನ್ನಪ್ಪಿದರೆ, ಕ್ಷೇತ್ರಿಮಾಯುಮ್ ಸುಶೀಲ್ (32) ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳಾದ ಎನ್. ಸೂರಜ್ (19), ಮೈಸ್ನಾಮ್ ಸೋಮೆಂಡ್ರಾವ್ (53), ಮತ್ತು ಕೆ. ಬೋಸನ್ (45) ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ 16 ಜನರ ಗುಂಪು ತಮ್ಮ ಗ್ರಾಮದ ಬಳಿಯ ಬೆಟ್ಟಗಳಲ್ಲಿ ಕಟ್ಟಿಗೆ ಸಂಗ್ರಹಿಸಲು ಹೋಗಿದ್ದಾಗ ಉಗ್ರರು ಗುಂಡು ಹಾರಿಸಿದ್ದಾರೆ. ಮುಖ್ಯಮಂತ್ರಿ ನಿವಾಸದ ಹೊರಗೆ ನಡೆದ ಪ್ರತಿಭಟನೆಯ ನಂತರ, ಮುಖ್ಯಮಂತ್ರಿ ಖೇಮಚಂದ್ ಸಿಂಗ್ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮೇ 2023ರಿಂದ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಬೇಸತ್ತಿರುವ ಸ್ಥಳೀಯರು ಸಿಎಂ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹಲವಾರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು, ನಂತರ ಮೃತದೇಹಗಳನ್ನು ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆ (ಜೆಎನ್‌ಐಎಂಎಸ್) ಗೆ ಕೊಂಡೊಯ್ಯಲಾಯಿತು. ಮುಖ್ಯಮಂತ್ರಿ ನಿವಾಸ ಮತ್ತು ಅದಕ್ಕೆ ಹೋಗುವ ರಸ್ತೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಖುರೈ ಲ್ಯಾಮ್ಲಾಂಗ್‌ನಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರೇ ಇಂಫಾಲ್‌ನ ಎಮ್ಮಾ ಕೈಥೆಲ್‌ನಲ್ಲಿ ಮಹಿಳೆಯರ ಗುಂಪು ಪ್ರತಿಭಟನೆ ನಡೆಸಿತು. ಈ ಘಟನೆಯ ನಂತರ, ಇಂಫಾಲ್‌ನಾದ್ಯಂತ ಮಾರುಕಟ್ಟೆಗಳು ಮತ್ತು ಅಂಗಡಿಗಳನ್ನು ಬಂದ್ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟೈಗರ್ ಶ್ರಾಫ್‌ ಮೇಲೆ ಶೂಟ್ ಔಟ್ ಕೇಸ್: 3 ಆರೋಪಿಗಳಲ್ಲಿ ಅಪ್ರಾಪ್ತರಿಲ್ಲ- ಡಿಸಿಪಿ ರಾಜ್ ತಿಲಕ್ ರೋಷನ್

'ರಾಹುಲ್ ಗಾಂಧಿ ನನ್ನ ಪರ್ಸ್, ಮೊಬೈಲ್ ಕದ್ದಿದ್ದಾರೆ': ಅಮೆರಿಕನ್ ಕಾರ್ಯಕರ್ತೆ ರೆನೀ ಲಿನ್ ವ್ಯಂಗ್ಯಾತ್ಮಕ ಹೇಳಿಕೆ; Video

ಹಾಡುವುದಷ್ಟೇ ಅಲ್ಲ, ನಾನೂ ಅತ್ಯುತ್ತಮವಾಗಿ ನಟಿಸಬಲ್ಲೆ: ಮಹಾ CM ಪತ್ನಿ ಅಮೃತಾ ಫಡ್ನವೀಸ್

Scrap ಮಾರಾಟ: ಭಾರತ ಸರ್ಕಾರಕ್ಕೆ 500 ಕೋಟಿ ರೂ ಗಳಿಕೆ!

CJP ಮುಖಂಡರಿಗಿಲ್ಲ ಬಿಡುಗಡೆ ಭಾಗ್ಯ; ಅಶುತೋಷ್ ರಾಂಕಾ, ಸೌರವ್ ದಾಸ್ ಗೆ ಇನ್ನೂ 2 ದಿನ ಜೈಲೇ ಗತಿ!