ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ Online Desk
ದೇಶ

ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ! ಸುಂಕ ಸಂಘರ್ಷದ ನಡುವೆ G20 ಶೃಂಗಸಭೆಯಲ್ಲಿ ಟ್ರಂಪ್ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ?

ಪ್ರಧಾನಿ ಮೋದಿ ಅವರು ಇದೇ ಡಿಸೆಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಫ್ಲೋರಿಡಾದ ಮಿಯಾಮಿಯಲ್ಲಿರುವ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅವರು ಈ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ಸುಮಾರು ಒಂದೂವರೆ ವರ್ಷದ ತರುವಾಯು ಪ್ರಧಾನಿ ನರೇಂದ್ರ ಮೋದಿಯವರು ಇದೇ ಡಿಸೆಂಬರ್ ತಿಂಗಳಿನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಈ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 14 ಮತ್ತು 15 ರಂದು ಫ್ಲೋರಿಡಾದ ಮಿಯಾಮಿ ರೆಸಾರ್ಟ್‌ನಲ್ಲಿ ನಡೆಯಲಿರುವ G20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅಮೆರಿಕಕ್ಕೆ ತೆರಳಲಿದ್ದು, ಈ ವೇಳೆಯೇ, ಕ್ವಾಡ್ ನಾಯಕರ ಸಭೆಯು ನಡೆಯಲಿದೆ ಎಂದು ವರದಿಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಈ ಬಾರಿ ಜಿ-20 ಶೃಂಗಸಭೆ ನಡೆಯುತ್ತಿದ್ದು, ಇದರ ಮಧ್ಯೆ ಪ್ರಧಾನಿ ಮೋದಿ ಮತ್ತು ಟ್ರಂಪ್ ನಡುವೆ ಪ್ರಮುಖ ದ್ವಿಪಕ್ಷೀಯ ಮಾತುಕತೆ ನಡೆಯುವ ನಿರೀಕ್ಷೆಯಿದೆ. ಅದರಲ್ಲೂ, ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಆಮದುಗಳ ಮೇಲೆ ನೂರರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಎಚ್ಚರಿಕೆ ನೀಡಿರುವ ಸಮಯದಲ್ಲೇ ಈ ಸಂಭಾವ್ಯ ಭೇಟಿ ಚರ್ಚೆಗೆ ಬಂದಿದೆ. ಈ ಹಿಂದೆ ಜೂನ್ ತಿಂಗಳಲ್ಲಿ ಫ್ರಾನ್ಸ್‌ನ ಇವಿಯಾನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಮೋದಿ ಮತ್ತು ಟ್ರಂಪ್ ಭೇಟಿಯಾಗಿದ್ದರು. ವ್ಯಾಪಾರ, ರಕ್ಷಣೆ, ಇಂಧನ ಹಾಗೂ ತಂತ್ರಜ್ಞಾನ ಕ್ಷೇತ್ರದ ಸಹಕಾರದ ಬಗ್ಗೆ ಉಭಯ ನಾಯಕರು ನಿರಂತರ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಸ್ತುತ 240 ಬಿಲಿಯನ್ ಡಾಲರ್ ಇರುವ ದ್ವಿಪಕ್ಷೀಯ ವ್ಯಾಪಾರವನ್ನು 500 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಎರಡೂ ದೇಶಗಳು ಹೊಂದಿವೆ.

ಮುಂದುವರೆದು, ಪ್ರಧಾನಿ ಮೋದಿಯವರ ಪ್ರವಾಸದ ಕುರಿತು ಭಾರತ ಸರ್ಕಾರದ ವಿದೇಶಾಂಗ ಇಲಾಖೆಯಿಂದ ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದಾಗ್ಯೂ, ಅವರ ಭೇಟಿಗೆ ಸಂಬಂಧಿಸಿದಂತೆ ರಾಜತಾಂತ್ರಿಕ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ ಎಂದು ಈ ವಿಷಯದ ಬಗ್ಗೆ ಮಾಹಿತಿ ಇರುವ ಮೂಲಗಳು ಸ್ಪಷ್ಟಪಡಿಸಿವೆ. ಇದರೊಂದಿಗೆ, ಜಿ-20 ಶೃಂಗಸಭೆಯ ನೇಪಥ್ಯದಲ್ಲೇ, ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳನ್ನೊಳಗೊಂಡ ಕ್ವಾಡ್ (Quad) ಒಕ್ಕೂಟದ ನಾಯಕರ ಶೃಂಗಸಭೆಯನ್ನು ಸಹ ನಡೆಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ಕೃತಕ ಬುದ್ಧಿಮತ್ತೆ (AI) ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಜಾಗತಿಕ ಸಹಕಾರದ ಬಗ್ಗೆ ಇಲ್ಲಿ ಚರ್ಚೆ ನಡೆಯಬಹುದು. ಏತನ್ಮಧ್ಯೆ, ಅಮೆರಿಕ ಪ್ರವಾಸದ ಜೊತೆಜೊತೆಗೆ ಪ್ರಧಾನಿ ಮೋದಿಯವರು ಎರಡು ದಿನಗಳ ಕಾಲ ಕೆನಡಾಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದ್ದು, ಈ ವೇಳೆ ಪ್ರಧಾನಿ ಮಾರ್ಕ್ ಕಾರ್ನಿ ಅವರೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಗಳ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

ಜಪಾನ್ ವಿರುದ್ಧ ಗೋಲ್ಡನ್ ಡಕ್; Unwanted Record ಸೃಷ್ಟಿಸಿದ ಅಭಿಷೇಕ್ ಶರ್ಮಾ: ಈ ದಾಖಲೆ ಮುರಿಯುವುದು ಯಾರಿಗೂ ಅಸಾಧ್ಯ!

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!