ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ online desk
ದೇಶ

NDA ಸರ್ಕಾರಕ್ಕೆ ಬೆಂಬಲ ನೀಡಲು ನಾಚಿಕೆಯಾಗುತ್ತಿದೆ! ತಮ್ಮದೇ ಆಡಳಿತದ ವಿರುದ್ಧ ಕೇಂದ್ರ ಸಚಿವ ಪಾಸ್ವಾನ್ ಆಕ್ರೋಶ!

ಬಿಹಾರದಲ್ಲಿ ಹದಗೆಡುತ್ತಿರುವ ಕಾನೂನು-ಸುವ್ಯವಸ್ಥೆಯನ್ನು ಪ್ರಶ್ನಿಸಿದ ಚಿರಾಗ್ ಪಾಸ್ವಾನ್ ಅವರು, ಈ ಸರ್ಕಾರಕ್ಕೆ ಬೆಂಬಲ ನೀಡಲು ನಾಚಿಕೆಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಪಾಟ್ನಾ: ಕೇಂದ್ರ ಮತ್ತು ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಸರ್ಕಾರದ ಭಾಗವಾಗಿರುವ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಹದಗೆಡುತ್ತಿರುವ ಕಾನೂನು-ಸುವ್ಯವಸ್ಥೆಯನ್ನು ಪ್ರಶ್ನಿಸಿದ ಚಿರಾಗ್ ಪಾಸ್ವಾನ್ ಅವರು, ಈ ಸರ್ಕಾರಕ್ಕೆ ಬೆಂಬಲ ನೀಡಲು ನಾಚಿಕೆಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇತ್ತೀಚಿಗೆ ಬಿಹಾರದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪಾಸ್ವಾನ್ ಅವರು, ಅಪರಾಧಗಳು ಸಂಪೂರ್ಣವಾಗಿ ಹದ್ದುಮೀರಿ ಹೋಗಿರುವ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ. ಸರ್ಕಾರ, ಕಾನೂನು ಮತ್ತು ಸುವ್ಯವಸ್ಥೆಯನ್ನು ಮರಳಿ ಸ್ಥಾಪಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಪೊಲೀಸ್ ಮತ್ತು ಸರ್ಕಾರದ ಆಡಳಿತ ಯಂತ್ರ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು, ರಾಜ್ಯದ ಜನರನ್ನು ಸುರಕ್ಷಿತವಾಗಿಡುವುದು ಈಗ ಅವರ ಸಾಮರ್ಥ್ಯಕ್ಕೆ ಮೀರಿದ ಮಾತಾಗಿದೆ ಎಂದು ಚಿರಾಗ್ ಪಾಸ್ವಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರಿಸ್ಥಿತಿ ಕೈಮೀರಿ ಹೋಗುವ ಮುನ್ನವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಹಾರ ಸರ್ಕಾರವನ್ನು ಮತ್ತೊಮ್ಮೆ ಆಗ್ರಹಿಸಿದ ಕೇಂದ್ರ ಸಚಿವ, ಇಂತಹ ಘಟನೆಗಳು ನಿರಂತರವಾಗಿ ಮುಂದುವರಿದರೆ ರಾಜ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಮತ್ತು ಸರ್ಕಾರ ತಕ್ಷಣವೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಬೇಕಾಗಿದೆ ಎಂದು ಎಚ್ಚರಿಸಿದರು. ಇಲ್ಲದಿದ್ದರೆ, ಬಿಹಾರ ಮತ್ತು ಅಲ್ಲಿನ ಜನರ ಜೀವದ ಜೊತೆ ಈ ರೀತಿ ಚೆಲ್ಲಾಟವಾಡುವುದು ರಾಜ್ಯವನ್ನು ತೀರಾ ಕೆಟ್ಟ ಪರಿಣಾಮದತ್ತ ಕೊಂಡೊಯ್ಯಬಹುದು ಎಂದು ಅವರು ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೂ. 2,000ಕ್ಕಿಂತ ಹೆಚ್ಚಿನ UPI ವಹಿವಾಟಿಗೆ ಶುಲ್ಕ: ತಡೆ ನೀಡಲು ಸುಪ್ರೀಂಕೋರ್ಟ್ ನಕಾರ, ಕೇಂದ್ರ ಸರ್ಕಾರಕ್ಕೆ ನೋಟಿಸ್..!

ಲಾಭದಲ್ಲಿ 11 ಹಾಲು ಒಕ್ಕೂಟಗಳು, ನಷ್ಟದಲ್ಲಿ ಚಿಕ್ಕಬಳ್ಳಾಪುರ ದಾಖಲೆ: ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರ ದರ ಏರಿಕೆ ನಿರ್ಧಾರ; ಸಿಎಂ

ಬರ ನೆರವು: ಸರ್ವಪಕ್ಷ ನಿಯೋಗದ ಜತೆ ದೆಹಲಿಗೆ ಬರದಿದ್ದರೆ BJP ಕಪಟ ನಾಟಕ ಸಾಬೀತು; ಸಿಎಂ ಡಿ ಕೆ ಶಿವಕುಮಾರ್

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವಂತಿಲ್ಲ: ಶಿವಸೇನಾ ಕಾರ್ಪೊರೇಟರ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

'ಡಕೌಟ್‌ನಿಂದ ನಾಲ್ಕು ಸೆಂಚುರಿವರೆಗೆ, ಇದು ವಿರಾಟ್ ಕೊಹ್ಲಿ ಹೊಸ ಅವತಾರ': ನೀವೆಲ್ಲ ಕಲಿಯಬೇಕಿರುವುದು ಸಾಕಷ್ಟಿದೆ; ಮೊಹಮ್ಮದ್ ಕೈಫ್