ಸಾಂದರ್ಭಿಕ ಚಿತ್ರ 
ದೇಶ

ನಾಗಾಲ್ಯಾಂಡ್‌: ಕಳ್ಳಭಟ್ಟಿ ಸಾರಾಯಿ ಸೇವಿಸಿ 19 ಮಂದಿ ಸಾವು; ತನಿಖೆಗೆ ವಿಶೇಷ ತಂಡ ರಚನೆ

ಕಳೆದ ಎರಡು ದಿನಗಳಲ್ಲಿ ಮೊಕೊಕ್‌ಚುಂಗ್ ಜಿಲ್ಲೆಯಲ್ಲಿ ಎಂಟು ಮತ್ತು ಟುಯೆನ್‌ಸಾಂಗ್ ಜಿಲ್ಲೆಯಲ್ಲಿ 11 ಮಂದಿ ಶಂಕಿತ ಅಕ್ರಮ ಮದ್ಯ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಹಿಮಾ: ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ನಾಗಾಲ್ಯಾಂಡ್‌ನಲ್ಲಿ ನಡೆದಿದೆ. ಶಂಕಿತ ಕಲಬೆರಕೆ ಮದ್ಯದ ಮೂಲ ಮತ್ತು ಪೂರೈಕೆ ಜಾಲವನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಮೊಕೊಕ್‌ಚುಂಗ್ ಜಿಲ್ಲೆಯಲ್ಲಿ ಎಂಟು ಮತ್ತು ಟುಯೆನ್‌ಸಾಂಗ್ ಜಿಲ್ಲೆಯಲ್ಲಿ 11 ಮಂದಿ ಶಂಕಿತ ಅಕ್ರಮ ಮದ್ಯ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಐ. ಬಂಗ್ಲಾಂಗ್ ಚಾಂಗ್ ನೇತೃತ್ವದ ಈ ವಿಶೇಷ ತನಿಖಾ ತಂಡಕ್ಕೆ , ಸಾವುಗಳ ಕುರಿತು ತನಿಖೆ ನಡೆಸುವ ಹಾಗೂ ಶಂಕಿತ ಕಲಬೆರಕೆ ಮದ್ಯದ ಮೂಲ ಮತ್ತು ಪೂರೈಕೆ ಜಾಲವನ್ನು ಪತ್ತೆಹಚ್ಚುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವೆಸುಪ್ರಾ ಕೆಜೊ ಶನಿವಾರ ತಿಳಿಸಿದರು.

ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಲು ಮದ್ಯದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಗುವಾಹಟಿಗೆ ಕಳುಹಿಸಲಾಗಿದೆ. "ನಮಗೆ ಕೆಲವು ಸುಳಿವುಗಳು ಲಭ್ಯವಾಗಿವೆ, ಆದರೆ ಈ ಹಂತದಲ್ಲಿ ವಿವರಗಳನ್ನು ಬಹಿರಂಗಪಡಿಸುವುದು ಅವಸರದ ಕ್ರಮವಾಗುತ್ತದೆ," ಎಂದು ಕೆಜೊ ಹೇಳಿದರು.

ಘಟನೆ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಐ.ಬಂಗ್ಲಾಂಗ್ ಚಾಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಕಲಬೆರಕೆಯ ಮದ್ಯ ಎಲ್ಲಿಂದ ಪೂರೈಕೆಯಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ವೆಸುಪ್ರಾ ಕೆಜೊ ಹೇಳಿದ್ದಾರೆ.

ಮೃತರ ಸಾವಿಗೆ ನಿಖರ ಕಾರಣ ತಿಳಿಯಲು ಮದ್ಯದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಗುವಾಹಟಿಗೆ ಕಳುಹಿಸಲಾಗಿದೆ. ತನಿಖೆಯಲ್ಲಿ ಕೆಲವು ಸುಳಿವುಗಳು ಸಿಕ್ಕಿವೆ. ಆದರೆ ಈ ಹಂತದಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಾವುಗಳ ನಂತರ, ಪೊಲೀಸರು ಹಲವು ಕಡೆ ದಾಳಿ ನಡೆಸಿ 19 ಮಂದಿಯನ್ನು ಬಂಧಿಸಿದ್ದಾರೆ ಮತ್ತು ಸುಮಾರು 3,000 ಬಾಟಲಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್‌ನಲ್ಲಿ 1990 ರಿಂದಲೂ ಮದ್ಯಪಾನ ನಿಷೇಧ ಕಾನೂನು ಜಾರಿಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್; ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು, ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ

'ಪದ್ಮಭೂಷಣ ಸಣ್ಣ ವಿಷಯ, ಅವರನ್ನು ಪ್ರಧಾನಿಯನ್ನಾಗಿ ಮಾಡಿ': ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ ಹೇಳಿಕೆಗೆ ಕಾಂಗ್ರೆಸ್ ಲೇವಡಿ

ಭಾರತದ ಭಜನೆ, ಭಕ್ತಿ ಪರಂಪರೆಗೆ ಅಪಹಾಸ್ಯ: ಜೂನಿಯರ್ ಖರ್ಗೆಯಿಂದ ಇದಕ್ಕಿಂತ ಇನ್ನೇನು ನಿರೀಕ್ಷಿಸಲು ಸಾಧ್ಯ! ಬಿಜೆಪಿ

ಮೊಬೈಲ್‌ನಲ್ಲಿ e-KYC ಮಾಡಿದರೆ ಮಾನ್ಯವಲ್ಲ; Ration Card ಬಳಕೆದಾರಿಗೆ ಆಹಾರ ಇಲಾಖೆ ಖಡಕ್ ಎಚ್ಚರಿಕೆ

'SIT ತಂಡದ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆಯಿಲ್ಲ, ಸಮರ್ಥರನ್ನು ನೇಮಿಸಿ ಮರುತನಿಖೆ ಮಾಡಿ': ಸೌಜನ್ಯ ತಾಯಿ ಮನವಿ