ಸರ್ಕಾರದ ಮೊದಲ ಗ್ಯಾರಂಟಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೇವೆ ‘ಶಕ್ತಿ’ ಯೋಜನೆಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಯೋಜನೆ ಅಡಿ ಮಹಿಳಾ ಪ್ರಯಾಣಿಕರಿಗೆ ನೀಡಲಿರುವ ಶಕ್ತಿ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಸಾಂಕೇತಿಕವಾಗಿ ಐವರು ಫಲಾನುಭವಿಗಳಿಗೆ ವಿತರಿಸಲಾಯಿತು.ಮಹಿಳೆಯರು, ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಕ್ಕಿದೆ. 18,609 ಬಸ್‍ಗಳು ಉಚಿತ ಪ್ರಯಾಣಕ್ಕೆ ಲಭ್ಯ ಇವೆ. 41.80 ಲಕ್ಷ ಮಹಿಳೆಯರು ಈ ಸೌಲಭ್ಯದ ಫಲಾನುಭವಿಗಳು ಎಂದು ಅಂದಾಜಿಸಲಾಗಿದೆ. ಅಂತಾರಾಜ್ಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಮಂಗಳಮುಖಿಯರು ಸಹ ಉಚಿತವಾಗಿ ಪ್ರಯಾಣ ಮಾಡಬಹುದು. ಮಹಿಳೆಯರಿಗೆ ಶಕ್ತರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆತಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್, ಶೂನ್ಯ ದರ ಎಂದು ಸಾರಿಗೆ ಇಲಾಖೆಯಿಂದ ನಮೂದುಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳೆಯರಿಗೆ ಟಿಕೆಟ್ ಹರಿದು ಕೊಡುವ ಮೂಲಕ ಮತ್ತೊಮ್ಮೆ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು.ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ. ಯಾವುದಾದರೂ ಐಡಿ ತೋರಿಸಿದರೆ ಪ್ರಯಾಣ ಮಾಡಬಹುದು. ಸ್ಮಾರ್ಟ್ ಕಾರ್ಡ್ ಮಾಡಿಸಲು ಯಾರೂ ದುಡ್ಡು ಕೊಡಬೇಕಿಲ್ಲ. ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶವಿದೆ. ಮಧ್ಯಾಬಸ್ಸಿನಲ್ಲಿ ಪ್ರಯಾಣಿಸಿ ಮಹಿಳಾ ಪ್ರಯಾಣಿಕರನ್ನು ಮಾತನಾಡಿಸಿದ ಸಿಎಂ ಸಿದ್ದರಾಮಯ್ಯಧಾರವಾಡದಲ್ಲಿ ಬಸ್ಸಿಗೆ ಹತ್ತುತ್ತಿರುವ ಮಹಿಳೆಯರುಧಾರವಾಡ ಘಟಕದಲ್ಲಿ ಮಹಿಳೆಯರು ಸೇರಿದಂತೆ ಪ್ರಯಾಣಿಕರನ್ನು ಹೊತ್ತು ಸಾಗಲಿರುವ ಬಸ್ಸುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಹೊರಡುವ ಬಸ್ಸಿಗೆ ಮೆಜೆಸ್ಟಿಕ್ ಕೆಎಸ್‍ಆರ್ ಟಿಸಿಯಲ್ಲಿ ಚಾಲನೆ ನೀಡುವ ಮೂಲಕ ‘ಶಕ್ತಿ’ ಯೋಜನೆಯನ್ನು ರಾಜ್ಯದಲ್ಲಿ ಪ್ರಾರಂಭಿಸಿದರು. ಎರಡನೇ ಬಸ್ ಮೈಸೂರು ಕಡೆಗೆ ತೆರಳಿದ್ದು, ಮೂರನೇ ಬಸ್ ಕಲಬುರುಗಿ ಹಾಗೂ ನಾಲ್ಕನೇ ಬಸ್ ಬೆಳಗಾವಿ ಕಡೆಗೆ ಹೊರಟಿದೆ.ಮಹಿಳೆಯರಿಗೆ ಶಕ್ತಿ ತುಂಬಲು ‘ಶಕ್ತಿ ಯೋಜನೆ’ ಎಂಬ ಹೆಸರು ಇಟ್ಟಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಪಾಲ್ಗೊಂಡಾಗ ಮಾತ್ರ ದೇಶ ಅಭಿವೃದ್ದಿ. ಬಡವರ ಜೇಬಿಗೆ ದುಡ್ಡು ಹಾಕುವುದೇ ನಮ್ಮ ಸರ್ಕಾರದ ಉದ್ದೇಶ. 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳು ಮಹಿಳೆಯರಿಗೆ ಸೀಮಿತವಾಗಿದೆ. ಹೆಣ್ಣು ಸಮಾಜದ ಕಣ್ಣು ಇದ್ದಂತೆ ಎಂದು ಮಧಾರವಾಡದಿಂದ ಬೈಲಹೊಂಗಲಕ್ಕೆ ಪ್ರಯಾಣಿಸಲು ಹೊರಟ ವೃದ್ಧೆ ಬಸ್ಸಿಗೆ ತಲೆಬಾಗಿ ಕೈಮುಗಿದು ಹತ್ತುತ್ತಿರುವ ದೃಶ್ಯಮುಂದಿನ ಮೂರು ತಿಂಗಳಲ್ಲಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದು, ಇದಕ್ಕಾಗಿ ಸೇವಾ ಸಿಂಧು ಅಡಿ ಅರ್ಜಿ ಸಲ್ಲಿಸಬೇಕಿದ್ದು, ಅದೂ ಉಚಿತ ಆಗಿರುತ್ತದೆ