ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಿಸಿದ ಬೀದಿ ನಾಯಿ 
ದೇಶ

ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ದುಷ್ಕರ್ಮಿಯ ಅಟ್ಟಾಡಿಸಿ ಓಡಿಸಿದ ಬೀದಿ ನಾಯಿ, Video ವೈರಲ್!

ಸೆಪ್ಟೆಂಬರ್ 3ರಂದು ತಮಿಳುನಾಡಿನ ಕೊಯಮತ್ತೂರಿನ ತುದಿಯಲೂರು ಸಮೀಪ ಈ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 16 ವರ್ಷದ ಅಪ್ರಾಪ್ತನನ್ನು ಕೊಯಮತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರ..

ಕೊಯಮತ್ತೂರು: ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಬೀದಿನಾಯಿಯೊಂದು ಅಟ್ಟಾಡಿಸಿ ಓಡಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಸೆಪ್ಟೆಂಬರ್ 3ರಂದು ತಮಿಳುನಾಡಿನ ಕೊಯಮತ್ತೂರಿನ ತುದಿಯಲೂರು ಸಮೀಪ ಈ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 16 ವರ್ಷದ ಅಪ್ರಾಪ್ತನನ್ನು ಕೊಯಮತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

ಮದ್ಯದ ಅಮಲಿನಲ್ಲಿದ್ದ ಎನ್ನಲಾದ ಆರೋಪಿ 30 ವರ್ಷದ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಲ್ಲಿದ್ದ ಬೀದಿ ನಾಯಿಗಳು ನಿರಂತರವಾಗಿ ಬೊಗಳಿ, ಆತನ ಮೇಲೆ ದಾಳಿಗೆ ಮುಂದಾಗಿವೆ. ನಾಯಿಗಳಿಂದ ಬೆದರಿದ ಆರೋಪಿ ಮಹಿಳೆಯನ್ನು ಬಿಟ್ಟು ಓಡಿಹೋಗಿದ್ದು, ನಾಯಿಗಳು ಆತನನ್ನು ಬೆನ್ನಟ್ಟಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಘಟನೆ ಸಮೀಪದ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಮಾನಸಿಕ ಅಸ್ವಸ್ಥೆ

ಘಟನೆ ಕುರಿತು ತನಿಖೆ ನಡೆಸಿದಾಗ 30 ವರ್ಷದ ಮಹಿಳೆಗೆ ಸಣ್ಣ ಮಟ್ಟದ ಬೆಳವಣಿಗೆ ಸಂಬಂಧಿತ ಸಮಸ್ಯೆ (mild developmental disorder) ಇರುವುದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್ 3ರಂದು ರಾತ್ರಿ ಸುಮಾರು 1.30ರ ವೇಳೆಗೆ ಮಹಿಳೆ ಮನೆಯ ಹೊರಗೆ ಬಂದಿದ್ದಾಗ ಆರೋಪಿ ಆಕೆಯ ಮೇಲೆ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ಯದ ಅಮಲಿನಲ್ಲಿದ್ದ ಆರೋಪಿ

CCTV ದೃಶ್ಯದಲ್ಲಿ ಮದ್ಯದ ಅಮಲಿನಲ್ಲಿದ್ದಂತೆ ಕಂಡುಬರುವ ಅಪ್ರಾಪ್ತ ಆರೋಪಿ ಮಹಿಳೆಯ ಮೇಲೆ ಮುಗಿಬಿದ್ದು ಆಕೆಗೆ ಕಿರುಕುಳ ನೀಡುತ್ತಿರುವುದು ಕಾಣಿಸುತ್ತದೆ.

ಈ ವೇಳೆ ರಸ್ತೆಯಲ್ಲಿದ್ದ ಬೀದಿ ನಾಯಿಗಳು ನಿರಂತರವಾಗಿ ಬೊಗಳುತ್ತಾ ಬಾಲಕನ ಸುತ್ತಲೂ ಓಡಾಡಿದ್ದು, ಆತನ ಕಾಲುಗಳಿಗೆ ಗೀರಲು ಮುಂದಾಗಿವೆ. ನಾಯಿಗಳ ನಿರಂತರ ಬೊಗಳುವಿಕೆಯಿಂದ ಬಾಲಕ ಮಹಿಳೆಯನ್ನು ಬಿಟ್ಟು ಓಡಲು ಆರಂಭಿಸಿದ್ದಾನೆ. ಬಳಿಕ ನಾಯಿಗಳು ಆತನನ್ನು ಬೆನ್ನಟ್ಟಿಕೊಂಡು ಹೋಗಿವೆ.

ದೌರ್ಜನ್ಯಕ್ಕೂ ಮುನ್ನ ಅಂಗಡಿಗೆ ಬೆಂಕಿ ಹಾಕಿದ್ದ ಆರೋಪಿ

ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಯತ್ನಿಸುವುದಕ್ಕೂ ಮುನ್ನ ಆರೋಪಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮದ್ಯದ ಅಮಲಿನಲ್ಲಿದ್ದ ಆತ ಅಂಗಡಿಯೊಂದಕ್ಕೆ ನುಗ್ಗಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ವೇಳೆ CCTV ದೃಶ್ಯಗಳನ್ನು ಪರಿಶೀಲಿಸಿದಾಗ ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

“ಸೆಪ್ಟೆಂಬರ್ 3ರಂದು ತುದಿಯಲೂರು ಸಮೀಪ ಮದ್ಯದ ಅಮಲಿನಲ್ಲಿದ್ದ 16 ವರ್ಷದ ಬಾಲಕ ಅಂಗಡಿಯೊಂದಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದ. ಈ ಪ್ರಕರಣದ ತನಿಖೆ ನಡೆಸುವ ವೇಳೆ CCTV ದೃಶ್ಯಗಳನ್ನು ಪರಿಶೀಲಿಸಿದಾಗ ಆತ 30 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದು ಪತ್ತೆಯಾಯಿತು” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಕೇಸ್ ದಾಖಲು

ಇನ್ನು ಈ ಅಪ್ರಾಪ್ತ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 74, 75 ಮತ್ತು 79 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಬಲಪ್ರಯೋಗ, ಲೈಂಗಿಕ ಕಿರುಕುಳ ಹಾಗೂ ಮಹಿಳೆಯ ಘನತೆಗೆ ಅವಮಾನ ಉಂಟುಮಾಡುವ ಉದ್ದೇಶದ ಮಾತು, ಸನ್ನೆ ಅಥವಾ ಕೃತ್ಯಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

ಯುಪಿ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಮಾಜ್: SP ನಾಯಕನ ವಿರುದ್ಧ FIR ದಾಖಲು! ಅಪಮಾನ ಎಂದ ಕಾಂಗ್ರೆಸ್!

'ಅಸಹ್ಯಕರ' ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್‌ ತರಾಟೆ!

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ