ಅಸ್ಸಾಂನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಾಯಕರ ಬಂಧನ Online Desk
ದೇಶ

ಅಸ್ಸಾಂನಲ್ಲಿ ಸಿಜೆಪಿ ನಾಯಕರ ದಿಢೀರ್ ಬಂಧನ: ಹಿಮಾಂತ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಕ್ರೋಚ್ ಜನತಾ ಪಾರ್ಟಿ!

ಅಸ್ಸಾಂನಲ್ಲಿ SIR ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ಸ್ಕೂಲ್ ಠೀಕ್ ಕರೋ ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದ ಸಿಜೆಪಿ ಸಹ-ಸಂಘಟಕ ಅಶುತೋಷ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುವಾಹಟಿ (ಅಸ್ಸಾಂ): ಅಸ್ಸಾಂನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ತಮ್ಮ ಸ್ಕೂಲ್ ಠೀಕ್ ಕರೋ (ಶಾಲೆಗಳನ್ನು ಸರಿಪಡಿಸಿ) ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದ ಕಾಕ್ರಾಚ್ ಜನತಾ ಪಾರ್ಟಿ (CJP) ಸಹ-ಸಂಘಟಕ ಅಶುತೋಷ್ ರಂಕಾ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಖಚಿತಪಡಿಸಿದ್ದು, ಗುವಾಹಟಿಯ ಖಾಸಗಿ ಆವರಣವೊಂದರಲ್ಲಿ ಸಭೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾಗ ಪೊಲೀಸರು ಸ್ಥಳಕ್ಕೆ ಬ್ಯಾರಿಕೇಡ್‌ಗಳನ್ನು ಹಾಕಿ ಅಶುತೋಷ್ ರಾಂಕಾ ಮತ್ತು ಇತರೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಅಪರಿಚಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಏತನ್ಮಧ್ಯೆ,  ಪೊಲೀಸರ ವಾಹನದಲ್ಲಿದ್ದಾಗಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅಶುತೋಷ್ ರಾಂಕಾ, "ಅಸ್ಸಾಂನ ಸರ್ಕಾರಿ ಶಾಲೆಗಳ ದುಸ್ಥಿತಿ, ಕಾಜಿರಂಗದಲ್ಲಿ ಕಾರ್ಪೊರೇಟ್‌ಗಳಿಗಾಗಿ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವುದು ಹಾಗೂ ಇಲ್ಲಿನ ಕೃತಕ ಪ್ರವಾಹದ ನೈಜತೆಯನ್ನು ನಾವು ಬಹಿರಂಗಪಡಿಸುತ್ತೇವೆ ಎಂಬ ಭಯದಿಂದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪೊಲೀಸರನ್ನು ಬಳಸಿ ನಮ್ಮನ್ನು ತಡೆದಿದ್ದಾರೆ" ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ಬಂಧನವ್ಯಾಕೆ?

ಸಿಜೆಪಿ ನಾಯಕರು ಅಸ್ಸಾಂನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ತಮ್ಮ 'ಸ್ಕೂಲ್ ಠೀಕ್ ಕರೋ' (ಶಾಲೆಗಳನ್ನು ಸರಿಪಡಿಸಿ) ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದರು. ಆದರೆ, ದಿಸ್ಪುರ್‌ನಲ್ಲಿರುವ ಅಸ್ಸಾಂ ಸಚಿವಾಲಯದ ಸಮೀಪವೇ ಸಿಜೆಪಿ ಸಭೆ ನಿಗದಿಯಾಗಿದ್ದರಿಂದ, ಪೊಲೀಸರು ಇಡೀ ಪ್ರದೇಶವನ್ನು ಹೈ ಅಲರ್ಟ್‌ನಲ್ಲಿ ಇರಿಸಿದ್ದರು. ಜೊತೆಗೆ, ಸಭೆ ನಡೆಯಬೇಕಿದ್ದ ಸ್ಥಳಕ್ಕೆ ಹೋಗುವ ಎಲ್ಲಾ ಪ್ರಮುಖ ರಸ್ತೆಗಳನ್ನು ದೊಡ್ಡ ಬ್ಯಾರಿಕೇಡ್‌ಗಳನ್ನು ಹಾಕಿ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NEET ಪ್ರಶ್ನೆಪತ್ರಿಕೆ ಸೋರಿಕೆ: NTA ಕಚೇರಿಗೆ CISF ಕಾವಲು, ಗೌಪ್ಯ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣ

10 Years Of Surgical Strike: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ನೀತಿ; ಭಾರತದ ದಿಟ್ಟ ನಿಲುವಿಗೆ ಹೊಸ ಉದಾಹರಣೆ: ಪ್ರಧಾನಿ ಮೋದಿ

ಉತ್ತರ ಪ್ರದೇಶದಲ್ಲಿ ವರುಣನ ರೌದ್ರಾವತಾರ; 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ, ಅವಾಂತರಕ್ಕೆ 10 ಮಂದಿ ಬಲಿ, 17 ಜನರಿಗೆ ಗಾಯ..!

ಪಂಜಾಬ್ LPU ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರು

ಇನ್ನು ನಿಮ್ಮ ಆಟ ನಡೆಯಲ್ಲ, ಉಗ್ರವಾದ ನಿಲ್ಲಿಸಿ-ಬುದ್ಧಿ ಕಲಿಯಿರಿ: ಸುಳ್ಳು ಹೇಳಿದ ‘ಸರಣಿ ಭಯೋತ್ಪಾದಕ’ Pakಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು..!