ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ Online Desk
ದೇಶ

CJIಗೆ ಬೇಷರತ್ ಕ್ಷಮೆಯಾಚಿಸಿದ ಕಾಂಗ್ರೆಸ್: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ವಿವಾದಾತ್ಮಕ ಪೋಸ್ಟ್‌ಗೆ ನ್ಯಾಯಾಂಗದ ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್

ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರ ವಿರುದ್ಧ ಅಧಿಕೃತ 'X' ಖಾತೆಯಲ್ಲಿ ಪ್ರಕಟವಾಗಿದ್ದ ವಿವಾದಾತ್ಮಕ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು ಬೇಷರತ್ ಕ್ಷಮೆಯಾಚಿಸಿದೆ. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರ ವಿರುದ್ಧ ಅಧಿಕೃತ 'X' ಖಾತೆಯಲ್ಲಿ ಪ್ರಕಟವಾಗಿದ್ದ ವಿವಾದಾತ್ಮಕ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು ಬೇಷರತ್ ಕ್ಷಮೆಯಾಚಿಸಿದೆ. ಸುಪ್ರೀಂ ಕೋರ್ಟ್ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಮೀನೇಶ್ ದುಬೆ ಅವರು ನೀಡಿದ್ದ ಕಾನೂನು ನೋಟಿಸ್‌ಗೆ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಅವರು ಲಿಖಿತ ಉತ್ತರ ನೀಡುವ ಮೂಲಕ ನ್ಯಾಯಾಂಗದ ಕ್ಷಮೆ ಕೋರಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಿವಾದಾತ್ಮಕ ಪೋಸ್ಟ್‌ನಲ್ಲೇನಿತ್ತು?

ಅಕ್ಟೋಬರ್ 12 ರಂದು ಕೇರಳ ಕಾಂಗ್ರೆಸ್‌ನ ಅಧಿಕೃತ 'X' ಖಾತೆಯಲ್ಲಿ (@INCKerala), "ಡಿಯರ್ ಸೂರ್ಯ ಕಾಂತ್, ಕಾನೂನು ಮತ್ತು ಸುವ್ಯವಸ್ಥೆ ನಿಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದಾದರೆ ತಕ್ಷಣ ರಾಜೀನಾಮೆ ನೀಡಿ. ಅದನ್ನು ನಿಭಾಯಿಸಬಲ್ಲ ಮತ್ತೊಬ್ಬರನ್ನು ನಾವು ಹುಡುಕಿಕೊಳ್ಳುತ್ತೇವೆ" ಎಂದು ಪೋಸ್ಟ್ ಮಾಡಲಾಗಿತ್ತು. ನ್ಯಾಯಾಂಗದ ಮುಖ್ಯಸ್ಥರನ್ನೇ ನೇರವಾಗಿ ರಾಜೀನಾಮೆಗೆ ಆಗ್ರಹಿಸಿದ ಈ ಪೋಸ್ಟ್ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ, ಈ ಪೋಸ್ಟ್ ಅನ್ನು ಪಕ್ಷದ ಹಿರಿಯ ನಾಯಕರ ಗಮನಕ್ಕೆ ತರದೆ, ಅವರ ಅನುಮತಿಯಿಲ್ಲದೆ ಸಾಮಾಜಿಕ ಜಾಲತಾಣ ವಿಭಾಗದ ವಿಜಯ್ ತೋಟತ್ತಿಲ್ ಎಂಬುವರು ಸ್ವಯಂಪ್ರೇರಿತವಾಗಿ ಪ್ರಕಟಿಸಿದ್ದರು ಎಂದು ಕಾಂಗ್ರೆಸ್ ತಿಳಿಸಿತ್ತು.

ಈ ಸಂಬಂಧ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಹಾಗೂ ವಕೀಲ ಮೀನೇಶ್ ದುಬೆ ಅವರು  ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಕಾನೂನು ನೋಟೀಸ್‌ ನೀಡಿದ್ದರು. ಇದಕ್ಕೆ, ಉತ್ತರಿಸಿರುವ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್, ವಿವಾದಾತ್ಮಕ ಹೇಳಿಕೆಗಳನ್ನು ಪಕ್ಷವು ಅಧಿಕೃತವಾಗಿ ಹಿಂಪಡೆದಿದ್ದು, ಮುಖ್ಯ ನ್ಯಾಯಮೂರ್ತಿಗಳಿಗೆ ಬೇಷರತ್ ಕ್ಷಮಾಪಣೆ ಕೇಳಿದ್ದಾರೆ. ಜೊತೆಗೆ, ಈ ವಿವಾದಾತ್ಮಕ ಪೋಸ್ಟ್ ಪಕ್ಷದ ನಾಯಕತ್ವದ ಅನುಮತಿ ಅಥವಾ ಪೂರ್ವ ಜ್ಞಾನವಿಲ್ಲದೆ ಪ್ರಕಟಗೊಂಡಿತ್ತು ಎಂದು ಸ್ಪಷ್ಟಪಡಿಸಿರುವ ಕೆಪಿಸಿಸಿ, ಆ ಬೇಜವಾಬ್ದಾರಿ ಪೋಸ್ಟ್‌ಗೆ ಕಾರಣರಾದ ಡಿಜಿಟಲ್ ಕಮ್ಯುನಿಕೇಷನ್ ಸಿಬ್ಬಂದಿ ವಿಜಯ್ ತೊಟ್ಟತಿಲ್ ಎಂಬುವವರನ್ನು ತಕ್ಷಣವೇ ಜವಾಬ್ದಾರಿಯಿಂದ ಮುಕ್ತಗೊಳಿಸಿ, ವಜಾ ಮಾಡಲಾಗಿದೆ. ಅಲ್ಲದೆ ಅವರಿಗೂ ಸಾರ್ವಜನಿಕವಾಗಿ ಕ್ಷಮೆ ಕೇಳಲು ಸೂಚಿಸಲಾಗಿದ್ದು, ಈ ಹೇಳಿಕೆಯು ಕಾಂಗ್ರೆಸ್ ಪಕ್ಷದ ಅಥವಾ ಕೆಪಿಸಿಸಿಯ ಅಧಿಕೃತ ನಿಲುವಲ್ಲ. ನ್ಯಾಯಾಂಗದ ಘನತೆಯನ್ನು ನಾವು ಗೌರವಿಸುತ್ತೇವೆ ಎಂದು ತಿಳಿಸಿರುವ ಪಕ್ಷವು, ಇಂತಹ ಘಟನೆಗಳು ಮರುಕಳಿಸದಂತೆ ಸಾಮಾಜಿಕ ಜಾಲತಾಣದ ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟಾಟಾ ಸಮೂಹದಲ್ಲಿ ಬಿಕ್ಕಟ್ಟು: ಭಾರತೀಯ ಉದ್ಯಮಗಳು ನಿಮ್ಮ ಆಟದ ವಸ್ತುಗಳಲ್ಲ; ಪ್ರಧಾನಿ ಮೋದಿ-ಅಮಿತಾ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಆಂಧ್ರ ಪ್ರದೇಶದ ನರ್ಸಾಪುರ ಬಳಿ ಕರಾವಳಿ ದಾಟಿದ 'ಅರ್ನಬ್' ಚಂಡಮಾರುತ; ತೀವ್ರತೆ ಇಳಿಕೆ

ಪ್ರಾಜೆಕ್ಟ್ ಚೀತಾ ಯೋಜನೆಗೆ ಅತಿ ದೊಡ್ಡ ಹಿನ್ನೆಡೆ! ಕುನೋದಲ್ಲಿ ಬೇಟೆಗಾರರ ಗುಂಡಿಗೆ ಬಲಿಯಾಯ್ತಾ ಚೀತಾ ಮರಿ?

ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಅಕ್ರಮ: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಜೈಲಿನಿಂದ ಕೈದಿಗಳು ಪರಾರಿಯಾಗುವುದನ್ನು ತಡೆಯಲು ಬಂದೂಕು ಬಳಸಲು ತಮಿಳುನಾಡು ಕಾರಾಗೃಹ ಇಲಾಖೆ ಅನುಮತಿ!