ಖ್ಯಾತ ತಮಿಳು ಕಿರುತೆರೆ ನಟಿ, ನಿರೂಪಕಿ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ ಅವರ ವಿವಾಹ ನಡೆದಿದೆ. 
ಸಿನಿಮಾ

ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ

ಖ್ಯಾತ ತಮಿಳು ಕಿರುತೆರೆ ನಟಿ, ನಿರೂಪಕಿ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ ಅವರ ವಿವಾಹ ನಡೆದಿದೆ.

ಇಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಮಹಾಲಕ್ಷ್ಮಿ ಈ ಹಿಂದೆ ಅನಿಲ್ ಎಂಬುವವರನ್ನು ಮದುವೆಯಾಗಿದ್ದರು. ಆದರೆ 2019 ರಲ್ಲಿ ವಿವಿಧ ಸಮಸ್ಯೆಗಳ ಕಾರಣದಿಂದ ವಿಚ್ಛೇದನ ಪಡೆದರು. ಅವರ ಹಿಂದಿನ ಮದುವೆಯಿಂದ ಅವರಿಗೆ ಒಬ್ಬ ಮಗನಿದ್ದಾನೆ.
ಸೆಪ್ಟೆಂಬರ್ 1 ರ ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ದಂಪತಿಗಳು ಸಪ್ತಪದಿ ತುಳಿದಿದ್ದು, ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ರವೀಂದರ್‌ ಚಂದ್ರಶೇಖರನ್ ಹಾಗೂ ಮಹಾಲಕ್ಷ್ಮೀ ಒಂದೇ ಇಂಡಸ್ಟ್ರಿಯಲ್ಲಿ ಇದ್ದವರು. ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು.
ರವೀಂದರ್ ನಿರ್ಮಾಣದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದು, ಆ ಚಿತ್ರದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದರು.
ಮಹಾಲಕ್ಷ್ಮೀ ಅವರು ತಮಿಳು ಕಿರುತೆರೆ ಮಂದಿಗೆ ಚಿರಪರಿಚಿತರು. ಅವರು ಹಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಸದ್ಯ ಅವರ ನಟನೆಯ ‘ಮಹಾರಸಿ’ ಹೆಸರಿನ ಧಾರಾವಾಹಿ ಪ್ರಸಾರ ಆಗುತ್ತಿದೆ.
ರವೀಂದರ್‌ ಅವರು ತಮಿಳು ಚಿತ್ರರಂಗದಲ್ಲಿ ಫೇಮಸ್ ಆಗಿದ್ದಾರೆ. ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
‘ನನ್ನ ಜೀವನದಲ್ಲಿ ನಿಮ್ಮನ್ನು ಪಡೆದುಕೊಳ್ಳಲು ನಾನು ತುಂಬಾ ಅದೃಷ್ಟ ಮಾಡಿದ್ದೆ. ನನ್ನ ಜೀವನದಲ್ಲಿ ನೀವು ಪ್ರೀತಿ ತುಂಬಿದ್ದೀರಿ. ಲವ್​ ಯೂ’ ಎಂದು ಮಹಾಲಕ್ಷ್ಮೀ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ