ಕರ್ನಾಟಕ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Sumana Upadhyaya
ಅಕಾಲಿಕ ಮರಣ ಕಂಡ ಕನ್ನಡದ ಯುವರತ್ನ ಡಾ.ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಅವರು ಗತಿಸಿ 5 ತಿಂಗಳು ಕಳೆದ ನಂತರವೂ ಗಣ್ಯರು, ಸೆಲೆಬ್ರಿಟಿಗಳು ಭೇಟಿ ನೀಡುವುದು ಕಡಿಮೆಯಾಗಿಲ್ಲ.
ಅಕಾಲಿಕ ಮರಣ ಕಂಡ ಕನ್ನಡದ ಯುವರತ್ನ ಡಾ.ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಅವರು ಗತಿಸಿ 5 ತಿಂಗಳು ಕಳೆದ ನಂತರವೂ ಗಣ್ಯರು, ಸೆಲೆಬ್ರಿಟಿಗಳು ಭೇಟಿ ನೀಡುವುದು ಕಡಿಮೆಯಾಗಿಲ್ಲ.
ರಾಜ್ಯ ಭೇಟಿಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅಪ್ಪು ನಿವಾಸಕ್ಕೆ ಭೇಟಿ ಕೊಟ್ಟು ಅವರ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಭೇಟಿಯ ಫೋಟೋಗಳನ್ನು ಟ್ವೀಟ್ ಮಾಡಿ ಕನ್ನಡದಲ್ಲಿ ಬರೆದುಕೊಂಡಿದ್ದಾರೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಮತ್ತು ರಾಘಣ್ಣಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದರು. ಈ ವೇಳೆ ರಾಹುಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ವಾಮಿ ಸಾಥ್ ಕೊಟ್ಟಿದ್ದರು.
ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರು ಹಾಜರಿದ್ದರು.
ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿಗಳೊಂದಿಗೆ ನಿನ್ನೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ
ರಾಹುಲ್ ಗಾಂಧಿಯವರಿಗೆ ಶ್ರೀಗಳಿಂದ ಸನ್ಮಾನ
ಸಿದ್ದಗಂಗಾ ಮಠದಲ್ಲಿ ಕಾಂಗ್ರೆಸ್ ನಾಯಕರು
ಡಾ ಶಿವಕುಮಾರ ಸ್ವಾಮಿಗಳ ಗದ್ದುಗೆ ಬಳಿ ರಾಹುಲ್ ಗಾಂಧಿ ಮತ್ತು ಇತರರು
ಸಿದ್ದಗಂಗಾ ಶ್ರೀಗಳೊಂದಿಗೆ ಸಮಾಲೋಚನೆ
SCROLL FOR NEXT