ನಟ ವಿಶಾಲ್ 
ಸಿನಿಮಾ ಸುದ್ದಿ

ನಟ Vishal ಆರೋಗ್ಯದಲ್ಲಿ ಏರುಪೇರು; ಅಪೋಲೊ ಆಸ್ಪತ್ರೆಗೆ ದಾಖಲು

ಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚೆನ್ನೈ: ಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ತಮ್ಮ ಮದಗಜರಾಜ ಚಿತ್ರದ ಪ್ರೋಮೋಷನ್ ನಲ್ಲಿ ಪಾಲ್ಗೊಂಡಿದ್ದ ನಟ ತೀವ್ರ ಅಸ್ವಸ್ಥತೆಗೀಡಾಗಿದ್ದರು. ಈ ವೇಳೆ ಅವರು ಮೈಕ್ ಹಿಡಿದಿದ್ದ ಕೈಗಳು ತೀವ್ರವಾಗಿ ನಡುಗುತ್ತಿದ್ದವು. ಮಾತುಗಳು ಕೂಡ ತೀವ್ರವಾಗಿ ತೊದಲುತ್ತಿದ್ದವು. ಇದು ವಿಶಾಲ್ ಅವರಿಗೆ ಏನೋ ಆಗಿದೆ ಎಂಬುದನ್ನು ಸಾಬೀತು ಪಡಿಸಿತ್ತು. ಅಲ್ಲದೆ ವಿಶಾಲ್ ಅವರ ಅಭಿಮಾನಿಗಳೂ ಕೂಡ ಅವರ ಆರೋಗ್ಯದ ಕುರಿತು ಆತಂಕಕ್ಕೀಡಾಗಿದ್ದರು.

ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದರಿಂದ ಅವರನ್ನು ಚೆನ್ನೈನ ಪ್ರತಿಷ್ಠಿತ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅತೀಯಾದ ಜ್ವರ, ನಿಶ್ಯಕ್ತಿ

ಇನ್ನು ನಟ ವಿಶಾಲ್ ಅವರು ಅತಿಯಾದ ಜ್ವರ ಮತ್ತು ನಿಶ್ಯಕ್ತಿಯಿಂದ ಬಳಲುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಅವರನ್ನು ಇದೀಗ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಪರೀಕ್ಷಿಸಿದ ವೈದ್ಯರು ವಿಶಾಲ್ ಗೆ ವೈರಲ್ ಫೀವರ್ ಇರುವ ಕುರಿತು ಸ್ಪಷ್ಟನೆ ನೀಡಿದ್ದು ಇದೇ ಕಾರಣಕ್ಕೆ ಅವರು ತೀವ್ರ ನಿಶ್ಯಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿ ಕೂಡ ನಟ ವಿಶಾಲ್ ಆರೋಗ್ಯದ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ವಿಶಾಲ್ ವೈರಲ್ ಜ್ವರದಿಂದ ಬಳಲುತ್ತಿದ್ದಾರೆ ಮತ್ತು ಕೆಲವು ದಿನಗಳವರೆಗೆ ಸಂಪೂರ್ಣ ಬೆಡ್ ರೆಸ್ಟ್ ಅಗತ್ಯವಿದೆ ಎಂದು ದೃಢಪಡಿಸಿದ್ದಾರೆ. ಇದಲ್ಲದೆ ವಿಶಾಲ್ ಕೆಲವು ದಿನಗಳ ಕಾಲ ವೈದ್ಯಕೀಯ ಮೇಲ್ವಿಚಾರಣೆಯಲ್ಲಿರುತ್ತಾರೆ ಎಂದು ವರದಿ ಹೇಳಿದೆ.

ಇನ್ನು ಸುಂದರ್ ಸಿ ನಿರ್ದೇಶನದ ಮದಗಜರಾಜ ಚಿತ್ರದಲ್ಲಿ ವಿಶಾಲ್ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಖ್ಯಾತ ಹಾಸ್ಯ ಕಲಾವಿದ ಸಂತಾನಂ, ವರಲಕ್ಷ್ಮಿ ಶರತ್‌ಕುಮಾರ್, ಸತೀಶ್, ನಿತಿನ್ ಸತ್ಯ, ಸೋನು ಸೂದ್, ಅಂಜಲಿ ಮತ್ತು ದಿವಂಗತ ನಟರಾದ ಮಣಿವಣ್ಣನ್, ಮನೋಬಾಲಾ, ಮಾಯಿಲ್‌ಸಾಮಿ ಮತ್ತು ಚಿಟ್ಟಿ ಬಾಬು ಕೂಡ ನಟಿಸಿದ್ದಾರೆ.

ಅಂದಹಾಗೆ ಮದಗಜ ರಾಜ ಚಿತ್ರವು ಹಾಸ್ಯಮಯ ಕಥಾಹಂದರವನ್ನು ಹೊಂದಿದ್ದು, ಈ ಚಿತ್ರ ಬರೊಬ್ಬರಿ 13 ವರ್ಷಗಳ ವಿಳಂಬದ ನಂತರ ಜನವರಿ 12, 2025 ರಂದು ಬಿಡುಗಡೆಯಾಗಲಿದೆ. ಚಿತ್ರವು 2013 ರಲ್ಲಿ ಪ್ರಾರಂಭವಾದಾಗಿನಿಂದ ಅನೇಕ ಹಣಕಾಸಿನ ಅಡಚಣೆಗಳಿಂದ ಬಿಡುಗಡೆ ತಡವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT