ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿದ್ದ ಯುವತಿ ಸಾವಿಗೀಡಾಗಿದ್ದಾಳೆ. 
ಕರ್ನಾಟಕ

ಆಲಿಕಲ್ಲು ಮಳೆಗೆ ಬೆಂಗಳೂರು ತತ್ತರ: ಮಳೆಗೆ ಯುವತಿ ಬಲಿ, ಆಸ್ಪತ್ರೆಗೆ ಸಿದ್ದು ಭೇಟಿ; ಭೀಕರ ಫೋಟೋಗಳು!

ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದ ಕುಟುಂಬ ಕೆಆರ್ ಸರ್ಕಲ್ ಅಂಡರ್ ಪಾಸ್ ಪ್ರವೇಶಿಸಿದ್ದು, ಈ ವೇಳೆ ಕಾರು ನೀರಿನಲ್ಲಿ ಮುಳುಗಿದೆ.
ಕೂಡಲೇ ಸ್ಥಳಿಯರು ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾದರು. ಚಾಲಕ ಸಹಿತ ಭಾನುರೇಖಾ ಪೋಷಕರನ್ನು ರಕ್ಷಿಸಿದ್ದಾರೆ.
ಆದರೆ ಕಾರಿನಲ್ಲಿದ್ದ ಭಾನುರೇಖಾ ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸಮೀಪದ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಭಾನುರೇಖಾ ಸಾವನ್ನು ವೈದ್ಯರು ಖಚಿತಪಡಿಸಿದ್ದಾರೆ.
ಅಂತೆಯೇ ಆಸ್ಪತ್ರೆ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದ್ದು, ಭಾನುರೇಖಾರನ್ನು ಆಸ್ಪತ್ರೆಗೆ ಕರೆತಂದಾಗ ಚಿಕಿತ್ಸೆ ನೀಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಪರಿಣಾಮ ಯುವತಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ಜಾರೆ.
ವಿಚಾರ ತಿಳಿಯುತ್ತಲೇ ಆಸ್ಪತ್ರೆಗೆ ದೌಡಾಯಿಸಿದ ಸಿಎಂ ಸಿದ್ದರಾಮಯ್ಯ ಅವರು ಮೃತ ಯುವತಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದು, 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಅಲ್ಲದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ
ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ
ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ
ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ
ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT