ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು Online Desk
ದೇಶ

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಈ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಸಾಗರ (ಮಧ್ಯಪ್ರದೇಶ): ಕೆಲ ಕುಡುಕರಿಗೆ ಎಣ್ಣೆ ಬೇಕು ಅಷ್ಟೇ.. ಅದು ಅಸಲಿ ಎಣ್ಣೆ ಆದರೂ ಓಕೆ ಇಲ್ಲ ನಕಲಿ ಎಣ್ಣೆ ಆದರೂ ಓಕೆ, ಒಟ್ಟಿನಲ್ಲಿ ಎಣ್ಣೆ ಬೇಕು.! ಹೀಗೆ ಎಣ್ಣೆ ಆರಿಸಿ ರಾತ್ರಿ ಹೊರಟ ಕುಡಕರು ಯಮನಪಾದ ಸೇರಿದ್ದಾರೆ. ಹೌದು, ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಈ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಸಾಗರ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಬಂದಾ ತೆಹಸಲ್ ವ್ಯಾಪ್ತಿಯ ಬರಾಜ್, ಘೂಘರ್, ನಾವ್‌ರಾಜ್ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈ ಘಟನೆ ಸಂಭವಿಸಿದ್ದು,  ಶನಿವಾರ ರಾತ್ರಿ ಮದ್ಯ ಸೇವಿಸಿದ್ದ ಗ್ರಾಮಸ್ಥರಿಗೆ ಭಾನುವಾರ ಮುಂಜಾನೆ ವೇಳೆಗೆ ತೀವ್ರ ತಲೆನೋವು, ವಾಂತಿ ಮತ್ತು ಕಣ್ಣು ಮಂಜಾಗುವಿಕೆ ಕಾಣಿಸಿಕೊಂಡಿದೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಬುಂದೇಲ್‌ಖಂಡ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ 12 ಮಂದಿ ಕೊನೆಯುಸಿರೆಳೆದಿದ್ದಾರೆ.

ಮುಂದುವರೆದು,  ಚಿಕಿತ್ಸೆ ನೀಡುತ್ತಿರುವ ವೈದ್ಯರ ಪ್ರಕಾರ, ಸಂತ್ರಸ್ತರ ದೇಹದಲ್ಲಿ ಸೈನೋಸಿಸ್ (ದೇಹ ಹಾಗೂ ಚರ್ಮ ನೀಲಿ ಬಣ್ಣಕ್ಕೆ ತಿರುಗುವುದು) ಮತ್ತು ಸ್ನಾಯು ಬಿಗಿತದ ಲಕ್ಷಣಗಳು ಕಂಡುಬಂದಿವೆ. ಮದ್ಯದಲ್ಲಿ ಅತ್ಯಂತ ವಿಷಪೂರಿತವಾದ ಮಿಥೈಲ್ ಆಲ್ಕೋಹಾಲ್ ಮಿಶ್ರಣವಾಗಿರುವ ಬಲವಾದ ಶಂಕೆಯನ್ನು ಮುಖ್ಯ ವೈದ್ಯಕೀಯ ಅಧಿಕಾರಿ ವ್ಯಕ್ತಪಡಿಸಿದ್ದಾರೆ. ಇನ್ನು, ಘಟನೆ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ 6 ಮದ್ಯದ ಅಂಗಡಿಗಳನ್ನು ಸೀಲ್ ಮಾಡಲಾಗಿದೆ.

ಏತನ್ಮಧ್ಯೆ, ಪ್ರಾಥಮಿಕ ತನಿಖೆಯಲ್ಲಿ ಈ ನಕಲಿ ಮದ್ಯದ ಜಾಲವು ಉತ್ತರ ಪ್ರದೇಶದ ಲಲಿತಪುರ ಗಡಿಯಿಂದ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ. ಆರೋಪಿಗಳು ಲಲಿತಪುರದಲ್ಲಿ ನಕಲಿ ಮದ್ಯ ತಯಾರಿಸಿ, ಅಸಲಿ ಬ್ರ್ಯಾಂಡ್‌ಗಳಂತೆ ಕಾಣುವಂತೆ ನಕಲಿ ಲೇಬಲ್‌ಗಳು, ಕ್ಯಾಪ್‌ಗಳು ಹಾಗೂ ನಕಲಿ ಕ್ಯೂಆರ್ ಕೋಡ್‌ಗಳನ್ನು ಬಾಟಲಿಗಳ ಮೇಲೆ ಅಂಟಿಸುತ್ತಿದ್ದರು. ನಂತರ ಕಾರು ಮತ್ತು ಬೈಕ್‌ಗಳ ಮೂಲಕ ಸಾಗರ್ ಜಿಲ್ಲೆಯ ಗಡಿ ಗ್ರಾಮಗಳಿಗೆ ಪೂರೈಸುತ್ತಿದ್ದರು ಎಂದು ತಿಳಿದುಬಂದಿದೆ. ಈ ದಂಧೆಯಲ್ಲಿ ಸ್ಥಳೀಯರ ಕೈವಾಡದ ಬಗ್ಗೆಯೂ ಪೊಲೀಸರು ಜಾಲಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!