ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ (Deepika Padukone) ಕಾಣಿಸಿಕೊಂಡ ರೀತಿ ಅಶ್ಲೀಲವಾಗಿದೆ ಎಂದು ಜನರು ಟ್ರೋಲ್ ಮಾಡುತ್ತಿದ್ದಾರೆಈಗ ಸೋಶಿಯಲ್ ಮೀಡಿಯಾದಲ್ಲಿ #BoycottPathaan ಎಂಬ ಟ್ರೆಂಡ್ ಶುರುವಾಗಿದೆ. ಇದು ಹೀಗೆಯೇ ಮುಂದುವರಿದರೆ ‘ಪಠಾಣ್’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆ ಹೊಡೆತ ಬೀಳುವ ಸಾಧ್ಯತೆ ಇದೆ.ಹಾಡಿನಲ್ಲಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ‘ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ಬೇಷರಮ್ ರಂಗ್ (ನಾಚಿಕೆಯಿಲ್ಲದ ಬಣ್ಣ) ಎಂದಿರುವುದು ಸರಿಯಲ್ಲ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.ದೀಪಿಕಾ ಪಡುಕೋಣೆ ಅವರು ತುಂಬ ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಅವರು ಇಷ್ಟೊಂದು ಎಕ್ಸ್ಪೋಸ್ ಮಾಡುವ ಅವಶ್ಯಕತೆ ಏನಿತ್ತು ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.2023ರ ಜನವರಿ 25ರಂದು ‘ಪಠಾಣ್’ ಚಿತ್ರ ರಿಲೀಸ್ ಆಗಲಿದೆ. ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.ಶಾರುಖ್ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್ ಪ್ಯಾಕ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ, ಆದರೆ ಅವರನ್ನು, ಅವರ ಚಿತ್ರಗಳನ್ನು ವಿರೋಧಿಸಿಕೊಂಡು ಬರುವ ಒಂದು ವರ್ಗವಿದೆಶಾರುಖ್ ಮತ್ತು ದೀಪಿಕಾ ಪಡುಕೋಣೆ ಅವರ ಅಪ್ಪಟ ಅಭಿಮಾನಿಗಳಿಗೆ ಈ ಹಾಡು ತುಂಬ ಇಷ್ಟ ಆಗಿದೆಸಿಕ್ಸ್ ಪ್ಯಾಕ್ ನಲ್ಲಿ ಮಿಂಚಿದ ಶಾರೂಕ್