ಇಂಡಿಗೋ ವಿಮಾನ 
ದೇಶ

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ಇಂದು ಬೆಳಗ್ಗೆ ಗೋವಾದ ಮನೋಹರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್‌ ಆದ ಇಂಡಿಗೋ ವಿಮಾನ 6E 2102, ಕೆಲವೇ ಕ್ಷಣಗಳಲ್ಲಿ ಗೋವಾಗೆ ವಾಪಸ್ ಆಗಿದ್ದು, ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ.

ನವದೆಹಲಿ: ಗೋವಾದಿಂದ ದೆಹಲಿಗೆ ಹೋಗುತ್ತಿದ್ದ ಇಂಡಿಗೋ ವಿಮಾನದ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ದಿಢೀರ್ ಆಫ್ ಆಗಿದ್ದು, ತಕ್ಷಣ ಎಚ್ಚೆತ್ತುಕೊಂಡ ಪೈಲೆಟ್ ಗೋವಾ ವಿಮಾನ ನಿಲ್ದಾಣದಲ್ಲಿಯೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಇಂದು ಬೆಳಗ್ಗೆ ಗೋವಾದ ಮನೋಹರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್‌ ಆದ ಇಂಡಿಗೋ ವಿಮಾನ 6E 2102, ಕೆಲವೇ ಕ್ಷಣಗಳಲ್ಲಿ ಗೋವಾಗೆ ವಾಪಸ್ ಆಗಿದ್ದು, ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಇಂಡಿಗೋ ವಿಮಾನ ಬೆಳಗ್ಗೆ 9:16ಕ್ಕೆ ಗೋವಾದಿಂದ ದೆಹಲಿಗೆ ಹೊರಟಿತ್ತು. ಆದರೆ ಟೇಕಾಫ್ ಆದ ಸ್ವಲ್ಪ ಸಮಯದ ನಂತರ, ವಿಮಾನದ ಎಂಜಿನ್‌ಗಳಲ್ಲಿ ಒಂದರಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಸಿಬ್ಬಂದಿ ತಕ್ಷಣ ಗೋವಾಗೆ ಯೂಟರ್ನ್‌ ತೆಗೆದುಕೊಂಡಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

`ಸೆಪ್ಟೆಂಬರ್‌ 1ರಂದು ಉತ್ತರ ಗೋವಾದಿಂದ ದೆಹಲಿಗೆ ತೆರಳುತ್ತಿದ್ದ 6E 2102 ವಿಮಾನದಲ್ಲಿ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಬಳಿಕ ಪೈಲಟ್‌ಗಳು ವಿಮಾನವನ್ನ ಹಿಂದಕ್ಕೆ ತಿರುಗಿಸಿ ಮನೋಹರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್‌ ಮಾಡಿದ್ದಾರೆ ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ ವಿಮಾನವು ನಿರ್ವಹಣಾ ತಪಾಸಣೆಗೆ ಒಳಪಡಿಸಲಾಗಿದೆ. ಅಗತ್ಯವಿರುವ ಎಲ್ಲಾ ಅನುಮತಿಗಳನ್ನ ಪಡೆದ ಬಳಿಕ ವಿಮಾನ ಮತ್ತೆ ಕಾರ್ಯಾಚರಣೆ ಆರಂಭಿಸಲಿದೆ ಎಂದು ಇಂಡಿಗೋ ತಿಳಿಸಿದೆ.

ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ವಿಮಾನಯಾನ ಸಂಸ್ಥೆ, ಪ್ರಯಾಣಿಕರಿಗೆ ಉಪಾಹಾರ ಸೇರಿದಂತೆ ಅಗತ್ಯ ನೆರವು ಒದಗಿಸಲಾಗಿದೆ ಮತ್ತು ಸಮಯೋಚಿತ ಮಾಹಿತಿಯನ್ನು ನೀಡಲಾಗಿದೆ. ಪ್ರಯಾಣಿಕರು ತಮ್ಮ ನಿಗದಿತ ಸ್ಥಾನ ತಲುಪಲು ಪರ್ಯಾಯ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ: ಓರ್ವ ಭಾರತೀಯ ಸೇರಿ 12 ಮಂದಿ ಸಾವು..!

ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳು ಬಂದ್? ಈ ಎರಡು ದಿನ ನಗರದಲ್ಲಿ ನಾನ್‌ವೆಜ್ ಸಿಗೋದು ಡೌಟ್! ಯಾಕೆ ಗೊತ್ತಾ?

ನೇಪಾಳ ಜಲಪ್ರಳಯ: 7ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 1,003ಕ್ಕೆ ಏರಿಕೆ, ಇನ್ನೂ ಸಿಗದ 3,916 ಜನರ ಸುಳಿವು..!

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧಾತಂಕ..!