ಇತ್ತೀಚೆಗಷ್ಟೇ ಮದುವೆಯಾಗಿದ್ದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿಗಳಿಸಿರುವ ನಟಿ ನಯನತಾರಾ ಮತ್ತು ಪತಿ ವಿಘ್ನೇಶ್ ಶಿವನ್ ಪ್ರಸ್ತುತ ವಿದೇಶ ಪ್ರವಾಸದಲ್ಲಿ ಸಮಯ ಕಳೆಯುತ್ತಿದ್ದಾರೆ. 
ಸಿನಿಮಾ

ಸ್ಪೇನ್ ನಲ್ಲಿ ಲೇಡಿ ಸೂಪರ್ ಸ್ಟಾರ್, ಪತಿ ವಿಘ್ನೇಶ್ ಶಿವನ್ ಜೊತೆ ವಿದೇಶ ಪ್ರವಾಸ

ಇತ್ತೀಚೆಗಷ್ಟೇ ಮದುವೆಯಾಗಿದ್ದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿಗಳಿಸಿರುವ ನಟಿ ನಯನತಾರಾ ಮತ್ತು ಪತಿ ವಿಘ್ನೇಶ್ ಶಿವನ್ ಪ್ರಸ್ತುತ ವಿದೇಶ ಪ್ರವಾಸದಲ್ಲಿ ಸಮಯ ಕಳೆಯುತ್ತಿದ್ದಾರೆ.

ಹೌದು.. ನಯನತಾರಾ ಮತ್ತು ವಿಘ್ನೇಶ್ ಇಬ್ಬರು ವಿದೇಶಕ್ಕೆ ಹಾರಿದ್ದು, ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿಗಳಿಸಿರುವ ನಟಿ ನಯನತಾರಾ ಮತ್ತು ಪತಿ ವಿಘ್ನೇಶ್ ಶಿವನ್ ಸ್ಪೇನ್ ನಲ್ಲಿದ್ದಾರೆ.
ಮದುವೆ ಬಳಿಕ ಎರಡನೇ ಬಾರಿ ಹಿನಿಮೂನ್ ಪ್ರವಾಸಕ್ಕೆ ತೆರಳಿರುವ ನಯನತಾರಾ ದಂಪತಿ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಈ ಫೋಟೋಗಳು ವೈರಲ್ ಆಗಿವೆ.
ವಿಘ್ನೇಶ್ ಶಿವನ್ ಶೇರ್ ಮಾಡಿರುವ ಪತ್ನಿಯ ಹಾಟ್ ಫೋಟೋ ಗಳು ಅಭಿಮಾನಿಗಳ ನಿದ್ದೆಗೆಡಿಸಿದ್ದು, ನಯನತಾರಾ ಬೋಲ್ಡ್ ಲುಕ್‌ಗೆ ನೆಟ್ಟಿಗರಿಂದ ಮೆಚ್ಚುಗೆಯ ಕಾಮೆಂಟ್ ಮತ್ತು ಹಾರ್ಟ್ ಇಮೋಜಿ ಹರಿದುಬರುತ್ತಿದೆ.
ಅಂದಹಾಗೆ ವಿಘ್ನೇಶ್ ಶೇರ್ ಮಾಡಿರುವ ಪತ್ನಿ ನಯನತಾರಾ ಫೋಟೋದಲ್ಲಿ ಮಾಂಗಲ್ಯ ಸರ ಎದ್ದು ಕಾಣುತ್ತಿದೆ. ಮಾಂಗಲ್ಯ ನೋಡಿದ ಅಭಿಮಾನಿಗಳು ಇನ್ನು ಮಾಂಗಲ್ಯ ಸರ ಧರಿಸಿದ್ದೀರಾ ಗ್ರೇಟ್ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ವಿದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿರುವ ನಯನತಾರಾ ದಂಪತಿ ಬಾವುಟ ಹಿಡಿದಿರುವ ಫೋಟೋವನ್ನು ಶೇರ್ ಮಾಡಿದ್ದರು.ಇಬ್ಬರ ದೇಶಪ್ರೇಮದ ಫೋಟೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಕಾಮೆಂಟ್ ಹರಿದುಬಂದಿತ್ತು.
ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಜೂನ್ 9ರಂದು ಚೆನ್ನೈನ ಮಹಾಬಲಿಪುರಂನಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದ್ದರು.
ಇಬ್ಬರ ಮದುವೆಗೆ ಅನೇಕ ಸಿನಿ ಸೆಲೆಬ್ರಿಟಿಗಳು ಹಾಜರಾಗಿದ್ದರು. ರಜನಿಕಾಂತ್, ಶಾರುಖ್ ಖಾನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಸೌತ್ ಸ್ಟಾರ್ ನಟಿ ನಯನತಾರಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳಿನಲ್ಲಿ ನಯನತಾರಾ ಇರೈವನ್, ಕನೆಕ್ಟ್, ಲೇಡಿ ಸೂಪರ್ ಸ್ಟಾರ್ ಹಾಗೂ ತೆಲುಗಿನಲ್ಲಿ ಗಾಡ್ ಫಾದರ್ ಮಲಯಾಳಂನಲ್ಲಿ ಗೋಲ್ಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ.
ನಯನತಾರಾ ಸದ್ಯ ತಮಿಳು ಸಿನಿಮಾ ಜೊತೆಗೆ ಬಾಲಿವುಡ್ ಸಿನಿಮಾದಲ್ಲೂ ಬ್ಯುಸಿಯಾಗಿದ್ದು, ಬಾಲಿವುಡ್ ನಲ್ಲಿ ಶಾರುಖ್ ಖಾನ್ ಜೊತೆ ಜವಾನ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಜೂನ್ 2, 2023 ರಂದು ಚಿತ್ರಮಂದಿರಗಳಲ್ಲಿ ಬರಲು ಸಿದ್ಧವಾಗಿದೆ.
ಅವರು ಮುಂದಿನ 'ಗಾಡ್ ಫಾದರ್' ಚಿತ್ರದಲ್ಲಿ ದಕ್ಷಿಣ ನಟ ಮೋಹನ್ ಲಾಲ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು 2022 ರ ದಸರಾ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT