ಟೈಗರ್ ಶ್ರಾಫ್ 
ದೇಶ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಯುವತಿಯರು ಸೇರಿದಂತೆ ಮತ್ತೆ ಐವರ ಬಂಧನ!

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಪಿ ರಾಜ್ ತಿಲಕ್ ರೋಷನ್, ಬಂಧಿತ ಈ ಐವರನ್ನು ಮುಂಬೈಗೆ ಕರೆತರಲಾಗುತ್ತಿದೆ ಎಂದು ಹೇಳಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಎಂಟಕ್ಕೆ ಏರಿದೆ.

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ ಮುಂಬೈ ಪೊಲೀಸರು, ಬುಧವಾರ ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಪಿ ರಾಜ್ ತಿಲಕ್ ರೋಷನ್, ಬಂಧಿತ ಈ ಐವರನ್ನು ಮುಂಬೈಗೆ ಕರೆತರಲಾಗುತ್ತಿದೆ ಎಂದು ಹೇಳಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಎಂಟಕ್ಕೆ ಏರಿದೆ.

ಬಂಧಿತ ಆರೋಪಿಗಳನ್ನು ಹರಿಯಾಣದ ಸೋನಿಪತ್ ಜಿಲ್ಲೆಯ ನಿವಾಸಿಗಳಾದ ಕುನಾಲ್(21) ಮತ್ತು ಸುಮಿತ್ (19), ಹಾಗೂ ಉತ್ತರ ಪ್ರದೇಶದ ರಾಧಾ (23) ಮತ್ತು ಬಬಿತಾ (23) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಶಂಕಿತನನ್ನು ಹರಿಯಾಣದ ಸೋನಿಪಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ, ಭಾನುವಾರ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ರಾಜಸ್ಥಾನದ ಕೋಟಾದಲ್ಲಿ ಬಂಧಿಸಲಾಗಿತ್ತು.

ತಾಂತ್ರಿಕ ವಿಶ್ಲೇಷಣೆ ಮತ್ತು ನಿರಂತರ ವಿಚಾರಣೆಯ ಮೂಲಕ, ಗುಂಡಿನ ದಾಳಿಗೆ ಬಳಸಲಾದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಪೂರೈಸುತ್ತಿದ್ದ ದೊಡ್ಡ ಜಾಲವೊಂದನ್ನು ಅಪರಾಧ ವಿಭಾಗದ ಪೊಲೀಸರು ಪತ್ತೆಹಚ್ಚಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ, ದೆಹಲಿ ಮತ್ತು ಹರಿಯಾಣ ಪೊಲೀಸರ ಸಹಕಾರದೊಂದಿಗೆ ಏಕಕಾಲದಲ್ಲಿ ಹಲವು ಕಡೆ ದಾಳಿ ನಡೆಸಲಾಯಿತು. ಈ ವೇಳೆ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಲಾಯಿತು. ಮತ್ತೊಬ್ಬ ಶಂಕಿತನನ್ನು ಹರಿಯಾಣದ ಸೋನಿಪಟ್‌ನಿಂದ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾ: ವೈಭವದ ಜಂಬೂ ಸವಾರಿ ಮೆರವಣಿಗೆ, ಮೊದಲ ಬಾರಿಗೆ ಅಂಬಾರಿ ಹೊತ್ತು ಸಾಗಿದ ಪ್ರಶಾಂತ ಆನೆ, ಕಿಕ್ಕಿರಿದು ಸೇರಿದ ಜನರು!

ದರ್ಶನ್ ಬಗ್ಗೆ ವಿಜಯಲಕ್ಷ್ಮೀ ಪೋಸ್ಟ್‌ ಬೆನ್ನಲ್ಲೇ 'ಶಕುನಿ' ಅಂತ ಪೋಸ್ಟ್ ಹಾಕಿದ ನಟ ಧನ್ವೀರ್ ಗೌಡ, ಯಾರಿಗೆ ಟಾಂಗ್?

CJPಗೆ ಬಿಗ್ ರಿಲೀಫ್: ಅಶುತೋಷ್ ರಾಂಕಾ, ಸೌರವ್ ದಾಸ್ ಬಿಡುಗಡೆ ಮಾಡುವಂತೆ SEM ಆದೇಶ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ: ತಾಯಿ ಚಾಮುಂಡೇಶ್ವರಿಗೆ CM ಡಿಕೆ ಶಿವಕುಮಾರ್ ಪುಷ್ಪಾರ್ಚನೆ

ಅಮೃತಸರದ ಗೋಲ್ಡನ್‌ ಟೆಂಪಲ್‌ನಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಟಿ ಸಾರಾ ಅಲಿ ಖಾನ್; Video ವೈರಲ್, ಫ್ಯಾನ್ಸ್ ಆತಂಕ