ಮೆಟ್ಟಿಲುಗಳ ಮೇಲೆ ಜಾರಿ ಬಿದ್ದ ಬಾಲಕಿ 
ದೇಶ

ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ದುರಂತ ಸಾವು, Video Viral

9 ವರ್ಷದ ವನಿಕಾ ಎಂಬ ಬಾಲಕಿ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲುಗಳ ಮೇಲೆ ಹೋಗುತ್ತಿದ್ದಾಗ ಆಕೆ ಕಾಲು ಜಾರಿ ಮುಖವನ್ನು ಕೆಳಗೆ ಕೊಟ್ಟ ಬಿದ್ದಿದ್ದಾಳೆ.

ಶಾದ್‌ನಗರ: ಶಾಲೆಯ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು 9 ವರ್ಷದ 4ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರದಲ್ಲಿ ನಡೆದಿದೆ.

ಶಾದ್‌ನಗರದ ಇಂಡಿಯನ್ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

9 ವರ್ಷದ ವರ್ಣಿಕಾ ಎಂಬ ಬಾಲಕಿ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲುಗಳ ಮೇಲೆ ಹೋಗುತ್ತಿದ್ದಾಗ ಆಕೆ ಕಾಲು ಜಾರಿ ಮುಖವನ್ನು ಕೆಳಗೆ ಕೊಟ್ಟ ಬಿದ್ದಿದ್ದಾಳೆ. ಇದರಿಂದ ಆಕೆಗೆ ಗಂಭೀರ ಗಾಯವಾಗಿದ್ದು, ಶಾಲಾ ಸಿಬ್ಬಂದಿ ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೇ ವನಿಕಾ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಘಟನೆಯಲ್ಲಿ ಬಾಲಕಿಯ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಳೆ.

ವಿಡಿಯೋ ವೈರಲ್

ಶಾಲೆಯ ಮೆಟ್ಟಿಲಿನ ಸಮೀಪ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದೆ. ಬಾಲಕಿ ಮೆಟ್ಟಿಲಿನಿಂದ ಜಾರಿ ಬೀಳುವ ದೃಶ್ಯ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಶಾದ್‌ನಗರ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video

'ಒಳ ಉಡುಪಿನಲ್ಲಿ ಆ ದೃಶ್ಯ ಮಾಡಿ ಅಂದ್ರು': ಬಾಲಿವುಡ್ ನಿರ್ದೇಶಕರ ಕರಾಳ ಮುಖ ಬಿಚ್ಚಿಟ್ಟ ನಟಿ ರಾಧಿಕಾ ಆಪ್ಟೆ!

ದೆಹಲಿ ವಿವಿ ಚುನಾವಣೆ ಫಲಿತಾಂಶ ಪ್ರಕಟ: 4 ಹುದ್ದೆಗಳ ಪೈಕಿ 3ರಲ್ಲಿ ABVP ಭರ್ಜರಿ ಜಯ; ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಪಕ್ಷೇತರ!

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

'ಅಣ್ಣಾ ಅನ್ನಿಸ್ಕೋಬೇಕು ಅಂದ್ರೆ ತಮ್ಮನಿಗೆ ಕೆಲ ಬೆಲೆ ಇರಬೇಕು': 'ಮಾಡ್ರನ್ ಮಹಾಕವಿ' ಮಂಜುಗೆ 'ಕಿಚ್ಚ' ಫುಲ್ ಕ್ಲಾಸ್