ಪೊಲೀಸ್ ಗಸ್ತು ವಾಹನ 
ದೇಶ

ಪೊಲೀಸ್ ಗಸ್ತು ವಾಹನವೇ ಕಳವು! ಜನರಿಗೆ ರಕ್ಷಣೆ ಇನ್ನು ಎಲ್ಲಿ?

ಕರ್ತವ್ಯದ ನಂತರ ಗಸ್ತು ತಂಡ 'ಇನೋವಾ' ಕಾರನ್ನು ಕರೀಂನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿತ್ತು. ಬಳಿಕ ಠಾಣೆಯ ಆವರಣದಿಂದ ಕಾರು ನಾಪತ್ತೆಯಾಗಿರುವುದು ಕಂಡುಬಂದಿತು,

ಕರೀಂನಗರ: ಪೊಲೀಸ್ ಠಾಣೆಯೊಂದರಲ್ಲಿ ನಿಲ್ಲಿಸಲಾಗಿದ್ದ ಗಸ್ತು ವಾಹನವೇ ಕಳುವಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಕರೀಂನಗರದಲ್ಲಿ ಈ ಘಟನೆ ನಡೆದಿದ್ದು, ಜನರಿಗೆ ರಕ್ಷಣೆ ಇನ್ನು ಎಲ್ಲಿ? ಎಂಬ ಅನುಮಾನ ಶುರುವಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕಳುವಾಗಿದ್ದ ವಾಹನವನ್ನು ಮಂಗಳವಾರ ಮುಂಜಾನೆ ಪತ್ತೆಹಚ್ಚಿ ವಶಕ್ಕೆ ಪಡೆಯಲಾಯಿತು ಎಂದು ಅವರು ಹೇಳಿದ್ದಾರೆ.

ಕರ್ತವ್ಯದ ನಂತರ ಗಸ್ತು ತಂಡ 'ಇನೋವಾ' ಕಾರನ್ನು ಕರೀಂನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿತ್ತು. ಬಳಿಕ ಠಾಣೆಯ ಆವರಣದಿಂದ ಕಾರು ನಾಪತ್ತೆಯಾಗಿರುವುದು ಕಂಡುಬಂದಿತು, ಇದರಿಂದಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಎಜಾಜ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ಸಂಘರ್ಷ ಮತ್ತಷ್ಟು ತೀವ್ರ: ಇಂಧನ ಟ್ಯಾಂಕರ್ ಗಳ ಮೇಲಿನ ದಾಳಿಗೆ ಸೇಡು, ಅಮೆರಿಕದ Submarine ಸೀಜ್ ಮಾಡಿದ ಇರಾನ್!

ಈ ದಶಕದ ಅಂತ್ಯಕ್ಕೆ AI ನಮ್ಮನ್ನೆಲ್ಲಾ ಕೊಲ್ಲುತ್ತೆ: Anthropic ಸಂಶೋಧಕನ ರಾಜೀನಾಮೆ; ಸುರಕ್ಷತಾ ಕಾರ್ಯನಿರ್ವಾಹಕರಿಂದಲೂ ಬೆಂಬಲ!

ಸಂಸಾರ, ಸಿಮ್ ಕಾರ್ಡ್, CID ಬಲೆ: ನಾಪತ್ತೆಯಾಗಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿನಿಯರು 8 ತಿಂಗಳ ಬಳಿಕ ಪತ್ತೆ; ಒಬ್ಬಳು ಗರ್ಭಿಣಿ!

KBCಗೆ ಅಮಿತಾಬ್ ಬಚ್ಚನ್ ವಿದಾಯ? ಈ ಬಗ್ಗೆ ಬಿಗ್ ಬಿ ಹೇಳಿದ್ದೇನು?