ಕೇರಳದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ನಟಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ನಟಿ ಭಾವನಾ ಪ್ರತಿಕ್ರಿಯೆ ನೀಡಿದ್ದಾರೆ. 
ಸಿನಿಮಾ

ಲೈಂಗಿಕ ಕಿರುಕುಳ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗಲು ನನ್ನ ಹೋರಾಟದ ಹಾದಿ ಮುಂದುವರೆಸುತ್ತೇನೆ: ನಟಿ ಭಾವನಾ ಎಚ್ಚರಿಕೆ

ಕೇರಳದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ನಟಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ನಟಿ ಭಾವನಾ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲು ನನ್ನ ಹೋರಾಟದ ಹಾದಿ ಮುಂದುವರೆಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಪ್ಪಿತಸ್ಥರಿಗೆ ಶಿಕ್ಷೆಯಾಗಲು ನನ್ನ ಹೋರಾಟದ ಹಾದಿ ಮುಂದುವರೆಸುತ್ತೇನೆ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಎಚ್ಚರಿಕೆ ನೀಡಿದ್ದಾರೆ.
ಕೇರಳದಲ್ಲಿ ಐದು ವರ್ಷಗಳ ಹಿಂದೆ ತಮ್ಮ ಮೇಲೆ ನಡೆದಿದೆ ಎನ್ನಲಾಗ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನಟಿ ಭಾವನಾ ನೋವನ್ನು ತೋಡಿಕೊಂಡಿದ್ದಾರೆ.
ನನ್ನ ಹೋರಾಟದ ಹಾದಿಯಲ್ಲಿ ನಾನು ಒಬ್ಬಂಟಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲು ನನ್ನ ಹೋರಾಟ ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಐದು ವರ್ಷಗಳ ಹಿಂದೆ ನಡೆದ ಘಟನೆಯನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಮೆಲುಕು ಹಾಕಿದ ಭಾವನಾ ಅವರು, 'ಐದು ವರ್ಷದ ಹಾದಿ ಬಲಿಪಶುವಿನಿಂದ ಬದುಕುವ ಹುಮ್ಮಸ್ಸಿನೊಂದಿಗಿನ ಹಾದಿ ಸುಲಭವಾಗಿರಲಿಲ್ಲ. ಆ ಸಂದರ್ಭದಲ್ಲಿ ಎಷ್ಟೋ ಮಂದಿ ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದರು. ಅವಮಾನಿಸಿದರು.
ಇನ್ನು ಕೆಲವು ಧ್ವನಿಗಳು ನನ್ನ ಪರವಾಗಿ ಮಾತನಾಡಿದವು. ಇದೆಲ್ಲವನ್ನು ನೋಡಿದಾಗ ನನ್ನ ನ್ಯಾಯದ ಹೋರಾಟದ ಹಾದಿಯಲ್ಲಿ ನಾನು ಒಬ್ಬಂಟಿಯಲ್ಲ ಎಂದೆನಿಸುತ್ತಿದೆ.
ನಟಿ ಭಾವನಾ
ನ್ಯಾಯ ಗೆಲ್ಲಲು, ಯಾವುದೇ ಮಹಿಳೆಯು ಇಂತಹ ಹೀನಾ ಪರಿಸ್ಥಿತಿಗೆ ಒಳಗಾಗದಂತೆ ನೋಡಿಕೊಳ್ಳಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲು ನನ್ನ ಹೋರಾಟದ ಹಾದಿ ಮುಂದುವರೆಸುತ್ತೇನೆ. ನನ್ನ ಪರವಾಗಿ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
ನಟಿ ಭಾವನಾ
ಇನ್ನು ನಟಿ ಭಾವಾನ ಅವರ ಪೋಸ್ಟ್ ಗೆ ಖ್ಯಾತ ನಟ ಮಮ್ಮುಟಿ ಬೆಂಬಲ ನೀಡಿದ್ದು, ನಿಮ್ಮ ಪರವಾಗಿ ನಾವಿದ್ದೇವೆ ಎಂದು ರಿಪ್ಲೈ ಮಾಡಿದ್ದಾರೆ.
ನಟಿ ಭಾವನಾ
ಕೇರಳ ಮೂಲದ ನಟಿ ಭಾವನಾ ಅವರು, ಕನ್ನಡ, ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ.
ನಟಿ ಭಾವನಾ
ಇತ್ತೀಚೆಗೆ ನಟಿ ಭಾವನಾ ಅವರು, ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾದಲ್ಲಿ ನಾಯಕಿ ನಟಿಯಾಗಿ ಕಾಣಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!