ಪ್ರಧಾನಿ ನರೇಂದ್ರ ಮೋದಿ  
ದೇಶ

ಮೊದಲ ಬಾರಿ ಬುಕ್‌ಮೈಶೋನಲ್ಲಿ ಮೋದಿ ಕಾರ್ಯಕ್ರಮಕ್ಕೆ ಬುಕಿಂಗ್; ಒಂದೇ ಗಂಟೆಯಲ್ಲಿ ಎಲ್ಲ ಸೀಟ್ ಭರ್ತಿ! ವೇಟಿಂಗ್ ಎಷ್ಟು ಗೊತ್ತಾ?

ಗುಜರಾತ್ ನಲ್ಲಿ 35,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ನಾಳೆ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.

ವಡೋದರಾ: ಇದೇ ಮೊದಲ ಬಾರಿಗೆ ಗುಜರಾತ್ ನ ವಡೋದರಾದಲ್ಲಿ ಮಂಗಳವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಬುಕ್‌ಮೈಶೋ ಈವೆಂಟ್ ಟಿಕೆಟಿಂಗ್ ಪ್ಲಾಟ್‌ಫಾರ್ಮ್ ಮೂಲಕ ಉಚಿತ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಒಂದು ಗಂಟೆಯೊಳಗೆ ಎಲ್ಲಾ ಸೀಟುಗಳನ್ನು ಕಾಯ್ದಿರಿಸಲಾಗಿದೆ.

ಗುಜರಾತ್ ನಲ್ಲಿ 35,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ನಾಳೆ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.

ಇದೇ ಮೊದಲ ಬಾರಿಗೆ, ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಬುಕ್‌ಮೈಶೋ ಮೂಲಕ ಉಚಿತ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ನೋಂದಣಿಗಳನ್ನು ನಿರ್ವಹಿಸಲು ಖಾಸಗಿ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಬಳಸುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನೋಂದಣಿ ಪ್ರಾರಂಭವಾದ ಒಂದು ಗಂಟೆಯೊಳಗೆ ಎಲ್ಲಾ ಸೀಟುಗಳು ಬುಕ್ ಆಗಿದ್ದು, ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದ್ದು, ಇನ್ನೂ ಸುಮಾರು 42,000ಕ್ಕೂ ಹೆಚ್ಚು ಜನರು ವೇಯ್ಟಿಂಗ್ ಲಿಸ್ಟ್​​ನಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಕ್ರಮವು ತಂತ್ರಜ್ಞಾನ ಆಧಾರಿತ ಡಿಜಿಟಲ್ ಪ್ರವೇಶ ವ್ಯವಸ್ಥೆಯನ್ನು ಹೊಂದಿರಲಿದೆ. ನೋಂದಾಯಿತ ಸಾರ್ವಜನಿಕರು ತಮ್ಮ ಬುಕ್‌ಮೈಶೋ ಖಾತೆಯಲ್ಲಿ ಕ್ಯೂಆರ್ ಕೋಡ್ ಹೊಂದಿರುವ ‘ಎಂ-ಟಿಕೆಟ್’ ಪಡೆಯಲಿದ್ದಾರೆ. ಪ್ರವೇಶ ದ್ವಾರದಲ್ಲಿ ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪರಿಶೀಲಿಸಲಾಗುತ್ತದೆ. ನಂತರವೇ ಜನರನ್ನು ಒಳಗೆ ಬಿಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

SC/ST ಪ್ರಕರಣ; ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್: 14 ದಿನ ನ್ಯಾಯಾಂಗ ಬಂಧನ!

72 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್: ಇದೇ ಮೊದಲ ಬಾರಿಗೆ ದೆಹಲಿ ಬದಲು ಗುಜರಾತ್‌ನಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ!

‘ಎದ್ದು ನಿಲ್ಲೋಕೆ ಆಗ್ತಿಲ್ವಾ?’; DMK ಶಾಸಕನಿಗೆ ಸಿಎಂ ವಿಜಯ್ ನೆರವು, 'ಏನ್ರೋ ನಡೀತಿದೆ' ಎಂದ ಉದಯನಿಧಿ ಸ್ಟಾಲಿನ್ ! Video

ಬಿ. ನಾಗೇಂದ್ರಗೆ ಬಿಗ್ ಶಾಕ್​: ಮಾಜಿ ಸಚಿವರನ್ನು ಮತ್ತೆ ತೀವ್ರ ವಿಚಾರಣೆಗೆ ಒಳಪಡಿಸಿದ ED; ಮರು ವಿಚಾರಣೆ ಯಾಕೆ?