ಮಮತಾ ಬ್ಯಾನರ್ಜಿ online desk
ದೇಶ

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಅವರು ಅಧಿಸೂಚನೆ ಹೊರಡಿಸುತ್ತಾರೆ, ಆದರೆ, ಅಧಿಸೂಚನೆ ಜಾರಿಯಲ್ಲಿರುವಾಗಲೇ ಚುನಾವಣಾ ಚಿಹ್ನೆಯನ್ನು ಸ್ಥಗಿತಗೊಳಿಸುತ್ತಾರೆ. ಇಲ್ಲಿ ಏನು ನಡೆಯುತ್ತಿದೆ? ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡಬೇಕು.

ನವದೆಹಲಿ: ಟಿಎಂಸಿ ಹೆಸರು ಮತ್ತು ಪಕ್ಷದ ಚಿಹ್ನೆಯನ್ನು ಮುಟ್ಟುಗೋಲು ಹಾಕಿರಪುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.

ಮಮತಾ ಬ್ಯಾನರ್ಜಿ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ಪ್ರಸ್ತಾಪಿಸಿ, ಅರ್ಜಿಯನ್ನು ಶೀಘ್ರ ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದರು.

ಅವರು ಅಧಿಸೂಚನೆ ಹೊರಡಿಸುತ್ತಾರೆ, ಆದರೆ, ಅಧಿಸೂಚನೆ ಜಾರಿಯಲ್ಲಿರುವಾಗಲೇ ಚುನಾವಣಾ ಚಿಹ್ನೆಯನ್ನು ಸ್ಥಗಿತಗೊಳಿಸುತ್ತಾರೆ. ಇಲ್ಲಿ ಏನು ನಡೆಯುತ್ತಿದೆ? ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡಬೇಕು ಎಂದು ಮನವಿ ಮಾಡಿದರು.

ಪಕ್ಷದ ಎರಡು ಬಣಗಳ ನಡುವಿನ ವಿವಾದದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಶುಕ್ರವಾರ ಎರಡೂ ಬಣಗಳಿಗೆ ಪ್ರತ್ಯೇಕ ಹೆಸರು ಮತ್ತು ಚಿಹ್ನೆಗಳನ್ನು ನೀಡಿತ್ತು.

ಇದಕ್ಕೂ ಒಂದು ದಿನ ಮೊದಲು ಹೊರಡಿಸಿದ್ದ ಮಧ್ಯಂತರ ಆದೇಶದಲ್ಲಿ, ವಿವಾದದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಎರಡೂ ಬಣಗಳು ‘ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್’ ಎಂಬ ಹೆಸರನ್ನು ಹಾಗೂ ಪಕ್ಷದ ಮೀಸಲು ಚುನಾವಣಾ ಚಿಹ್ನೆಯನ್ನು ಬಳಸುವುದನ್ನು ಚುನಾವಣಾ ಆಯೋಗ ನಿರ್ಬಂಧಿಸಿತ್ತು.

ಗುರುವಾರ ರಾತ್ರಿ ಹೊರಡಿಸಿದ ಮಧ್ಯಂತರ ಆದೇಶದಲ್ಲಿ, ಚುನಾವಣಾ ಚಿಹ್ನೆಗಳ (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968ರ ಅಡಿಯಲ್ಲಿ ಈ ವಿವಾದಕ್ಕೆ ಸಮಗ್ರ ವಿಚಾರಣೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಮಮತಾ ಬ್ಯಾನರ್ಜಿ ಮತ್ತು ಅರೂಪ್ ರಾಯ್ ನೇತೃತ್ವದ ಪ್ರತಿಸ್ಪರ್ಧಿ ಬಣಗಳ ಪ್ರತಿನಿಧಿಗಳ ವಾದ ಆಲಿಸಿದ ಬಳಿಕ ಆಯೋಗ ಈ ಮಧ್ಯಂತರ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!