ಸಾಂದರ್ಭಿಕ ಚಿತ್ರ 
ದೇಶ

ಹರಿಯಾಣ: ತರಬೇತಿ ವೇಳೆ ಮುಳುಗಿದ ದೋಣಿ; ಇಬ್ಬರು ಸೇನಾ ಕಮಾಂಡೋಗಳು ಕಣ್ಮರೆ! Video

ಸೇನೆ, ವಾಯುಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸರು ಮತ್ತು ಸ್ಥಳೀಯ ತಂಡಗಳ ನಿರಂತರ ಹುಡುಕಾಟದ ನಂತರ ಮೂವರನ್ನು ರಕ್ಷಿಸಲಾಗಿದೆ.

ಯಮುನಾನಗರ: ಹರಿಯಾಣದ ಯಮುನಾನಗರ ಜಿಲ್ಲೆಯ ಹತ್ನಿಕುಂಡ್ ಬ್ಯಾರೇಜ್‌ನಲ್ಲಿ ಮಂಗಳವಾರ ಜಂಟಿ ತರಬೇತಿ ಕವಾಯತು ನಡೆಸುತ್ತಿದ್ದ ವೇಳೆ ಐದು ಸೈನಿಕರನ್ನು ಹೊತ್ತ ನಹಾನ್ ಮೂಲದ ಮೋಟಾರ್ ದೋಣಿ ಸ್ಲೂಯಿಸ್ ಗೇಟ್‌ ಬಳಿ ಮಗುಚಿಬಿದ್ದಿದೆ.

ಸೇನೆ, ವಾಯುಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸರು ಮತ್ತು ಸ್ಥಳೀಯ ತಂಡಗಳ ನಿರಂತರ ಹುಡುಕಾಟದ ನಂತರ ಮೂವರನ್ನು ರಕ್ಷಿಸಲಾಗಿದೆ. ಆದರೆ ಲೈಫ್ ಜಾಕೆಟ್‌ ಧರಿಸಿದ್ದರ ಹೊರತಾಗಿಯೂ ಇಬ್ಬರು ಸೇನಾ ಕಮಾಂಡೋಗಳು ನಾಪತ್ತೆಯಾಗಿದ್ದಾರೆ.

ಘಟನೆ ಬಳಿಕ ನಾಪತ್ತೆಯಾಗಿರುವ ಸೈನಿಕನಿಗಾಗಿ ಸೇನೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ. ಯಮುನಾನಗರದ ತಂಡಗಳ ಜೊತೆಗೆ ನೆರೆಯ ಉತ್ತರ ಪ್ರದೇಶದಿಂದಲೂ ವಿಪತ್ತು ನಿರ್ವಹಣಾ ಸಿಬ್ಬಂದಿ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ.

ನಾಪತ್ತೆಯಾಗಿರುವ ಸೈನಿಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಘಟನೆಯ ನಿಖರ ಕಾರಣ ತಿಳಿಯಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ಸಂಘರ್ಷ-ಕಚ್ಚಾ ತೈಲ ಬೆಲೆ ಏರಿಕೆ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 789 ಅಂಕ ಇಳಿಕೆ, 24 ಸಾವಿರಕ್ಕಿಂತ ಕೆಳಗೆ ಕುಸಿದ Nifty

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನೇಪಾಳ ಪ್ರವಾಹ ಮಹಾ ದುರಂತ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ, ನಾಪತ್ತೆಯಾಗಿರುವ 4,858 ಮಂದಿಗಾಗಿ ಮುಂದುವರೆದ ಕಾರ್ಯಾಚರಣೆ..!

ಗೃಹಲಕ್ಷ್ಮಿ ನಕಲಿ ಖಾತೆಗಳಿಗೆ ಕಡಿವಾಣ: ಮನೆ-ಮನೆ ಸಮೀಕ್ಷೆಗೆ ಸರ್ಕಾರ ಮುಂದು, ಸಮೀಕ್ಷೆ ತಪ್ಪಿಸಿದ್ರೆ ನಿಲ್ಲಲಿದೆ 2,000 ರೂ. ಹಣ..!

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಜಸ್ಟ್ ಮಿಸ್; ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ 17 ಮಂದಿ ಕನ್ನಡಿಗರು!