ವಿಶ್ವವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಬೆಳಗ್ಗೆ ವಿಧ್ಯುಕ್ತ ಚಾಲನೆ ನೀಡಿದ ನಂತರ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು 7ನೇ ಬಾರಿ ಖಾಸಗಿ ದರ್ಬಾರ್ ನಡೆಸಿದರು.
ಮೈಸೂರು ಅರಮನೆಯಲ್ಲಿ ಕೂಡ ಎರಡು ವರ್ಷಗಳ ಬಳಿಕ ಖಾಸಗಿ ದರ್ಬಾರ್ ಅದ್ದೂರಿಯಾಗಿ ನಡೆಯಿತು.ಯದುವೀರ್ ಒಡೆಯರ್ ಅವರು ಚಿನ್ನದ ಸಿಂಹಾಸನಕ್ಕೆ ಪೂಜೆ ಸಲ್ಲಿಸಿದ ನಂತರ ವೇದ ಘೋಷಗಳೊಂದಿಗೆ ಪೂಜೆ ಸಲ್ಲಿಸಿ ಖಾಸಗಿ ದರ್ಬಾರ್ ನ್ನು ನೆರವೇರಿಸಿದರು.ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು 10 ದಿನಗಳ ಕಾಲ ನಡೆಯಲಿವೆ.ನವರಾತ್ರಿ ಮೊದಲ ದಿನವಾದ ಇಂದು ಮುಂಜಾನೆ 5.10ರಿಂದ 5.30ರೊಳಗೆ ದರ್ಬಾರ್ ಹಾಲ್‍ನಲ್ಲಿ ಜೋಡಿಸಲಾಗಿರುವ ಸಿಂಹಾಸನಕ್ಕೆ `ಸಿಂಹ’ ಜೋಡಣಾ ಕಾರ್ಯ ನಡೆಯಿತು.ನಂತರ ಬೆಳಗ್ಗೆ 8.05ರಿಂದ 8.55ರವರೆಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚಾಮುಂಡಿತೊಟ್ಟಿಯಲ್ಲಿ ಕಂಕಣ ಧಾರಣೆ ನೆರವೇರಿತು.ಯದುವೀರ್ ಒಡೆಯರ್ಯದುವೀರ್ ಒಡೆಯರ್