ಶ್ರೀಕಾಕುಳಂನಲ್ಲಿ ರೈಲು ಅಪಘಾತ (AI ರಚಿತ ಚಿತ್ರ) 
ದೇಶ

ಆಂಧ್ರದಲ್ಲಿ ಭೀಕರ ದುರಂತ: ಹಳಿ ಮೇಲೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ರೈಲು ಢಿಕ್ಕಿ; 4 ಸಾವು, ಓರ್ವ ಗಂಭೀರ! Video

ತೆಕ್ಕಲಿ ಮಂಡಲದ ರವಿವಲಸಾ ಬಳಿ ಇಂದು ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ರೈಲು ಹಳಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಜ್ಯ ರಾಣಿ ಎಕ್ಸ್‌ಪ್ರೆಸ್‌ ಅವರಿಗೆ ಡಿಕ್ಕಿ ಹೊಡೆದಿದೆ..

ಶ್ರೀಕಾಕುಳಂ: ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಗುಂಪಿಗೆ ರೈಲು ಢಿಕ್ಕಿಯಾದ ಪರಿಣಾಮ 4 ಮಂದಿ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಸಂಭವಿಸಿದೆ.

ಇಲ್ಲಿನ ತೆಕ್ಕಲಿ ಮಂಡಲದ ರವಿವಲಸಾ ಬಳಿ ಇಂದು ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ರೈಲು ಹಳಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಜ್ಯ ರಾಣಿ ಎಕ್ಸ್‌ಪ್ರೆಸ್‌ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಈ ದುರ್ಘಟನೆಯಲ್ಲಿ ನಾಲ್ವರು ಇಂಟರ್‌ಮೀಡಿಯೇಟ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ವಿಶಾಖರಾವ್, ದಿಲೀಪ್ ಕುಮಾರ್, ಶಿವ ಮತ್ತು ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಸಾಲ್ಮನ್ ರಾಜ್ ಎಂಬ ಗಾಯಾಳುವನ್ನು ಚಿಕಿತ್ಸೆಗಾಗಿ ತೆಕ್ಕಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂತ್ರ ವಿಸರ್ಜನೆಗೆ ಹೋಗಿದ್ದ ವೇಳೆ ದುರಂತ

ಮೂಲಗಳ ಪ್ರಕಾರ ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗೆ ಎಂದು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರೈಲು ಹಳಿ ದಾಟಲು ಮುಂದಾಗಿದ್ದ ರೈಲು ಹಿಂದಿನಿಂದ ಢಿಕ್ಕಿಯಾಗಿದೆ ಎನ್ನಲಾಗಿದೆ.

ರಾಮ್ ಮೋಹನ್ ನಾಯ್ಡು ಸಂತಾಪ

ಘಟನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ರೈಲ್ವೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಂದ ಅಪಘಾತದ ಕುರಿತು ಮಾಹಿತಿ ಪಡೆದುಕೊಂಡ ಅವರು, ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಗಾಯಗೊಂಡಿರುವ ವಿದ್ಯಾರ್ಥಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಸಿಎಂ ಚಂದ್ರಬಾಬು ನಾಯ್ಡು ಆಘಾತ

ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆಗೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ದುರಂತಕರವಾಗಿದ್ದು, ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಅಪಘಾತದ ಕುರಿತು ಅಧಿಕಾರಿಗಳಿಂದ ಚಂದ್ರಬಾಬು ನಾಯ್ಡು ಮಾಹಿತಿ ಪಡೆದರು. ವಿದ್ಯಾರ್ಥಿಗಳು ರೈಲು ಬರುತ್ತಿರುವುದನ್ನು ಗಮನಿಸದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.

ಗಾಯಾಳುವಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆಯೂ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ

ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೊಂದು ಶಾಕ್; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!

'ಪಾಕಿಸ್ತಾನಕ್ಕೆ ಸರಿಯಾದ ಸಲಹೆ ನೀಡಿ': ಜಮ್ಮು- ಕಾಶ್ಮೀರ ಕುರಿತ ಹೇಳಿಕೆ ಬಗ್ಗೆ OIC ಗೆ ಭಾರತದ ತಿರುಗೇಟು!

ಗಂಡನಿಗೆ ಗೊತ್ತಾಗದಂತೆ ಹೆಂಡತಿ ಅಕೌಂಟ್‌ಗೆ 2 ಸಾವಿರ ಹಾಕ್ತೀವಿ ಅಂದಿದ್ದ ಸರ್ಕಾರಕ್ಕೆ ಈಗ ಯಜಮಾನನ ಆಧಾರ್ ಯಾಕೆ ಬೇಕು?