ವಿಜಯ್ ಮತ್ತು ಪಳನಿಸ್ವಾಮಿ 
ದೇಶ

ಅಮೆರಿಕ ಅಧ್ಯಕ್ಷರಾಗಲಿ ಬಿಡಿ: TVK ಬೆಂಬಲಿಗರ ವಿಜಯ್‌ ಫಾರ್‌ PM ಘೋಷಣೆಗೆ ಪಳನಿಸ್ವಾಮಿ ವ್ಯಂಗ್ಯ

ಟಿವಿಕೆ ಬೆಂಬಲಿಗರು ವಿಜಯ್ ಅವರನ್ನು ಭಾವಿ ಪ್ರಧಾನ ಮಂತ್ರಿ ಎಂದು ಬಿಂಬಿಸುತ್ತಿರುವ ವರದಿಗಳಿಗೆ ಪ್ರತಿಕ್ರಿಯಿಸಿದ ಇಪಿಎಸ್​, ಇಂತಹ ಆಸೆಗಳನ್ನು ಇಟ್ಟುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾರ್ವಜನಿಕ ಸಂಪರ್ಕ ಅಭಿಯಾನ ಮತ್ತು ಚಾರ್ಟರ್ಡ್ ವಿಮಾನಗಳ ಬಳಕೆಯನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇಡಪ್ಪಾಡಿ ಕೆ. ಪಳನಿಸ್ವಾಮಿ ವ್ಯಂಗ್ಯವಾಡಿದ್ದು, ಟಿವಿಕೆ ನಾಯಕ ಅಮೆರಿಕ ಅಧ್ಯಕ್ಷರಾದರೂ ಆಗಬಹುದು ಎಂದು ಲೇವಡಿ ಮಾಡಿದ್ದಾರೆ.

ಟಿವಿಕೆ ಬೆಂಬಲಿಗರು ವಿಜಯ್ ಅವರನ್ನು ಭಾವಿ ಪ್ರಧಾನ ಮಂತ್ರಿ ಎಂದು ಬಿಂಬಿಸುತ್ತಿರುವ ವರದಿಗಳಿಗೆ ಪ್ರತಿಕ್ರಿಯಿಸಿದ ಇಪಿಎಸ್​, ಇಂತಹ ಆಸೆಗಳನ್ನು ಇಟ್ಟುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರವು ಆಡಳಿತದ ಮೇಲೆ ಗಮನ ಹರಿಸುವ ಬದಲು ಸಾಮಾಜಿಕ ಜಾಲತಾಣಗಳ ರೀಲ್ಸ್ ಮೇಲೆ ತನ್ನ ಗಮನ ಕೇಂದ್ರೀಕರಿಸಿದೆ, ವಿಜಯ್ ಅವರು ದುಬಾರಿ ಮುಖ್ಯಮಂತ್ರಿ ಎಂದು ಕರೆದಿದ್ದಾರೆ. ಅಷ್ಟೆ ಅಲ್ಲದೆ ವಿಜಯ್ ಅವರ ಪ್ರಯಾಣದ ವೆಚ್ಚವನ್ನು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಕಾರ್ಯವೈಖರಿಗೆ ಹೋಲಿಸಿ ವ್ಯತ್ಯಾಸ ತೋರಿಸಿದ್ದಾರೆ.

ಜಯಲಲಿತಾ ಅವರ ಆಡಳಿತಾವಧಿಯಲ್ಲಿ, ವೆಚ್ಚವನ್ನು ಕಡಿಮೆ ಮಾಡಲು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಜನೆಗಳನ್ನು ಉದ್ಘಾಟಿಸಲಾಗುತ್ತಿತ್ತು, ತಮ್ಮನ್ನು ಒಬ್ಬ ವಿನಮ್ರ ರೈತ ಎಂದು ಬಿಂಬಿಸಿಕೊಳ್ಳುವ ವಿಜಯ್, ಚಾರ್ಟರ್ಡ್ ವಿಮಾನಗಳನ್ನು ಬಳಸುವ ಅಗತ್ಯತೆಯನ್ನು ಪ್ರಶ್ನಿಸಿದ್ದಾರೆ. ವಿಜಯ್ ಪ್ರಧಾನ ಮಂತ್ರಿಯಾಗುವ ಸಾಧ್ಯತೆಯನ್ನು ತಳ್ಳಿಹಾಕಿದ ಇಪಿಎಸ್​, ಅವರು ಬೇಕಿದ್ದರೆ ಅಮೆರಿಕದ ಅಧ್ಯಕ್ಷರೂ ಆಗಬಹುದು ಎಂದು ಕುಟುಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನೇಪಾಳ ಪ್ರವಾಹ ಮಹಾ ದುರಂತ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ, ನಾಪತ್ತೆಯಾಗಿರುವ 4,858 ಮಂದಿಗಾಗಿ ಮುಂದುವರೆದ ಕಾರ್ಯಾಚರಣೆ..!

ಗೃಹಲಕ್ಷ್ಮಿ ನಕಲಿ ಖಾತೆಗಳಿಗೆ ಕಡಿವಾಣ: ಮನೆ-ಮನೆ ಸಮೀಕ್ಷೆಗೆ ಸರ್ಕಾರ ಮುಂದು, ಸಮೀಕ್ಷೆ ತಪ್ಪಿಸಿದ್ರೆ ನಿಲ್ಲಲಿದೆ 2,000 ರೂ. ಹಣ..!

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಜಸ್ಟ್ ಮಿಸ್; ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ 17 ಮಂದಿ ಕನ್ನಡಿಗರು!

ಏನಾದರೂ ಮಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲು ಅಶೋಕ-ವಿಜಯೇಂದ್ರ ಪಾದಯಾತ್ರೆ ನಡೆಸುತ್ತಿದ್ದಾರೆ: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ