ಕರ್ನಾಟಕ

ಮೈಸೂರು ದಸರಾ-2021 ಮಹೋತ್ಸವಕ್ಕೆ ಚಾಲನೆ

Srinivasamurthy VN
ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು.
ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್​.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ,
ಇದಕ್ಕೂ ಮುನ್ನ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿಯವರು, ಕೃಷ್ಣರಾಜ ಸಾಗರ ಡ್ಯಾಮ್ ಬಳಿ ತಮ್ಮ ಪತ್ನಿ ಸಮೇತವಾಗಿ ತಾಯಿ ಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದರು.
ದಸರಾ ಮಹೋತ್ಸವ ಇಂದಿನಿಂದ ಆರಂಭವಾಗಿದ್ದು, ಒಂಬತ್ತು ದಿನಗಳ ಕಾಲ (ಅ.7ರಿಂದ 15ರವರೆಗೆ) ನಡೆಯಲಿದೆ.
ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆಯೇ ಈ ಬಾರಿಯೂ ಕೂಡ ನಾಡಿನಲ್ಲಿ ದಸರಾ ಹಬ್ಬವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ.
SCROLL FOR NEXT