ಪತ್ನಿಯನ್ನು ಕೊಂದು ಪತಿ 
ದೇಶ

ಭೀಕರ ಹತ್ಯೆ; ಕ್ಷುಲ್ಲಕ ಕಾರಣಕ್ಕೆ ಪತ್ನಿ ಕೊಲೆಗೈದು, ತಲೆ ಫ್ರಿಜ್‌ನಲ್ಲಿಟ್ಟು ಪತಿ ಪರಾರಿ, ಕೊನೆಗೂ ಶರಣಾದ ಆರೋಪಿ!

ಮೂಲಗಳ ಪ್ರಸೆಪ್ಟೆಂಬರ್ 6ರಂದು ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಗುವಾಹಟಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಂದ ಪಾಪಿ ಪತಿಯೋರ್ವ ಆಕೆಯ ರುಂಡವನ್ನು ಫ್ರಿಡ್ಜ್ ನಲ್ಲಿಟ್ಟು ಪರಾರಿಯಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಅಸ್ಸಾಂನ ಗುವಾಹತಿಯಲ್ಲಿ ಮದುವೆಯಾಗಿ ಕೆಲವೇ ತಿಂಗಳಾಗಿದ್ದ 25 ವರ್ಷದ ಮಹಿಳೆಯೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಭೀಕರವಾಗಿ ಹತ್ಯೆಯಾಗಿರುವ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರಿಯಾ ತಾಲುಕ್ದಾರ್ ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲಗಳ ಪ್ರಸೆಪ್ಟೆಂಬರ್ 6ರಂದು ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಳೆದ ಎರಡು ದಿನಗಳಿಂದ ದಂಪತಿ ಕಾಣಿಸಿಕೊಂಡಿರಲಿಲ್ಲ ಹಾಗೂ ಅವರ ಮೊಬೈಲ್ ಫೋನ್‌ಗಳೂ ಸ್ವಿಚ್‌ಆಫ್ ಆಗಿದ್ದವು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಆಕೆಯ ತಲೆ ಕಾಣೆಯಾಗಿತ್ತು. ಕೈ ಬೆರಳುಗಳಿಗೂ ಗಂಭೀರ ಗಾಯಗಳಾಗಿದ್ದವು. ನಂತರ ಪೊಲೀಸರು ಮನೆಯಲ್ಲಿ ಪರಿಶೀಲನೆ ನಡೆಸಿದಾಗ, ಫ್ರಿಜ್‌ನಲ್ಲಿ ಪಾಲಿಥಿನ್ ಚೀಲದಲ್ಲಿ ಇಡಲಾಗಿದ್ದ ಮಹಿಳೆಯ ತಲೆಯನ್ನು ಪತ್ತೆಹಚ್ಚಿದ್ದಾರೆ.

ಆರೋಪಿಗೆ ತೀವ್ರ ಶೋಧ

ಪೊಲೀಸರ ಪರಿಶೀಲನೆ ವೇಳೆ ಆಕೆಯ ಪತಿ ಮನೆಯಲ್ಲಿ ಇರಲಿಲ್ಲ. ಶುಕ್ರವಾರದಂದು ಆತನನ್ನು ಕೊನೆಯ ಬಾರಿ ನೋಡಿದ್ದಾಗಿ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಮೃತದೇಹ ಹಾಗೂ ಪತ್ತೆಯಾದ ತಲೆಯನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು.

ಪೊಲೀಸರಿಗೆ ಶರಣಾದ ಆರೋಪಿ

ಭಾನುವಾರ ರಾತ್ರಿ ಮೃತೆಯ ಪತಿ ಪೊಲೀಸರಿಗೆ ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ತನಿಖಾಧಿಕಾರಿಗಳು ಆರೋಪಿಯ ಹೇಳಿಕೆಯನ್ನು ದಾಖಲಿಸಿಕೊಂಡು, ಆತ ನೀಡುವ ಮಾಹಿತಿಯನ್ನು ಇದುವರೆಗೆ ಸಂಗ್ರಹಿಸಿರುವ ಸಾಕ್ಷ್ಯಗಳೊಂದಿಗೆ ಪರಿಶೀಲಿಸುವ ನಿರೀಕ್ಷೆಯಿದೆ.

ಹತ್ಯೆಯ ಹಿಂದಿನ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಅಲ್ಲದೆ, ಆರೋಪಿ ಪೊಲೀಸರಿಗೆ ಶರಣಾಗಲು ಕಾರಣವೇನು ಎಂಬ ಬಗ್ಗೆಯೂ ಯಾವುದೇ ವಿವರ ನೀಡಿಲ್ಲ.

ಘಟನೆಗೆ ಸಂಬಂಧಿಸಿದ ಸಂಪೂರ್ಣ ಸರಣಿ, ಹತ್ಯೆಯ ಹಿಂದಿನ ಕಾರಣ ಹಾಗೂ ಪ್ರಕರಣದಲ್ಲಿ ಬೇರೆಯವರ ಪಾತ್ರ ಏನಾದರೂ ಇದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ ಕಟ್ಟಡ ದುರಂತ: ಮೃತರ ಸಂಖ್ಯೆ 7ಕ್ಕೆ ಏರಿಕೆ; ತಲೆಮರೆಸಿಕೊಂಡಿರುವ PG ಮಾಲೀಕನ ವಿರುದ್ಧ Lookout Notice ಜಾರಿ, ಇಂದು High courtನಲ್ಲಿ ತುರ್ತು ವಿಚಾರಣೆ..!

‘ಓವರ್‌ಟೇಕ್‌ ಎಡವಟ್ಟು, ಮೂರೇ ಸೆಕೆಂಡ್ ನಲ್ಲಿ ದುರಂತ!’; ಮಂಡ್ಯದಲ್ಲಿ ಭೀಕರ ಕಾರು ಅಪಘಾತ: ಮಹಿಳೆ ಸಾವು, Video Viral

ಬಿಜೆಪಿಯವರು 'ಹಣ ಕೊಟ್ಟು ಪಾದಯಾತ್ರೆ' ನಡೆಸ್ತಾ ಇದ್ದಾರೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ! Video

Devi Awards 2026: ಮಹಿಳೆಯರನ್ನು ಕೇವಲ ಫಲಾನುಭವಿಗಳಾಗಿ ನೋಡುವ ಬದಲು ಅಭಿವೃದ್ಧಿಯ ಪಾಲುದಾರರು, ನಾಯಕಿಯರನ್ನಾಗಿ ಪರಿಗಣಿಸಬೇಕು- ಒಡಿಶಾ ಡಿಸಿಎಂ

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ: ಅಮೆರಿಕಾಕ್ಕೆ Iran ಖಡಕ್ ಸಂದೇಶ..!