ಪ್ರದೀಪ್ ಪುರ್ನೇಕರ್ 
ದೇಶ

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ನಾಯಕನನ್ನು ಗುಂಡಿಕ್ಕಿ ಕೊಂದ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು!

ಬೈಕ್‌ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಪ್ರದೀಪ್ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂಬೈ: ಮಹಾರಾಷ್ಟ್ರದ ಥಾಣೆಯ ಮನ್ಪಾಡಾ-ಗಣೇಶ್ ನಗರ ಪ್ರದೇಶದಲ್ಲಿ, ಮಂಗಳವಾರ ತಡರಾತ್ರಿ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಶಿವಸೇನೆ (ಯುಬಿಟಿ) ನಾಯಕ ಪ್ರದೀಪ್ ಪುರ್ನೇಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 9.30ರ ಸುಮಾರಿಗೆ ಕಪುರ್‌ಬಾವ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪುರ್ನೇಕರ್ ಅವರ ಕಚೇರಿ ಮುಂದೆಯೇ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಸೃಷ್ಟಿಸಿದೆ. ಪಕ್ಷದ ಸ್ಥಳೀಯ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ವ್ಯಾಪಕ ಆತಂಕ ಉಂಟುಮಾಡಿದೆ.

ಬೈಕ್‌ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಪ್ರದೀಪ್ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸೇನಾ (ಯುಬಿಟಿ) ಪಕ್ಷದ ಥಾಣೆ ವಿಭಾಗದ ಮುಖ್ಯಸ್ಥರಾದ ಪುರ್ನೇಕರ್ ಅವರ ಎದೆಗೆ ಎರಡು ಗುಂಡೇಟು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಅವರ ಮೃತದೇಹವನ್ನು ಮುಂಬೈನ ಜೆಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಂತರ, ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದು, ಗುಂಡಿನ ದಾಳಿಗೆ ಸಂಬಂಧಿಸಿದ ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆರೋಪಿಯನ್ನು ಗುರುತಿಸಲು ತನಿಖೆಯನ್ನು ಪ್ರಾರಂಭಿಸಿದರು.

ಈ ದಾಳಿಯ ಹಿಂದಿನ ಉದ್ದೇಶವೇನೆಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಮಂಗಳವಾರ ರಾತ್ರಿ ತಿಳಿಸಿದರು. ರಾಜಕೀಯ ವೈಷಮ್ಯ ಮತ್ತು ವೈಯಕ್ತಿಕ ದ್ವೇಷ ಸೇರಿದಂತೆ ಎಲ್ಲ ಸಂಭಾವ್ಯ ಆಯಾಮಗಳ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ; ವಿಶ್ವ ದಾಖಲೆ ಬರೆದ ಮಹಿಳಾ ಆರ್ಚರಿ ಟೀಮ್..!

Budgam encounter: LET ಮೋಸ್ಟ್ ವಾಂಟೆಡ್ ಉಗ್ರ ಸುಲೈಮಾನ್ ಶಾ ಅಲಿಯಾಸ್ ಮೂಸಾ ಹತ, ಮುಂದುವರೆದ ಸೇನಾ ಕಾರ್ಯಾಚರಣೆ

ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ. ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!

ಬೆಂಗಳೂರು ವಿಸ್ತರಣೆಗೆ ಸರ್ಕಾರ ಹೊಸ ರೂಪುರೇಷೆ: ಭವಿಷ್ಯದ ಸಂಚಾರ ಸಮಸ್ಯೆ ತಡೆಯಲು ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಮಹಾ ಬದಲಾವಣೆ: GBA ಮಾದರಿಯಲ್ಲಿ ಮರುಸಂಘಟನೆ, ಅಕ್ಟೋಬರ್‌ನಲ್ಲಿ ಅಧಿಸೂಚನೆ ಸಾಧ್ಯತೆ..!