ಸ್ಟಾರ್ ಹೀರೋಯಿನ್ ಅನುಷ್ಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ಬಹುದಿನಗಳಿಂದ ಕಾಣಿಸಿಕೊಂಡಿಲ್ಲ. ಭಗವತಿ ಚಿತ್ರದ ನಂತರ ಅವರು ಯಾವುದೇ ಚಿತ್ರದಲ್ಲೂ ನಟಿಸಲು ಅಂಗೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಅನುಷ್ಕಾ ಸಂದರ್ಶನವೊಂದರಲ್ಲಿ ಟಾಲಿವುಡ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. 
ಸಿನಿಮಾ

ತೆಲುಗಿನಲ್ಲಿ ಅವಕಾಶಗಳು ಬೇಕೆಂದರೆ ಹಾಗೆ ಮಾಡಲೇಬೇಕು; ಕಾಸ್ಟಿಂಗ್ ಕೌಚ್ ಬಗ್ಗೆ ಅನುಷ್ಕಾ ಕಮೆಂಟ್‍

ಸ್ಟಾರ್ ಹೀರೋಯಿನ್ ಅನುಷ್ಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ಬಹುದಿನಗಳಿಂದ ಕಾಣಿಸಿಕೊಂಡಿಲ್ಲ. ಭಗವತಿ ಚಿತ್ರದ ನಂತರ ಅವರು ಯಾವುದೇ ಚಿತ್ರದಲ್ಲೂ ನಟಿಸಲು ಅಂಗೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಅನುಷ್ಕಾ ಸಂದರ್ಶನವೊಂದರಲ್ಲಿ ಟಾಲಿವುಡ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ”ಹೌದು, ಟಾಲಿವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇದೆ ಎಂದಿದ್ದಾರೆ.
ಅವಕಾಶ ಕೊಡಿಸುವುದಾಗಿ ಹೇಳಿ ನಾಯಕಿಯರನ್ನು ಒಲಿಸಿಕೊಳ್ಳುವ ಸಂಸ್ಕೃತಿ ತೆಲುಗು ಇಂಡಸ್ಟ್ರಿಯಲ್ಲಿಯೂ ಇದೆ. ನಾನು ಅಂತಹ ವಿಷಯಗಳನ್ನು ನೋಡಿದ್ದೇನೆ. ಇದು ತೆಲುಗಿನಲ್ಲಿ ಮಾತ್ರವಲ್ಲ.
ಎಲ್ಲ ಇಂಡಸ್ಟ್ರಿಗಳಲ್ಲೂ ಇದೆ. ಆದರೆ, ನಾನು ಇಂಡಸ್ಟ್ರಿಗೆ ಬಂದಾಗಿನಿಂದ ತುಂಬಾ ನೇರವಾಗಿ ಮಾತನಾಡುತ್ತೇನೆ. ಹಾಗಾಗಿಯೇ ನನಗೆ ಅಂತಹ ಪರಿಸ್ಥಿತಿ ಎದುರಾಗಿಲ್ಲ.
ಟಾಲಿವುಡ್ ಇಂಡಸ್ಟ್ರಿಯಲ್ಲಿಯೂ ಮಹಿಳೆಯರು ಲೈಂಗಿಕ ಕಿರುಕುಳದಿಂದ ಹೋರಾಡುತ್ತಲೆ ಇದ್ದಾರೆ ಎಂದು ಹೇಳಿದ್ದಾರೆ. ನಾನು ಸಹ ಇದನ್ನು ಒಪ್ಪುತ್ತೇನೆ. ಆದರೆ ನಾನು ಸ್ವಲ್ಪ ಒರಟಾಗಿಯೇ ವರ್ತಿಸುತ್ತಿದ್ದರಿಂದ ಇಂಥ ವಿಚಾರ ಯಾರೂ ನನ್ನೊಂದಿಗೆ ಮಾತನಾಡಲಿಲ್ಲ ಎಂದಿದ್ದಾರೆ.
ಅನುಷ್ಕಾ ಸೂಪರ್ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಪದಾರ್ಪಣೆ ಮಾಡಿದ್ದರು. ಆ ನಂತರ ಅವರ ಖಾತೆಗೆ ವಿಕ್ರಮಾರ್ಕುಡು, ಅರುಂಧತಿ, ಮಿರ್ಚಿಯಂತಹ ಕಮರ್ಷಿಯಲ್ ಹಿಟ್ ಚಿತ್ರಗಳು ಸೇರ್ಪಡೆಯಾದವು.
ಅರುಂಧತಿ ಜೊತೆ ಮಹಿಳಾ ಪ್ರಧಾನ ಚಿತ್ರಗಳಲ್ಲಿ ನಟಿಸಿರುವ ಅನುಷ್ಕಾ ನಂತರ ಝೀರೋ ಸೈಜ್ ಮತ್ತು ಭಾಗಮತಿ ಚಿತ್ರಗಳಲ್ಲಿ ನಟಿಸಿದ್ದಾರೆ. ಭಾಗಮತಿ ಚಿತ್ರದ ನಂತರ ಸ್ವೀಟಿ ಯಾವುದೇ ಚಿತ್ರಕ್ಕೆ ಕಮಿಟ್ ಆಗಿಲ್ಲ.
ಅನುಷ್ಕಾ ಶೆಟ್ಟಿ
ಅನುಷ್ಕಾ ಶೆಟ್ಟಿ
ಅನುಷ್ಕಾ ಶೆಟ್ಟಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ