ಆಂಧ್ರಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಆತಂಕ 
ದೇಶ

ಆಂಧ್ರಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಆತಂಕ; ನವೆಂಬರ್ 2ಕ್ಕೆ ಹವಾಮಾನ ವೈಪರೀತ್ಯದ ಮುನ್ಸೂಚನೆ!

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ನವೆಂಬರ್ 2ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ...

ಅಮರಾವತಿ: ಇತ್ತೀಚೆಗೆ ದಕ್ಷಿಣ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದ ಅರ್ನಬ್ ಚೆಂಡಮಾರುತದ ಬೆನ್ನಲ್ಲೇ ಆಂಧ್ರಪ್ರದೇಶಕ್ಕೆ ಮತ್ತೊಂದು ಆತಂಕ ಎದುರಾಗಿದ್ದು, ನವೆಂಬರ್ 2ರಂದು ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದ್ದು, ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಆತಂಕ ಎದುರಾಗಿದೆ.

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ನವೆಂಬರ್ 2ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಅಂಡಮಾನ್ ಸಮುದ್ರ, ಅದಕ್ಕೆ ಹೊಂದಿಕೊಂಡಿರುವ ಉತ್ತರ ಅಂಡಮಾನ್ ಸಮುದ್ರ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿ, ಇದೀಗ ಗುರುತಿಸಲ್ಪಟ್ಟ ವಾಯುಭಾರ ಕುಸಿತವಾಗಿ ಬದಲಾಗಿದೆ ಎಂದು ಹೇಳಲಾಗಿದೆ.

ಶನಿವಾರ ಬೆಳಗ್ಗೆ 5.30ರ ವೇಳೆಗೆ ಈ ಹವಾಮಾನ ವ್ಯವಸ್ಥೆಯು ಆಗ್ನೇಯ ಬಂಗಾಳಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸುತ್ತಮುತ್ತಲಿನ ಪ್ರದೇಶ ಹಾಗೂ ಅಂಡಮಾನ್ ಸಮುದ್ರದ ಮೇಲೆ ನೆಲೆಗೊಂಡಿತ್ತು ಎಂದು ಹವಾಮಾನ ಇಲಾಖೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ 12 ಗಂಟೆಗಳಲ್ಲಿ ಈ ವಾಯುಭಾರ ಕುಸಿತವು ಅದೇ ಪ್ರದೇಶದಲ್ಲಿ ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿ, ವಾಯುಭಾರ ಕುಸಿತದ ತೀವ್ರ ಸ್ವರೂಪವಾದ ಡಿಪ್ರೆಶನ್‌ (ತೀವ್ರ ವಾಯುಭಾರ ಕುಸಿತ) ಆಗಿ ಬದಲಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಈ ಹವಾಮಾನ ವ್ಯವಸ್ಥೆ ಮತ್ತಷ್ಟು ಬಲಗೊಂಡು ನವೆಂಬರ್ 2ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪ ತೀವ್ರಗೊಳ್ಳುವ ನಿರೀಕ್ಷೆಯಿದೆ. ಹೀಗಾಗಿ ಬಂಗಾಳಕೊಲ್ಲಿ ಹಾಗೂ ಆಂಧ್ರಪ್ರದೇಶ ಕರಾವಳಿ ಭಾಗಗಳಲ್ಲಿ ಹವಾಮಾನ ಬದಲಾವಣೆಗಳ ಮೇಲೆ ನಿಗಾ ಇಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಬ್ಲಾಕ್ ಆರು ಆರೋಪ ಪ್ರಸ್ತಾಪ; ವಜಾಗೊಳಿಸಲು, ದೇಶದ್ರೋಹದ ವಿಚಾರಣೆಗೆ ಒತ್ತಾಯ; Video

ರೈತರನ್ನು ಉಳಿಸಲು ಸಕ್ಕರೆ MSP ದರವನ್ನು ಕೇಂದ್ರ 50 ರೂ.ಗೆ ಏರಿಸಬೇಕು: ಸಿಎಂ ಡಿಕೆ ಶಿವಕುಮಾರ್

ಫೇಕ್ AI ವಿಡಿಯೋಗೂ ಸಬ್‌ಸ್ಕ್ರಿಪ್ಷನ್! ಗ್ಲಾಮರ್ ನೋಡಲು 400 ರೂ. ಕೊಡುತ್ತಾರೆ: ನಟಿ ರಿತಿಕಾ ಸಿಂಗ್ ಶಾಕ್!

Raptadu School Attack: 'ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ದಾಳಿ ನಡೆದು ಹೋಗಿತ್ತು'; ಭಯಾನಕ ಘಟನೆ ನೆನೆದು ಬಿಕ್ಕಿ ಬಿಕ್ಕಿ ಅತ್ತ ಶಿಕ್ಷಕಿ! Video

ವಿಚ್ಛೇದನ ಬೆನ್ನಲ್ಲೇ 2ನೇ ಮದುವೆಯಾದ ಒಮರ್ ಅಬ್ದುಲ್ಲಾ; ಪತ್ರಕರ್ತೆ ನಿಧಿ ಕೈಹಿಡಿದ ಕಾಶ್ಮೀರ CM!