ಸಿಸಿಟಿವಿ ದೃಶ್ಯ 
ದೇಶ

ಗಣೇಶೋತ್ಸವದ ಅನ್ನದಾನ ಕಾರ್ಯಕ್ರಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು..! Video

ಸುಜಾತಾ ಸಾಂಬಾರ್ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಸಾಂಬಾರ್ ತುಂಬಿದ್ದ ದೊಡ್ಡ ಪಾತ್ರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ವಿಜಯವಾಡ: ಗಣೇಶ ಚತುರ್ಥಿ ಅಂಗವಾಗಿ ಆಯೋಜಿಸಿದ್ದ ಅನ್ನದಾನ ಕಾರ್ಯಕ್ರಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ತುಂಬಿದ್ದ ಪಾತ್ರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ವಿಜಯವಾಡದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸುಜಾತಾ ಎಂದು ಗುರುತಿಸಲಾಗಿದೆ. ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಅನ್ನದಾನ ಕಾರ್ಯಕ್ರಮದ ಅಡುಗೆ ವ್ಯವಸ್ಥೆಯಲ್ಲಿ ಅವರು ಸಹಕರಿಸುತ್ತಿದ್ದರು ಎಂದು ಪೊಲೀಸರು ಹಾಗೂ ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಸುಜಾತಾ ಸಾಂಬಾರ್ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಸಾಂಬಾರ್ ತುಂಬಿದ್ದ ದೊಡ್ಡ ಪಾತ್ರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಘಟನೆ ಗಮನಕ್ಕೆ ಬರುತ್ತಿದ್ದಂತೆಯೇ ಕಾರ್ಯಕ್ರಮದ ಆಯೋಜಕರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ. ದೇಹದ ಹಲವು ಭಾಗಗಳಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಅವರ ಆರೋಗ್ಯ ಸ್ಥಿತಿ ಬಳಿಕ ಮತ್ತಷ್ಟು ಹದಗೆಟ್ಟಿದ್ದು, ಸೋಮವಾರ ಬೆಳಿಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬೀಳಲು ಕಾರಣವೇನು ಎಂಬುದನ್ನು ಪರಿಶೀಲಿಸುತ್ತಿದ್ದಾರೆ.

ಸದ್ಯ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಪ್ರಕರಣವನ್ನು ಆಕಸ್ಮಿಕ ಸಾವು ಎಂದು ಪರಿಗಣಿಸಲಾಗಿದ್ದು, ಪೊಲೀಸರ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ

'ಚೀಟಿಂಗ್ ಸಮರ್ಥಿಸುತ್ತಿಲ್ಲ.. ಆದ್ರೆ ವ್ಯವಸ್ಥೆ ಸರಿಯಾಗಬೇಕು, ಸಾಹಿಲ್ ಸಾವಿಗೆ ನ್ಯಾಯಬೇಕು': ಪ್ರತಿಭಟನಾ ನಿರತ IIT Bombay ವಿದ್ಯಾರ್ಥಿಗಳು!

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 ‘ಟ್ರಂಪ್ ಟಿವಿ’ ಸ್ಟ್ರೀಮಿಂಗ್ ಆರಂಭ..!

ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ ಮಹಾ ಚರ್ಚೆ; ಸರ್ಕಾರದ ನಿಲುವೇನು..?

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!