ಸಿಇಸಿ ಜ್ಞಾನೇಶ್ ಕುಮಾರ್ 
ದೇಶ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ವಿಪಕ್ಷಗಳು: ಸಂಸತ್ತಿನ ಉಭಯ ಸದನಗಳಲ್ಲಿ ಮಹಾಭಿಯೋಗ ನಿರ್ಣಯ ಮಂಡಿಸಲು ಮುಂದು!

ಸಂಸತ್ತಿನ ಅಧಿವೇಶನ ನಡೆಯದಿರುವಾಗಲೂ ಈ ನೋಟಿಸ್‌ಗಳನ್ನು ಸಲ್ಲಿಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಚುನಾವಣಾ ಆಯೋಗದ ವಿರುದ್ಧದ ವಿವಾದ ಹಾಗೂ ಎಸ್ ಐಆರ್ ಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನ ಉಭಯ ಸದನಗಳಲ್ಲಿ ಮಹಾಭಿಯೋಗ (Impeachment) ನಿರ್ಣಯ ಮಂಡಿಸಲು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಈ ನಿರ್ಣಯದ ಕರಡನ್ನು ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿಯೂ ನೋಟಿಸ್‌ಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.

ಸಂಸತ್ತಿನ ಅಧಿವೇಶನ ನಡೆಯದಿರುವಾಗಲೂ ಈ ನೋಟಿಸ್‌ಗಳನ್ನು ಸಲ್ಲಿಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣಾ ಆಯೋಗ ಮತ್ತು ಎಸ್ ಐಆರ್ ಪ್ರಕ್ರಿಯೆ ಸುತ್ತ ವಿವಾದಗಳು ಭುಗಿಲೆದ್ದಿರುವಂತೆಯೇ ಈ ಹಿಂದೆ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು.

ಚುನಾವಣಾ ಆಯೋಗದ ಕಾರ್ಯ ನಿರ್ವಹಣೆ ಹಾಗೂ ಎಸ್ ಐಆರ್ ಪ್ರಕ್ರಿಯೆಗೆ ವಿಚಾರದಲ್ಲಿ ರಾಜಕೀಯ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಈ ಹೊಸ ಬೆಳವಣಿಗೆ ನಡೆದಿದೆ.

ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಮತದಾರರ ಪಟ್ಟಿ ಕಾರ್ಯವಿಧಾನ ಮತ್ತು SIR ಗೆ ಸಂಬಂಧಿಸಿದ ನಿರ್ಧಾರಗಳು, ಆದೇಶಗಳಿಗೆ 10 ತಿಂಗಳುಗಳಲ್ಲಿ ಕನಿಷ್ಠ 14 ಬಾರಿ ಔಪಚಾರಿಕವಾಗಿ ಆಕ್ಷೇಪಣೆಗಳನ್ನು ಎತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ನಂತರ ಇದು ವಿವಾದ ಹುಟ್ಟುಹಾಕಿತು.

ಮತದಾರರ ಸೇರ್ಪಡೆ ಮತ್ತು ಡಿಲೀಟ್, ಮತದಾರರ ದತ್ತಾಂಶ ನಿರ್ವಹಣೆ ಮತ್ತು ಮತದಾರರ ನೋಂದಣಿ ಪ್ರಕ್ರಿಯೆಗೆ ಬದಲಾವಣೆಗಳು ಸೇರಿದಂತೆ ಸಮಸ್ಯೆಗಳಿಗೆ ಆಕ್ಷೇಪಣೆಗಳು ಸಂಬಂಧಿಸಿವೆ ಎಂದು ವರದಿ ಹೇಳಿದೆ.

ಈ ವರದಿಯನ್ನು ಉಲ್ಲೇಖಿಸಿ ವಿರೋಧ ಪಕ್ಷಗಳು ಕುಮಾರ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸುತ್ತಿವೆ ಅವರನ್ನು ತೆಗೆದುಹಾಕುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಇತರ ವಿರೋಧ ಪಕ್ಷದ ನಾಯಕರು ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ನಿರ್ಧಾರಗಳು ಸರ್ವಾನುಮತದಿಂದ ಕೂಡಿದ್ದವು ಎಂದು ಚುನಾವಣಾ ಆಯೋಗ ಹೇಳಿದೆ.

ಆಂತರಿಕ ಚರ್ಚೆಗಳ ಸಮಯದಲ್ಲಿ ಅಭಿಪ್ರಾಯಗಳು ಮತ್ತು ಅವಲೋಕನಗಳಲ್ಲಿನ ವ್ಯತ್ಯಾಸಗಳು ಬಹು-ಸದಸ್ಯ ಸಾಂವಿಧಾನಿಕ ಸಂಸ್ಥೆಯ ಕಾರ್ಯನಿರ್ವಹಣೆಯ ಸಾಮಾನ್ಯ ಭಾಗವಾಗಿದೆ ಎಂದು ಆಯೋಗ ಹೇಳಿದೆ. SIR ಗೆ ಸಂಬಂಧಿಸಿದ ನಿರ್ಧಾರಗಳು ಸೇರಿದಂತೆ ಎಲ್ಲಾ ಅಂತಿಮ ನಿರ್ಧಾರಗಳನ್ನು ಮೂವರು ಚುನಾವಣಾ ಆಯುಕ್ತರ ಅನುಮೋದನೆಯೊಂದಿಗೆ ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಅದು ವಾದಿಸಿದೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಮತದಾರರ ದತ್ತಾಂಶ ನಿರ್ವಹಣೆಯಂತಹ ವಿಷಯಗಳ ಬಗ್ಗೆ ಸಂಧು ಮತ್ತು ಜೋಶಿ ಕಳವಳ ವ್ಯಕ್ತಪಡಿಸಿದ್ದರು ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಆದರೆ, ಈ ಕಳವಳಗಳು ಆಯೋಗದ ಅಂತಿಮ ನಿರ್ಧಾರಗಳೊಂದಿಗಿನ ಭಿನ್ನಾಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿವೆ.

ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗದೊಳಗಿನ ನಿರ್ಧಾರಗಳನ್ನು ಅಂತಿಮವಾಗಿ ಒಮ್ಮತ ಅಥವಾ ಬಹುಮತದ ಮೂಲಕವೇ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. "ಯಾವುದೇ ನಿರ್ಧಾರವನ್ನು ಕೈಗೊಳ್ಳುವಾಗ ಅದು ಒಮ್ಮತ ಅಥವಾ ಬಹುಮತದ ಆಧಾರದ ಮೇಲೆಯೇ ಇರಬೇಕು ಎಂದು ರಾವತ್ 'ಎಎನ್‌ಐ' (ANI) ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ': ದೇಶ ದ್ರೋಹಿ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಲಿ; 48 ಗಂಟೆಗಳ ಗಡುವು ನೀಡಿದ CJP!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿಗರ ಗಡೀಪಾರು!

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?