ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಸಿನಿಮಾ

ಕಿಚ್ಚ ಸುದೀಪ್ ಮಾತಿಗೆ ಮಣಿದು ಸಾವಿನ ಮಾತು ಕೈಬಿಟ್ಟಿದ್ದ ನಟಿ ಜಯಶ್ರೀ ದಿಢೀರ್ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಿಂಗಳ ಹಿಂದಷ್ಟೆ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮಕ್ಕೆ ಸೇರಿದ್ದ ಜಯಶ್ರೀ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾತ್ರಿ ಊಟ ಮುಗಿಸಿ ಜಯಶ್ರೀ ರೂಂ ಸೇರಿಕೊಂಡಿದ್ದರು. ಆದರೆ ಬೆಳಗ್ಗೆ ಎಷ್ಟು ಹೊತ್ತಾದರೂ ಹೊರಗೆ ಬಾರದೆ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ಮುರಿದು ನೋಡಿದಾಗ ನಟಿ ನೇಣು ಕುಣಿಕೆಯಲ್ಲಿ ನೇತಾಡುತ್ತಿದ್ದರು.
ನಟಿ ಮಾನಸಿಕ ಖಿನ್ನತೆ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು ಇದೇ ನಟಿ ಆತ್ಮಹತ್ಯೆ ಮಾಡಿಕೊಳ್ಳುಲು ಕಾರಣವಾಗಿರಬಹುದು ಎಂದು ಊಹಿಸಲಾಗಿದೆ.
ಅಲ್ಲದೆ ಕಳೆದ ಜುಲೈನಲ್ಲಿ ಸಾವಿನ ಬಗ್ಗೆ ಜಯಶ್ರೀ ಮಾತನಾಡಿದ್ದರು. ಈ ವೇಳೆ ಸುದೀಪ್ ನೀವು ಬಿಗ್ ಬಾಸ್ ಸ್ಪರ್ಧಿಯಾಗಿ ಮಾತ್ರ ನನಗೆ ಗೊತ್ತು. ಅದಕ್ಕಿಂತ ಹೆಚ್ಚು ನನಗೆ ಗೊತ್ತಿಲ್ಲ.
ಕಷ್ಟ, ಸಮಸ್ಯೆಗಳು ಇವೆ ಅಂತ ಆತ್ಮಹತ್ಯೆ ಮಾಡಿಕೊಳ್ಳಬಾರದು. ಎಲ್ಲರಿಗೂ ಅವರದ್ದೇ ಆದ ಸಮಸ್ಯೆಗಳಿರುತ್ತವೆ. ಹಾಗಂತ ಎಲ್ಲರೂ ಸಾವಿನ ಬಗ್ಗೆ ಯೋಚಿಸಿದರೆ ಹೇಗೆ, ಸಾವಿಗಿಂತ ಜೀವನ ದೊಡ್ಡದು ಎಂದು ಹೇಳಿದ್ದರು.
ಸುದೀಪ್ ಅವರ ಹಿತನುಡಿಗಳ ಬಳಿಕ ಜಯಶ್ರೀ ಸಾವಿನ ಮಾತು ಕೈಬಿಟ್ಟಿದ್ದರು. ಆದರೆ ಇದೀಗ ದಿಢೀರ್ ಅಂತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ
ಜಯಶ್ರೀ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!