ಅಲ್ಲು ಅರ್ಜುನ್  online desk
ಸಿನಿಮಾ ಸುದ್ದಿ

'Pushpa 2': ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್- ಹೈದರಾಬಾದ್ ಪೊಲೀಸ್

ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್: ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್ ಒಂದಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ನೆಚ್ಚಿನ ನಟನನ್ನು ನೋಡಲು ಅಲ್ಲಿ ನೆರೆದಿದ್ದ ಜನರು ಮುಗಿಬಿದ್ದ ಪರಿಣಾಮ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರು.

ಘಟನೆಯ ಸಂಬಂಧ ಅಲ್ಲು ಅರ್ಜುನ್ ವಿರುದ್ಧ 105, 118(1)r/w 3(5) ಬಿಎನ್ಎಸ್ ಕಾಯ್ದೆಯಡಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಮೃತರ ಕುಟುಂಬ ಸದಸ್ಯರ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅಷ್ಟೇ ಅಲ್ಲದೇ ಹೆಚ್ಚುವರಿ ಭದ್ರತೆಗೆ ವ್ಯವಸ್ಥೆ ಮಾಡದ, ಜನದಟ್ಟನೆ ನಿರ್ವಹಣೆಗೆ ಕ್ರಮ ಕೈಗೊಳ್ಳದ ಸಂಧ್ಯಾ ಥಿಯೇಟರ್ ನ ಆಡಳಿತ ಮಂಡಳಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿಕೆ ನೀಡಿದ್ದು, "ಥಿಯೇಟರ್‌ಗೆ ಭೇಟಿ ನೀಡುವ ಕುರಿತು ಥಿಯೇಟರ್ ಆಡಳಿತ ಅಥವಾ ನಟರ ತಂಡದಿಂದ ಯಾವುದೇ ಸೂಚನೆ ಬಂದಿಲ್ಲ" ಎಂದು ತಿಳಿಸಿದ್ದಾರೆ.

ಥಿಯೇಟರ್ ಆಡಳಿತಕ್ಕೆ ಅವರ ಆಗಮನದ ಬಗ್ಗೆ ತಿಳಿದಿದ್ದರೂ ಸಹ ನಟ ಮತ್ತು ಅವರ ತಂಡಕ್ಕೆ ಪ್ರತ್ಯೇಕ ಪ್ರವೇಶ ಅಥವಾ ನಿರ್ಗಮನವಿಲ್ಲ ಎಂದು ಉನ್ನತ ಪೋಲೀಸ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!