ಸಿನಿಮಾ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ; ಸೂಪರ್ ಸ್ಟಾರ್ ರಜನಿ ಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ
ದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
Published On : 25 Oct 2021, 3:36 pm
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 2019ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಅಸುರನ್ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಧನುಷ್ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು.ಭೋನ್ಸಲೆ ಚಿತ್ರಕ್ಕಾಗಿ ಮನೋಜ್ ಬಾಜಪೇಯ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದರುAdvertisement
Advertisement
ಬಾಲಿವುಡ್ ನಟಿ ಕಂಗನಾ ರಣಾವತ್ ಮಣಿವರ್ಣಿಕಾ ಮತ್ತು ಪಂಗಾ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು.ಸೂಪರ್ ಡಿಲಕ್ಸ್ ಚಿತ್ರಕ್ಕಾಗಿ ಅತ್ಯುತ್ತಮ ಪೋಷಕ ನಟ ವಿಜಯ್ ಸೇತುಪತಿಗೆ ಸಿಕ್ಕಿದೆ.ಚಿಚೋರ್ ಅತ್ಯುತ್ತಮ ಹಿಂದಿ ಚಿತ್ರಕ್ಕಾಗಿ ಬಾಲಿವುಡ್ ನಿರ್ಮಾಪಕ ಸಾಜಿದ್ ನಾಡಿಯಾವಾಲಾ ಪ್ರಶಸ್ತಿ ಪಡೆದರು