ಮೃತ ಯುವತಿ  
ದೇಶ

ಓಯೋ ಹೋಟೆಲ್‌ನಲ್ಲಿ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ!

ಅನುಮಾನಾಸ್ಪದ ಸಾವು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹೋಟೆಲ್ ಗೆ ಆಗಮಿಸಿ ಸಿ ಗಣೇಶ್ ಹೆಸರಿನಲ್ಲಿ ದಾಖಲಾಗಿದ್ದ ಕೊಠಡಿ ಸಂಖ್ಯೆ 103 ಅನ್ನು ಪರಿಶೀಲಿಸಿದ್ದಾರೆ.

ಹೈದರಾಬಾದ್: ಹೈದರಾಬಾದ್‌ನ ಎಸ್‌ಆರ್ ನಗರದ ಓಯೋ ಹೋಟೆಲ್‌, ಗೋಕುಲ್ ಪ್ರೈಡ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಯುವತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅನುಮಾನಾಸ್ಪದ ಸಾವು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹೋಟೆಲ್ ಗೆ ಆಗಮಿಸಿ ಸಿ ಗಣೇಶ್ ಹೆಸರಿನಲ್ಲಿ ದಾಖಲಾಗಿದ್ದ ಕೊಠಡಿ ಸಂಖ್ಯೆ 103 ಅನ್ನು ಪರಿಶೀಲಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಸಿ. ಗಣೇಶ್ ಎಂಬ ಹೆಸರಿನಲ್ಲಿ ಲಾಡ್ಜ್‌ನಲ್ಲಿ ಕೊಠಡಿ ಬುಕ್ ಮಾಡಿದ್ದಾರೆ. ಇಂದು ಬೆಳಗ್ಗೆ ಕೋಣೆಯಲ್ಲಿ 23 ವರ್ಷದ ಯುವತಿ ಮೃತಪಟ್ಟಿರುವುದು ಪತ್ತೆಯಾಗಿದೆ. ಮಹಿಳೆಯ ಗುರುತಿನ ವಿವರಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಧಾರ್ ದಾಖಲೆಗಳಲ್ಲಿ ಆಕೆಯ ಹೆಸರು ದುರ್ಗಾ ಎಂದು ಉಲ್ಲೇಖಿಸಲಾಗಿದ್ದರೂ, ಈ ಹಿಂದಿನ ಖಾಸಗಿ ಆಸ್ಪತ್ರೆ ದಾಖಲೆಗಳಲ್ಲಿ ಆಕೆ ಹೆಸರು ಶಿರಿಷಾ ಎಂದು ಗುರುತಿಸಲಾಗಿದೆ.

ಘಟನೆಯ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯ ಸಾವಿಗೆ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಯುವತಿಯ ನಿಜವಾದ ಗುರುತನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಲಾಡ್ಜ್ ಕೊಠಡಿಯನ್ನು ಕಾಯ್ದಿರಿಸುವಾಗ ಒದಗಿಸಲಾದ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಡಿಕೆಶಿ - ಅಶೋಕ್​ ಖೇಣಿಯ ಆಡಿಯೋ ಬಿಡುಗಡೆ; ಇವತ್ತಿಂದು ಚಿಕ್ಕದು, ಅಲ್ಲೋಲ ಕಲ್ಲೋಲ ಆಗೋದು ಬೇರೆ ಇದೆ ಬ್ರದರ್​!

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ ರದ್ದು: ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್! ವಿಡಿಯೋದಲ್ಲಿ ಹೇಳಿಕೊಂಡಿದ್ದೇನು?

ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ D Boss: ದರ್ಶನ್-ವಿಜಯಲಕ್ಷ್ಮಿಯಿಂದ ಮೂರು ಅರ್ಜಿ ಸಲ್ಲಿಕೆ!

ಏಷ್ಯನ್ ಗೇಮ್ಸ್ ನಲ್ಲಿ ಐತಿಹಾಸಿಕ ದಾಖಲೆ: ಟ್ರ್ಯಾಪ್ ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ನೀರೂ ಧಾಂಡಾ

NSA ಅಡಿ ಸಂಭಲ್ ಹಿಂಸಾಚಾರದ ಆರೋಪಿಯ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ದಂಡ!