2024 ಹೊಸ ವರ್ಷ ಬರಮಾಡಿಕೊಳ್ಳುವ ಮುನ್ನ, 2023 ರಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ವರ್ಷ ವಿವಾಹ ಬಂಧನಕ್ಕೆ ಒಳಗಾದ ತಾರೆಯರ ಪಟ್ಟಿ ಇಲ್ಲಿದೆ ನೋಡಿ… 
ಸಿನಿಮಾ

ಹಿನ್ನೋಟ 2023: ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರೆಯರು

2024 ಹೊಸ ವರ್ಷ ಬರಮಾಡಿಕೊಳ್ಳುವ ಮುನ್ನ, 2023 ರಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ವರ್ಷ ವಿವಾಹ ಬಂಧನಕ್ಕೆ ಒಳಗಾದ ತಾರೆಯರ ಪಟ್ಟಿ ಇಲ್ಲಿದೆ ನೋಡಿ…

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅವರ ಮದುವೆ ಅವಿವಾ ಬಿದಪ್ಪ ಜೊತೆ ನಡೆಯಿತು. ಅಭಿಷೇಕ್ - ಅವಿವಾ ವಿವಾಹಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು, ಅಪಾರ ಅಭಿಮಾನಿಗಳು ಸಾಕ್ಷಿಯಾಗಿದ್ದರು.
ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಈ ವರ್ಷ ವಿವಾಹ ಬಂಧನಕ್ಕೆ ಒಳಗಾದರು. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ - ವಸಿಷ್ಠ ಸಿಂಹ ವಿವಾಹ ಮಹೋತ್ಸವ ಜರುಗಿತು.
ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಮತ್ತು ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಅವರು ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಕೊಡವ ಸಂಪ್ರದಾಯದಂತೆಯೇ ಮದುವೆಯ ಎಲ್ಲ ಶಾಸ್ತ್ರಗಳು ನಡೆದವು.
ಕನ್ನಡ ಚಿತ್ರಗಳಲ್ಲೂ ಮಿಂಚಿರುವ ಪರಭಾಷಾ ನಟ ಕಬೀರ್ ದುಹಾನ್ ಸಿಂಗ್ ತಮ್ಮ ಬಹುಕಾಲದ ಗೆಳತಿ ಸೀಮಾ ಚಾಹಲ್ ಅವರನ್ನ ಮದುವೆಯಾದರು. ಫರೀದಾಬಾದ್‌ನ ಹೋಟೆಲ್‌ನಲ್ಲಿ ಕಬೀರ್ ದುಹಾನ್ ಸಿಂಗ್ - ಸೀಮಾ ಚಾಹಲ್ ವಿವಾಹ ಜರುಗಿತು.
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಂಬೈನ ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಐಷಾರಾಮಿ ಫಾರ್ಮ್ ಹೌಸ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಅಧಿಕೃತ
ಈ ವರ್ಷ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ - ಎಎಪಿ ಮುಖಂಡ ರಾಘವ್ ಚಡ್ಡಾ ವಿವಾಹ ಮಹೋತ್ಸವ ಗ್ರ್ಯಾಂಡ್ ಆಗಿ ನಡೆಯಿತು. ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಪರಿಣಿತಿ ಚೋಪ್ರಾ - ರಾಘವ್ ಚಡ್ಡಾ ವಿವಾಹ ಬಂಧನಕ್ಕೆ ಒಳಗಾದರು.
ಮುಂಗಾರು ಮಳೆ ಸಿನಿಮಾ ಖ್ಯಾತಿಯ ಪೂಜಾ ಗಾಂಧಿ ವೈವಾಹಿಕ ಬದುಕಿಗೆ ನಾಂದಿ ಹಾಡಿದರು. ಉದ್ಯಮಿ ವಿಜಯ್‌ ಘೋರ್ಪಡೆ ಅವರನ್ನ ಪೂಜಾ ಗಾಂಧಿ ಮದುವೆಯಾದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯ ಅನುಸಾರ, ಪೂಜಾ ಗಾಂಧಿ - ವಿಜಯ್ ಘೋರ್ಪಡೆ ವಿವಾಹ ಸರಳವಾಗಿ ನಡೆಯಿತು.
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ಗೆ 'ವಜ್ರಕಾಯ' ದಲ್ಲಿ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ಅವರು ಇದೇ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಸಪ್ತಪದಿ ತುಳಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT