ಕಲ್ಯಾಣ್ ಬ್ಯಾನರ್ಜಿ 
ದೇಶ

'ಅಮ್ಮಾ, ಅಮ್ಮಾ': ದುರ್ಗಾ ಪೂಜೆ ವೇಳೆ ಭಾವುಕರಾಗಿ ಕಣ್ಣೀರಿಟ್ಟ TMC ಸಂಸದ ಕಲ್ಯಾಣ್ ಬ್ಯಾನರ್ಜಿ; ವಿಡಿಯೋ ವೈರಲ್

ದುರ್ಗಾ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ಭಾವುಕರಾಗಿ ಕಣ್ಣೀರು ಹಾಕುತ್ತಿರುವ ವೀಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ಹಿರಿಯ ನಾಯಕ ಹಾಗೂ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ದುರ್ಗಾ ಪೂಜೆಯ ಸಂಭ್ರಮದ ನಡುವೆ ದೇವಿಯ ಎದುರು ಕೈಮುಗಿದು ‘ಮಾ, ಮಾ’ (ಅಮ್ಮಾ, ಅಮ್ಮಾ) ಎಂದು ಕಣ್ಣೀರಿಟ್ಟ ಘಟನೆ ನಡೆದಿದೆ.

ದುರ್ಗಾ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ಭಾವುಕರಾಗಿ ಕಣ್ಣೀರು ಹಾಕುತ್ತಿರುವ ವೀಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಾಲ್ ಒಂದರಲ್ಲಿ ದುರ್ಗಾದೇವಿಯ ದರ್ಶನ ಪಡೆಯಲು ಆಗಮಿಸಿದ್ದ ಕಲ್ಯಾಣ್ ಬ್ಯಾನರ್ಜಿ ಅವರು, ದೇವಿಯ ಮೂರ್ತಿಯನ್ನು ನೋಡುತ್ತಿದ್ದಂತೆ ಅತ್ಯಂತ ಭಾವುಕರಾದರು. ದೇವಿಯ ಎದುರು ಕೈಮುಗಿದು ನಿಂತ ಅವರು, ‘ಮಾ, ಮಾ’ ಎಂದು ಜೋರಾಗಿ ಉದ್ಗರಿಸುತ್ತಾ ಭಾವುಕರಾಗಿ ಕಣ್ಣೀರಿಡಲು ಪ್ರಾರಂಭಿಸಿದರು.

ಸಂಸದ ಕಲ್ಯಾಣ್ ಮುಖರ್ಜಿ ಈ ರೀತಿ ಹಠಾತ್ತನೆ ಭಾವುಕರಾಗಿ ನಿಯಂತ್ರಣ ತಪ್ಪಿ ಅಳಲು ತೊಡಗಿದ್ದನ್ನು ಕಂಡ ಪಕ್ಕದಲ್ಲಿದ್ದ ಬೆಂಬಲಿಗರು ಹಾಗೂ ಪೂಜಾ ಸಮಿತಿಯ ಸದಸ್ಯರು ತಕ್ಷಣವೇ ಅವರನ್ನು ಸಮಾಧಾನಪಡಿಸಲು ಮುಂದಾದರು. ಅವರ ಹೆಗಲ ಮೇಲೆ ಕೈಯಿಟ್ಟು, ನೀರು ನೀಡಿ ಸಮಾಧಾನಪಡಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಕಲ್ಯಾಣ್ ಬ್ಯಾನರ್ಜಿ ಅವರ ಈ ಭಾವುಕ ಕ್ಷಣದ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ನೆಟ್ಟಿಗರು ಹಾಗೂ ಬೆಂಬಲಿಗರು ದೇವಿಯ ಮೇಲಿನ ಅವರ ಅಪಾರ ಭಕ್ತಿ ಹಾಗೂ ನಿಷ್ಠೆಯನ್ನು ಶ್ಲಾಘಿಸಿದರೆ, ಇನ್ನೂ ಕೆಲವರು ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ಪೆಂಡಾಲ್ ಅನಾಹುತಗಳ ಹಿನ್ನೆಲೆಯಲ್ಲಿ ಅವರು ಈ ರೀತಿ ಮನನೊಂದು ಕಣ್ಣೀರಿಟ್ಟಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಬ್ಬು ರೈತರ ‘ಹುಬ್ಬಳ್ಳಿ ಚಲೋ’ ಪ್ರತಿಭಟನಾ ಮೆರವಣಿಗೆ ತಾತ್ಕಾಲಿಕ ಸ್ಥಗಿತ: ಸರ್ಕಾರಕ್ಕೆ ನವೆಂಬರ್ 26 ಗಡುವು

ನನ್ನ ಪ್ರೀತಿಯ ಕನ್ನಡಿಗರೇ ಮನಸ್ಪೂರ್ತಿಯಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ: ಸೋನು ನಿಗಮ್

ವಿಜಯಪುರ: ಮನೆಗೆ ಪೇಂಟ್ ಮಾಡಲು ಬಂದವನ ಜತೆ ಲವ್ವಿಡವ್ವಿ; ಪ್ರಿಯಕರನ ಜತೆ ಸೇರಿ ಪತಿಯನ್ನೇ ಕೊಂದ ಪತ್ನಿ, ಇತರ ಮೂವರ ಬಂಧನ!

ಪ್ರಧಾನಿ ಮೋದಿ, ಸೀತಾರಾಮನ್ ಡೀಪ್‌ಫೇಕ್ ವೀಡಿಯೊ ಬಳಸಿ ನಕಲಿ ಕಲ್ಯಾಣ ಯೋಜನೆ ಜಾಹೀರಾತುಗಳ ಬಗ್ಗೆ ಎಚ್ಚರ- ಸೈಬರ್ ಅಪರಾಧ ವಿಭಾಗ

ಟೈಗರ್ ಶ್ರಾಫ್‌ ಮೇಲೆ ಶೂಟ್ ಔಟ್ ಕೇಸ್: ಮೂವರು ಆರೋಪಿಗಳಲ್ಲಿ ಯಾರೊಬ್ಬರೂ ಅಪ್ರಾಪ್ತರಲ್ಲ- ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷ್ಟನೆ