ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಹೆಸರಿನಿಂದ ಜನರಿಗೆ ಚಿರಪರಿಚಿತರಾದ ಬಿ. ವಿಜಯ್ ಕುಮಾರ್ ಚಲನಚಿತ್ರ ಮತ್ತು ನಾಟಕ ರಂಗದಲ್ಲಿ ತೊಡಗಿಸಿಕೊಂಡಿದ್ದರು.
1983 ಜುಲೈ 17ರಂದು ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ, ಸಿಂಗಟಗೆರೆ ಹೋಬಳಿಯ, ರಂಗಾಪುರ ಗ್ರಾಮದಲ್ಲಿ ನಟ ಸಂಚಾರಿ ವಿಜಯ್ ಜನಿಸಿದ್ದರು. ಮೂಲತಃ ಕುಟುಂಬವೇ ಕಲೆಯ ಹಿನ್ನೆಲೆ ಹೊಂದಿದೆ.ಸಂಚಾರಿ ಹೆಸರಿನ ನಾಟಕ ತಂಡದಲ್ಲಿದ್ದ ಕಾರಣ ಇವರಿಗೆ ಸಂಚಾರಿ ವಿಜಯ್ ಎಂಬ ಹೆಸರು ಬಂತು. ನಾನು ಅವನಲ್ಲ, ಅವಳು ಚಿತ್ರಕ್ಕಾಗಿ 2014ರ ಸಾಲಿನ 62ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.ವಿಜಯ್ ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ತಾಯಿ ಗೌರಮ್ಮನವರು ಜಾನಪದ ಕಲಾವಿದರಾಗಿದ್ದು, ಭದ್ರಾವತಿಯ ರೇಡಿಯೋದಲ್ಲಿ ಅನೇಕ ಕಾರ್ಯಕ್ರಗಳನ್ನು ನೀಡಿದ್ದರು.ಇಂತಹ ಕುಟುಂಬದಲ್ಲಿ ಜನಿಸಿದ ವಿಜಯ್, ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಪ್ರತಿಷ್ಠಿತ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪೂರೈಸಿದ್ದರು.ಮಮ್ಮುಟಿ-ಸಂಚಾರಿ ವಿಜಯ್ಸಂಚಾರಿ ವಿಜಯ್ಸಂಚಾರಿ ವಿಜಯ್ಸಂಚಾರಿ ವಿಜಯ್ಕಿಚ್ಚ ಸುದೀಪ್-ವಿಜಯ್Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics