ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.17ಕ್ಕೆ ನಿಗದಿಯಾಗಿದ್ದ ಮದುವೆಯನ್ನು ಮುಂದೂಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ ಅವರು ಇದೀಗ ಸರಳವಾಗಿ ತಮ್ಮ ಪುತ್ರಿಯ ವಿವಾಹವನ್ನು ನೆರವೇರಿಸಿದ್ದಾರೆ.
ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶ್ರೇಯಾ ಮತ್ತು ಶೇಶಿರುದ್ಧ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಮದುವೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ಆಶೀರ್ವದಿಸಿದರು.ಮದುವೆ ಫೋಟೋಮದುವೆ ಫೋಟೋಮದುವೆ ಫೋಟೋ