ಅಭಿಜೀತ್ ದೀಪ್ಕೆ 
ದೇಶ

'ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ': ದೇಶ ದ್ರೋಹಿ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಲಿ; 48 ಗಂಟೆಗಳ ಗಡುವು ನೀಡಿದ CJP!

48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಅಭಿಜೀತ್ ದೀಪ್ಕೆ, ಒಂದು ವೇಳೆ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ(SIR), ಕೇಂದ್ರೀಕೃತ ಐಟಿ ನಿಯಂತ್ರಣ ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಚುನಾವಣಾ ಆಯೋಗದ(ECI) ಮುಖ್ಯಸ್ಥರು ಹಾಗೂ ಸದಸ್ಯರ ನಡುವೆ ಆಂತರಿಕ ಭಿನ್ನಾಭಿಪ್ರಾಯ ಮತ್ತು ಅಸಮಾಧಾನ ಇದೆ ಎಂಬ ವರದಿಗಳ ಬೆನ್ನಲ್ಲೇ 'ಕಾಕ್ರೋಚ್ ಜನತಾ ಪಾರ್ಟಿ'ಯ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರು ಗುರುವಾರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಅಭಿಜೀತ್ ದೀಪ್ಕೆ, ಒಂದು ವೇಳೆ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೀಪ್ಕೆ, ಜ್ಞಾನೇಶ್ ಕುಮಾರ್‌ ಅತಿ ದೊಡ್ಡ ದೇಶದ್ರೋಹಿ. ಬಿಜೆಪಿ ನಿರ್ದೇಶನದಂತೆ ಅವರು ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಆಯೋಗದ ಕಾರ್ಯವೈಖರಿಯು ಮತದಾನದ ಹಕ್ಕನ್ನು ದುರ್ಬಲಗೊಳಿಸಿದೆ. ಇದು ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಸಿಜೆಪಿ (CJP) ತನ್ನ ಪ್ರತಿಭಟನೆಯನ್ನು ಮುಂದುವರಿಸಲಿದೆ ಎಂದು ಅವರು ಹೇಳಿದರು.

"ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು, ಸಿಇಸಿ (CEC) ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲೇಬೇಕು," ಎಂದು ದೀಪ್ಕೆ ಆಗ್ರಹಿಸಿದ್ದಾರೆ.

"ಒಂದು ವೇಳೆ 48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ, ಕಾಕ್ರೋಚ್ ಜನತಾ ಪಾರ್ಟಿಯು ದೇಶಾದ್ಯಂತ ಪ್ರತಿಭಟನೆಯನ್ನು ಆರಂಭಿಸಲಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ," ಎಂದಿದ್ದಾರೆ.

ಜೂನ್‌ನಲ್ಲಿ ಜಂತರ್ ಮಂತರ್‌ನಲ್ಲಿ ನಡೆಸಿದ ಪ್ರತಿಭಟನೆಯ ಮಾದರಿಯಲ್ಲೇ ಈ ಪ್ರಸ್ತಾಪಿತ ಪ್ರತಿಭಟನೆಯೂ ಇರಲಿದೆ ಎಂದು ಸಿಜೆಪಿ ಎಚ್ಚರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?

ಕೋಲಾರ: ಚೆನ್ನೈ - ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!