ಅಪ್ರಾಪ್ತ ಯುವತಿ ಮೇಲೆ ಲೈಂಗಿಕ ದೌರ್ಜನ್ಯ (ಸಂಗ್ರಹ ಚಿತ್ರ) 
ದೇಶ

ಇನ್‌ಸ್ಟಾಗ್ರಾಂನಲ್ಲಿ ಪರಿಚಯ, ಬಳಿಕ ಲೈಂಗಿಕ ದೌರ್ಜನ್ಯ; 16ರ ಬಾಲಕಿ ಪ್ರಕರಣದಲ್ಲಿ 19ರ ಯುವಕ ಅರೆಸ್ಟ್

19 ವರ್ಷದ ಯುವಕನೊಬ್ಬ 16 ವರ್ಷದ ಬಾಲಕಿಯನ್ನು ನಗರದ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು..

ಚೆನ್ನೈ: ಇನ್‌ಸ್ಟಾಗ್ರಾಂನಲ್ಲಿ ಪರಿಚಿತನಾದ ಯುವಕನೋರ್ನ ಅಪ್ರಾಪ್ತ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾದ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ 19 ವರ್ಷದ ಯುವಕನೊಬ್ಬ 16 ವರ್ಷದ ಬಾಲಕಿಯನ್ನು ನಗರದ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಂಬರಂ ನಗರ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಆರೋಪಿಯನ್ನು ಜೆ. ಮುತ್ತುಸಾಮಿ ಎಂದು ಗುರುತಿಸಲಾಗಿದೆ. ಆತ ಇನ್‌ಸ್ಟಾಗ್ರಾಂ ಮೂಲಕ ಅಪ್ರಾಪ್ತ ಯುವತಿಗೆ ಪರಿಚಯವಾಗಿದ್ದ. ಬಳಿಕ ಇಬ್ಬರೂ ಸುಮಾರು ಒಂದು ತಿಂಗಳ ಕಾಲ ಫೋನ್ ಮೂಲಕ ಸಂಪರ್ಕದಲ್ಲಿದ್ದರು.

ಸೆಪ್ಟೆಂಬರ್ 25ರಂದು ಬಾಲಕಿಯ ತಾಯಿ ವಂಡಲೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದರು.

ಗುರುವಾರ ರಾತ್ರಿ ಆರೋಪಿ ಬಾಲಕಿಯನ್ನು ಓಲ್ಡ್‌ ನಲ್ಲೂರು ಸಮೀಪದ ಕೃಷಿ ಜಮೀನೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ಸ್ವೀಕರಿಸಿದ ತಕ್ಷಣ ವಂಡಲೂರು ಆಲ್ ವುಮೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಯಿತು. ದೂರು ಸ್ವೀಕರಿಸಿದ ಒಂದು ಗಂಟೆಯೊಳಗೇ ಆರೋಪಿ ಮುತ್ತುಸಾಮಿಯನ್ನು ಬಂಧಿಸಲಾಗಿದೆ. ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಾಂಬರಂ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

ಮಮತಾ ಬಣದ ಟಿಎಂಸಿ ಶಾಸಕರ ಕಾರಿನ ಮೇಲೆ ಕಲ್ಲು, ಮೊಟ್ಟೆಗಳ ಎಸೆತ

ಮಾಫಿ ಸಾಕ್ಷಿ ತಡೆಯಲು ದರ್ಶನ್ ಹಲವು ಕಸರತ್ತು: ಪ್ರದೋಷ್ ಹೇಳಿಕೆ ದಾಖಲು ಮುಂದೂಡಿಕೆ ಕೋರಿ ಮತ್ತೊಂದು ಅರ್ಜಿ!

ಮಂಗಳೂರಿನ ಕಾಲೇಜಿನಲ್ಲಿ ರ‍್ಯಾಗಿಂಗ್: ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದ ಐವರು ವಿದ್ಯಾರ್ಥಿಗಳ ಬಂಧನ!

ವಿನೋದ್‌ ಕಾಂಬ್ಳಿ ಈಗ ಏಕಾಂಗಿ; ವೃದ್ದಾಶ್ರಮದಿಂದಲೇ ವಿಡಿಯೋ ಹಂಚಿಕೊಂಡ ಮಾಜಿ ಕ್ರಿಕೆಟಿಗ; ಅಭಿಮಾನಿಗಳಿಗೆ ಆತಂಕ!