ಮುಸ್ಲಿಂ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ-ಅಖಿಲೇಶ್ ಯಾದವ್ 
ದೇಶ

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯಕ್ಕೆ ಪಕ್ಷದಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು, 2027ರ ಚುನಾವಣೆಗೆ ಮುಸ್ಲಿಂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಲಖನೌ: ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್ ಯಾದವ್ ಗೆ ಹೊಸದೊಂದು ಆಘಾತ ಎದುರಾಗಿದ್ದು, ಮುಸ್ಲಿಂ ವ್ಯಕ್ತಿಯನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಗಡುವು ನೀಡಲಾಗಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಮುಸ್ಲಿಂ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಟೀಕೆ ತೀವ್ರಗೊಳಿಸಿದ್ದಾರೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯಕ್ಕೆ ಪಕ್ಷದಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು, 2027ರ ಚುನಾವಣೆಗೆ ಮುಸ್ಲಿಂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಡಿಯೋವೊಂದರಲ್ಲಿ ಮಾತನಾಡಿರುವ ಶಹಾಬುದ್ದೀನ್, ಉತ್ತರ ಪ್ರದೇಶದಲ್ಲಿ ಯಾದವ ಸಮುದಾಯಕ್ಕಿಂತ ಮುಸ್ಲಿಂ ಜನಸಂಖ್ಯೆ ಹೆಚ್ಚಿದೆ ಎಂದು ಹೇಳಿ, ಅಖಿಲೇಶ್ ಯಾದವ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಏಕೆ ಬಿಂಬಿಸಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಶೇ.22, ಯಾದವರು ಕೇವಲ ಶೇ.7. ಹಾಗಿದ್ದರೆ ಅಖಿಲೇಶ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಏಕೆ?” 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರಲ್ಲೇ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಪ್ರಶ್ನಿಸುವ ಅಖಿಲೇಶ್ ನಮ್ಮ ಪ್ರಶ್ನೆಗೆ ಉತ್ತರಿಸಲಿ

ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಅಖಿಲೇಶ್ ಯಾದವ್ ಆಗಾಗ್ಗೆ ಉತ್ತರ ಕೇಳುತ್ತಾರೆ. ಆದರೆ ತಮ್ಮ ಬಳಿ ಕೇಳಲಾಗುತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿಲ್ಲ ಎಂದು ಶಹಾಬುದ್ದೀನ್ ಆರೋಪಿಸಿದ್ದಾರೆ.

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಮುಸ್ಲಿಂ ಸಮುದಾಯದವರೊಬ್ಬರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ಅಖಿಲೇಶ್ ಯಾದವ್ ಅವರನ್ನು ಕೇಳಲಾಗಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ವಕ್ಫ್ ಆಸ್ತಿಗಳ ವಿಚಾರವನ್ನೂ ಶಹಾಬುದ್ದೀನ್ ಪ್ರಸ್ತಾಪಿಸಿದ್ದು, ಸಮಾಜವಾದಿ ಪಕ್ಷದ ನಾಯಕರಿಗೆ ಸಂಬಂಧಿಸಿದಂತೆ ವಕ್ಫ್ ಆಸ್ತಿಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಅಖಿಲೇಶ್ ಯಾದವ್ ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿಯೂ ಪ್ರಶ್ನೆಗಳನ್ನು ಕೇಳಲಾಗಿದ್ದರೂ ಯಾವುದೇ ಉತ್ತರ ಬಂದಿಲ್ಲ ಎಂದು ಆರೋಪಿಸಿದ್ದಾರೆ.

30 ದಿನಗಳ ಗಡುವು

ಉತ್ತರ ಪ್ರದೇಶದ ಸುಮಾರು 150 ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಮರು ಪ್ರಮುಖ ಸಮುದಾಯವಾಗಿದ್ದಾರೆ ಎಂದು ಶಹಾಬುದ್ದೀನ್ ಹೇಳಿದ್ದಾರೆ. ಹೀಗಾಗಿ ಸಮಾಜವಾದಿ ಪಕ್ಷವು 150 ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಈಡೇರಿಸಲು ಅಖಿಲೇಶ್ ಯಾದವ್ ಅವರಿಗೆ 30 ದಿನಗಳ ಗಡುವನ್ನೂ ಶಹಾಬುದ್ದೀನ್ ನೀಡಿದ್ದಾರೆ. ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಉತ್ತರ ಪ್ರದೇಶದ ಮುಸ್ಲಿಮರು ಅಖಿಲೇಶ್ ಯಾದವ್ ವಿರುದ್ಧ ಅಭಿಯಾನ ಆರಂಭಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಈ ಬೇಡಿಕೆಗಳು ಮತ್ತು ಅಂಕಿಅಂಶಗಳು ಶಹಾಬುದ್ದೀನ್ ಅವರ ಹೇಳಿಕೆಗಳಾಗಿವೆ.

2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಅದರ ಮುಸ್ಲಿಂ ಬೆಂಬಲದ ನೆಲೆಯ ನಡುವಿನ ಸಂಬಂಧದ ಕುರಿತು ರಾಜಕೀಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಹೇಳಿಕೆಗಳು ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಹಬ್ಬದ ಸಂಭ್ರಮದ ನಡುವೆ ದುರಂತ; ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!

ಆರ್ಥಿಕ ಸಂಕಷ್ಟದಲ್ಲಿ ರಾಜ್ಯ ಸರ್ಕಾರ: ಯಾವ ಯೋಜನೆ ಕೈಬಿಡಬೇಕು, ಯಾವುದು ಜಾರಿಗೆ ತರಬೇಕೆಂಬುದು ನನಗೆ ಗೊತ್ತು; ಹಣಕಾಸು ಇಲಾಖೆ ಸಲಹೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆ

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್