ಕೋಯಲ್ ನದಿ (ಸಂಗ್ರಹ ಚಿತ್ರ) 
ದೇಶ

ಹಬ್ಬದ ಸಂಭ್ರಮದ ನಡುವೆ ದುರಂತ; ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!

ಬುಧವಾರ ಕೊಯೆಲ್ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚೈನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಕಾಯಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಲಮು: ಬುಡಕಟ್ಟು ಸಮುದಾಯದ ಪ್ರಮುಖ ಹಬ್ಬವಾದ ಕರಮ್‌ಗಾಗಿ ಪೂಜಿಸಲಾಗಿದ್ದ ಮರದ ಕೊಂಬೆಯನ್ನು ನದಿಯಲ್ಲಿ ವಿಸರ್ಜಿಸುವ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ಪಾಲಮು ಜಿಲ್ಲೆಯಲ್ಲಿ ನಡೆದಿದೆ.

ಬುಧವಾರ ಕೊಯೆಲ್ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚೈನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಕಾಯಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಸರಹುಲ್ ಬಳಿಕದ ಪ್ರಮುಖ ಬುಡಕಟ್ಟು ಹಬ್ಬಗಳಲ್ಲಿ ಒಂದಾದ ಕರಮ್ ಹಬ್ಬವನ್ನು ಮಂಗಳವಾರ ಆಚರಿಸಲಾಗಿತ್ತು. ಹಬ್ಬದ ಅಂಗವಾಗಿ ಪೂಜಿಸಲಾಗಿದ್ದ ಕರಮ್ ಮರದ ಕೊಂಬೆಯನ್ನು ನದಿಯಲ್ಲಿ ವಿಸರ್ಜಿಸುವ ಮೂಲಕ ಹಬ್ಬದ ಆಚರಣೆ ಅಂತ್ಯಗೊಳ್ಳುತ್ತದೆ ಎಂದು ಹೇಳಲಾಗಿದೆ.

ಅದರಂತೆ ಐವರು ಕರಮ್ ಮರದ ಕೊಂಬೆಯನ್ನು ನದಿಯಲ್ಲಿ ವಿಸರ್ಜಿಸಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿ ಐವರೂ ನೀರಿನಲ್ಲಿ ಮುಳುಗಿದ್ದಾರೆ ಎಂದು ಪಾಲಮು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಪಿಲ್ ಚೌಧರಿ ತಿಳಿಸಿದ್ದಾರೆ.

ನದಿಯಲ್ಲಿ ಶೋಧ ಕಾರ್ಯ ನಡೆಸಿ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಆರ್ಥಿಕ ಸಂಕಷ್ಟದಲ್ಲಿ ರಾಜ್ಯ ಸರ್ಕಾರ: ಯಾವ ಯೋಜನೆ ಕೈಬಿಡಬೇಕು, ಯಾವುದು ಜಾರಿಗೆ ತರಬೇಕೆಂಬುದು ನನಗೆ ಗೊತ್ತು; ಹಣಕಾಸು ಇಲಾಖೆ ಸಲಹೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆ

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ' ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು!