ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. 
ಕರ್ನಾಟಕ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಲಕ್ಷಾಂತರ ಮಂದಿ ಸಾಕ್ಷಿ, ಜೈಕಾರ, ಘೋಷಣೆಗಳೊಂದಿಗೆ ತಾಯಿ ಚಾಮುಂಡೇಶ್ವರಿಗೆ ನಮನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಬುಧವಾರ ಸಂಜೆ 5.37ಕ್ಕೆ ಅರಮನೆ ಆವರಣದಲ್ಲಿ ಚಾಲನೆ ದೊರಕಿದ ಬಳಿಕ ಜಂಬೂಸವಾರಿ ರಾಜಪಥವನ್ನು ಪ್ರವೇಶಿಸಿದಾಗ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಮಧ್ಯಾಹ್ನ 2.34ಕ್ಕೆ ಅರಮನೆ ಹೊರ ಆವರಣದ ಕೋಟೆ ಆಂಜನೇಯ ಗುಡಿಯ ಮುಂದೆ ನಂದಿ ಧ್ವಜಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿದ ಬಳಿಕ ಸ್ತಬ್ದಚಿತ್ರ ಮತ್ತು ಕಲಾತಂಡಗಳ ಮೆರವಣಿಗೆ ಆರಂಭವಾಯಿತು.
3ನೇ ಬಾರಿಗೆ ಅಭಿಮನ್ಯು ಆನೆ ದೇವಿ ಚಾಮುಂಡೇಶ್ವರಿ ವಿರಾಜಮಾನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಿದೆ. ಅಭಿಮನ್ಯುವಿನೊಂದಿಗೆ ಅರ್ಜುನ ನಿಶಾನೆ ಆನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಲಿವೆ. ಒಟ್ಟು 9 ಆನೆಗಳು ರಾಜ ಬೀದಿಗಳಲ್ಲಿ ಸಾಗುತ್ತಿದೆ.
ಜಂಬೂಸವಾರಿಯನ್ನು ಅರಮನೆಯ ಹೊರಗಿನಿಂದ ವೀಕ್ಷಿಸಲು ಚಾಮರಾಜೇಂದ್ರ ವೃತ್ತ, ಕೆ.ಆರ್‌.ವೃತ್ತ, ಸಯ್ಯಾಜಿರಾವ್‌ ರಸ್ತೆಯಲ್ಲಿ ಸಾವಿರಾರು ಮಂದಿ ನೆರೆದಿದ್ದರು. ದೀಪಾಲಂಕಾರಕ್ಕೆಂದು ಅಳವಡಿಸಿದ್ದ ಕಂಬಗಳು, ಕಟೌಟ್‌ಗಳ ಮೇಲೂ ಅಪಾಯ ಲೆಕ್ಕಿಸದೆ ಕುಳಿತಿದ್ದರು.
ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌, ಎಸ್.ಎ.ರಾಮದಾಸ್ , ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿ ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಚಂದ್ರ ಗುಪ್ತ, ವೇದಿಕೆಯಲ್ಲಿದ್ದರು.
ಆಕರ್ಷಕವಾದ ಸ್ತಬ್ದ ಚಿತ್ರಗಳು, ಪೊಲೀಸ್‌ ಪಡೆ, ಅಶ್ವಾರೋಹಿ ಪಡೆಗಳೊಂದಿಗೆ, ಮಂಗಳವಾದ್ಯ, ವೀರಗಾಸೆ, ಕತ್ತಿ ವರಸೆ, ನಗಾರಿ, ಡೊಳ್ಳು, ಕಂಸಾಳೆ, ತಾಳಮದ್ದಲೆ, ಪಟ ಕುಣಿತ, ಗೊಂಬೆ ಕುಣಿತ ಸೇರಿದಂತೆ 53 ಜನಪದ ಕಲಾ ತಂಡಗಳ ನೂರಾರು ಕಲಾವಿದರು ನೃತ್ಯ–ನಡಿಗೆಯ ಮೂಲಕ ಕಲೆ–ಸಾಂಸ್ಕೃತಿಕ ವೈಭವವನ್ನು ಸೃಷ್ಟಿಸಿ ಮೆರವಣಿಗೆಗ
ಈ ಬಾರಿ ವಿಶೇಷವಾಗಿ ನಟ ದಿ. ಪುನೀತ್​ ರಾಜಕುಮಾರ್​ ಭಾವಚಿತ್ರ ಇರುವ ಸ್ತಬ್ಧಚಿತ್ರ ಸೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT