ರಣಧೀರ್ ಜೈಸ್ವಾಲ್- ಟರ್ಕಿ ಅಧ್ಯಕ್ಷ ಎರ್ಡೋಗನ್ 
ದೇಶ

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ, ಆಗಿದ್ದೇನು?

ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ನವದೆಹಲಿ: ಕಾಶ್ಮೀರದ ವಿಚಾರವಾಗಿ ಹೊರಗಿನವರು ಮೂಗು ತೂರಿಸುವುದು ಬೇಡ ಎಂದು ಭಾರತ ಟರ್ಕಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ.

ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆ (UNGA)ಯಲ್ಲಿ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಜಮ್ಮು-ಕಾಶ್ಮೀರ ವಿಚಾರ ಪ್ರಸ್ತಾಪಿಸಿದ್ದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ನ್ಯೂಯಾರ್ಕ್‌ನಲ್ಲಿ ಎರ್ಡೊಗನ್ ಅವರ ಭಾಷಣದ ಕುರಿತು ಕೇಳಲಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಟರ್ಕಿ ಅಧ್ಯಕ್ಷರು ಮಾಡಿದ ಜಮ್ಮು-ಕಾಶ್ಮೀರದ ಉಲ್ಲೇಖವನ್ನು ಭಾರತ ಸಂಪೂರ್ಣವಾಗಿ ತಿರಸ್ಕರಿಸುತ್ತದೆ ಎಂದು ಹೇಳಿದರು.

“ಟರ್ಕಿ ಅಧ್ಯಕ್ಷರು ತಮ್ಮ UNGA ಭಾಷಣದಲ್ಲಿ ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದ ಕುರಿತು ಮಾಡಿರುವ ಅನಗತ್ಯ ಉಲ್ಲೇಖಗಳನ್ನು ಭಾರತ ತಿರಸ್ಕರಿಸುತ್ತದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರ. ಈ ವಿಷಯದಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಯಾವುದೇ ಹಕ್ಕು ಅಥವಾ ಅಧಿಕಾರವಿಲ್ಲ” ಎಂದು ಜೈಸ್ವಾಲ್ ಸ್ಪಷ್ಟಪಡಿಸಿದರು.

ಎರ್ಡೊಗನ್ ಅವರು ತಮ್ಮ UNGA ಭಾಷಣದಲ್ಲಿ ದಕ್ಷಿಣ ಏಷ್ಯಾದ ಪ್ರಾದೇಶಿಕ ವಿವಾದಗಳ ಕುರಿತು ಮಾತನಾಡುವ ಸಂದರ್ಭದಲ್ಲಿ, ಕಾಶ್ಮೀರ ಸೇರಿದಂತೆ ಎಲ್ಲ ವಿವಾದಗಳನ್ನು ವಿಶ್ವಸಂಸ್ಥೆಯ ಚಾರ್ಟರ್ ಹಾಗೂ ಸಂಬಂಧಿತ ನಿರ್ಣಯಗಳ ಚೌಕಟ್ಟಿನೊಳಗೆ ಮಾತುಕತೆಯ ಮೂಲಕ ಬಗೆಹರಿಸಬೇಕು ಎಂದು ಪ್ರತಿಪಾದಿಸಿದ್ದರು.

“ದಕ್ಷಿಣ ಏಷ್ಯಾದಲ್ಲಿ ಕಾಶ್ಮೀರ ವಿಚಾರ ಸೇರಿದಂತೆ ಎಲ್ಲ ವಿವಾದಗಳನ್ನು ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಸಂಬಂಧಿತ ನಿರ್ಣಯಗಳ ಚೌಕಟ್ಟಿನೊಳಗೆ ಮಾತುಕತೆಯ ಮೂಲಕ ಪರಿಹರಿಸುವುದು ಮುಖ್ಯ. ರಚನಾತ್ಮಕ ಕ್ರಮಗಳನ್ನು ಕೈಗೊಂಡರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ” ಎಂದು ಎರ್ಡೊಗನ್ ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತ, ಜಮ್ಮು-ಕಾಶ್ಮೀರ ವಿಚಾರದಲ್ಲಿ ಯಾವುದೇ ಬಾಹ್ಯ ಹಸ್ತಕ್ಷೇಪವನ್ನು ಒಪ್ಪುವುದಿಲ್ಲ ಎಂಬ ತನ್ನ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇವ್ರು ಊರುಬಿಟ್ಟು ಊರಿಗೆ ಬಂದು ಆಸ್ತಿ ಮಾಡಬಹುದು, ನಾವು ಮಾಡ್ಬಾರ್ದ? ಪಾರ್ಟ್-2ನಲ್ಲಿ ಏನಿದೆ ಅಂತ ಗೊತ್ತು: HDK ಆರೋಪಕ್ಕೆ CM ಡಿಕೆಶಿ ತಿರುಗೇಟು

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ

ರಷ್ಯಾಗೆ ಮರ್ಮಾಘಾತ; ಪರಮಾಣು ಸಾಮರ್ಥ್ಯದ ಯುದ್ಧವಿಮಾನ ಪತನ-ಬೆಂಕಿಗಾಹುತಿ, 6 ಮಂದಿ ಸಜೀವ ದಹನ, ಓರ್ವ ಪಾರು! Video

ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ, ಕಡಿಮೆ ನೀರು ಬೇಕಾದ ಬೆಳೆಗಳಿಗೆ ಒತ್ತು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಪಾಕ್‌ಗೆ ನಡುಕ ಹುಟ್ಟಿಸಿದ ಬಲೂಚ್ ನೂತನ ಮಹಿಳಾ ಪಡೆ: 9 ಸೈನಿಕರ ಹತ್ಯೆಗೈದ ಮೊದಲ ಕಾರ್ಯಾಚರಣೆ ವಿಡಿಯೋ ಬಿಡುಗಡೆ!