ಚಿನ್ಮಯ ಕೃಷ್ಣ ದಾಸ್  
ದೇಶ

ತಾಯಿಯ ಅಂತ್ಯಕ್ರಿಯೆಗೆ ಚಿನ್ಮಯ್ ಕೃಷ್ಣ ದಾಸ್‌ಗೆ 5 ಗಂಟೆಗಳ ಪೆರೋಲ್‌: ರಾಧಾ-ಕೃಷ್ಣ ಮೂರ್ತಿಯ ಪಾದ ಸ್ಪರ್ಶಿಸಿ ಕಣ್ಣೀರಿಡುತ್ತಿರುವ ವಿಡಿಯೋ ವೈರಲ್!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಜೈಲಿನಲ್ಲಿದ್ದ ಮಗನನ್ನು ಕೊನೆ ಬಾರಿ ನೋಡಬೇಕೆಂಬ ಬಯಸಿದ್ದರು. ಆದರೆ ಬದುಕಿದ್ದಾಗ ತಾಯಿಯನ್ನು ನೋಡಲು ಅಧಿಕಾರಿಗಳು ಅನುಮತಿ ನೀಡದಿರುವುದು ಕುಟುಂಬಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಢಾಕಾ: ಬಾಂಗ್ಲಾದೇಶದಲ್ಲಿ ಜೈಲುವಾಸ ಅನುಭವಿಸುತ್ತಿರುವ ಪ್ರಮುಖ ಹಿಂದೂ ಮುಖಂಡ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ತಮ್ಮ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸ್ಥಳೀಯ ಆಡಳಿತ ಕೇವಲ 5 ಗಂಟೆಗಳ ಕಾಲ ಷರತ್ತುಬದ್ಧ ಪೆರೋಲ್ ಮಂಜೂರು ಮಾಡಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಜೈಲಿನಲ್ಲಿದ್ದ ಮಗನನ್ನು ಕೊನೆ ಬಾರಿ ನೋಡಬೇಕೆಂಬ ಬಯಸಿದ್ದರು. ಆದರೆ ಬದುಕಿದ್ದಾಗ ತಾಯಿಯನ್ನು ನೋಡಲು ಅಧಿಕಾರಿಗಳು ಅನುಮತಿ ನೀಡದಿರುವುದು ಕುಟುಂಬಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಚಿನ್ಮಯ್ ಕೃಷ್ಣ ದಾಸ್ ಅವರ 71 ವರ್ಷದ ತಾಯಿ ಸಂಧ್ಯಾ ರಾಣಿ ಧಾರ್ ಅವರು ಹತ್‌ಹಜಾರಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿ ಗಂಭೀರ ಸ್ಥಿತಿಯಲ್ಲಿದ್ದಾಗ ಮಗನ ಭೇಟಿಗೆ ಪೆರೋಲ್ ನೀಡುವಂತೆ ಕುಟುಂಬಸ್ಥರು ಚಟ್ಟೋಗ್ರಾಮ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಆದರೆ ಅನಾರೋಗ್ಯ ಪೀಡಿತ ಸಂಬಂಧಿಕರನ್ನು ಭೇಟಿ ಮಾಡಲು ಪೆರೋಲ್ ನೀಡುವ ಅವಕಾಶವಿಲ್ಲ ಎಂದು ಆಡಳಿತ ಅರ್ಜಿ ತಿರಸ್ಕರಿಸಿತ್ತು.

ತಾಯಿ ನಿಧನರಾದ ನಂತರವಷ್ಟೇ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಚಟ್ಟೋಗ್ರಾಮ್ ಜಿಲ್ಲಾಧಿಕಾರಿ ಮೊಹಮ್ಮದ್ ಜಾಹಿದುಲ್ ಇಸ್ಲಾಂ ಮಿಯಾ ಅವರು 5 ಗಂಟೆಗಳ ಪೆರೋಲ್ ಮಂಜೂರು ಮಾಡಿದರು.

ಪೆರೋಲ್ ಪಡೆದು ಹೊರಬಂದ ಚಿನ್ಮಯ್ ದಾಸ್, ಚಟ್ಟೋಗ್ರಾಮ್‌ನ ಪುಂಡರೀಕ ಧಾಮ್ ದೇವಾಲಯದಲ್ಲಿ ರಾಧಾ-ಕೃಷ್ಣ ಮೂರ್ತಿಯ ಪಾದ ಸ್ಪರ್ಶಿಸಿ ಕಣ್ಣೀರಿಡುತ್ತಿರುವ ಭಾವುಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಅದೇ ಆವರಣದಲ್ಲಿ ಸಂಧ್ಯಾ ರಾಣಿ ಅವರ ಅಂತ್ಯಕ್ರಿಯೆ ನೆರವೇರಿತು.

‘ಬಾಂಗ್ಲಾದೇಶ ಸಮ್ಮಿಲಿತ ಸನಾತನಿ ಜಾಗರಣ ಜ್ಯೋತ್’ ಸಂಘಟನೆಯ ವಕ್ತಾರರಾಗಿದ್ದ ಚಿನ್ಮಯ್ ಕೃಷ್ಣ ದಾಸ್ ಅವರನ್ನು 2024ರ ನವೆಂಬರ್‌ನಲ್ಲಿ ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿತ್ತು. ಶೇಖ್ ಹಸೀನಾ ಅವರ ಸರ್ಕಾರದ ಪತನದ ಬಳಿಕ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಇವರು ಹಲವು ಪ್ರತಿಭಟನೆಗಳನ್ನು ಮುನ್ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS Business Forum 2026: ಭಾರತದ ಮಾರುಕಟ್ಟೆ ಬೃಹತ್, ವೇಗವಾಗಿ ಬೆಳೆಯುತ್ತಿದೆ; ಬಲಿಷ್ಠ ಆರ್ಥಿಕ ಸಹಭಾಗಿತ್ವಕ್ಕೆ ಸೂಕ್ತ ರಾಷ್ಟ್ರ: ವಿದೇಶಾಂಗ ಸಚಿವ ಜೈಶಂಕರ್

ಭಾರತ–ಚೀನಾ ಸಂಬಂಧ; ಭೂಮಿಯ ಲೋಹಗಳು, ವೀಸಾ, ಹೂಡಿಕೆ; ಕ್ಸಿ-ಜಿನ್ ಪಿಂಗ್-ಪ್ರಧಾನಿ ಮೋದಿ ಮಾತುಕತೆ ಅಜೆಂಡಾ ಏನು?

BRICS ಶೃಂಗಸಭೆ: ದೆಹಲಿಗೆ ಆಗಮಿಸಿದ Vladimir Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ, ಭಾರತ-ರಷ್ಯಾ ಸ್ನೇಹಕ್ಕೆ ಮತ್ತಷ್ಟು ಬಲ..!

'Brand Bengaluru'ಯೋಜನೆಗೆ ಬಿಗ್ ಬೂಸ್ಟ್: ಸಿಲಿಕಾನ್ ಸಿಟಿ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡಲು GBA ಮಾಸ್ಟರ್ ಪ್ಲ್ಯಾನ್!

ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ; ಚಿಂದಿ ಆಯುವವರು ಕೂಡ ಅದನ್ನು ತಗೊಳ್ಳಲ್ಲ- ಶ್ರೀರಾಮುಲು