ಜನವರಿ 25, 2015ರಂದು ಮುಂಬೈನ ಪಟೌಡಿ ಹೌಸ್ ನಲ್ಲಿ ಬಾಲಿವುಡ್ ನಟಿ ಸೋಹಾ ಅಲಿ ಖಾನ್ ಅವರು ತಮ್ಮ ಬಾಯ್ ಫ್ರೆಂಡ್ ಕಮ್ ನಟ ಕುನಾಲ್ ಖೇಮು ಅವರನ್ನು ವರಿಸಿದರು. 
ಹಿನ್ನೋಟ 2015

2015ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರೆಯರು

ಫೆಬ್ರುವರಿ 5ರಂದು 'ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ' ಎಂದು ಹಾಡಿದ ಮುದ್ದಾದ ಹುಡುಗಿ ಖ್ಯಾತ ಗಾಯಕಿ ಶ್ರೇಯಾ ಘೋಷಲ್ ಅವರು ಸಿಟಿಒ ಕಂಪೆನಿಯ ಸಹ ಸಂಸ್ಥಾಪಕ ಶೈಲಾದಿತ್ಯ ಮುಖ್ಯೋಪಾಧ್ಯಾಯ ಅವರನ್ನು ವರಿಸಿದರು.
ನವೆಂಬರ್ 29ರಂದು ನಟ ಮಯೂರ್ ಪೇಟಲ್ ಅವರು ಮಂಗಳೂರು ಮೂಲದ ಕಾವ್ಯ ಎಸ್ ಎಂಬುವವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಅಕ್ಟೋಬರ್ 30ರಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರು ಉದ್ಯಮಿ ಪುತ್ರಿ ರಾಜಶ್ರೀ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಅಕ್ಟೋಬರ್ 25ರಂದು ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್‌ ಅವರು ತಮ್ಮ ಬಾಲ್ಯದ ಗೆಳತಿ ರಾಗಿಣಿ ಚಂದ್ರನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಕ್ಟೋಬರ್ 29ರಂದು ಭಾರತ ಕ್ರಿಕೆಟ್ ತಂಡದ ಆಫ್‌ಸ್ಪಿನ್ನರ್ ಹರಭಜನ್ ಸಿಂಗ್ ಅವರು ಚಿತ್ರನಟಿ ಗೀತಾ ಬಸ್ರಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಆಗಸ್ಟ್ 31ರಂದು ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಜ್ ಕುಮಾರ್ ಅವರ ಪುತ್ರಿ ಡಾ. ನಿರುಪಮಾ ಅವರು ಮನೆಯವರ ಒಪ್ಪಿಗೆ ಪಡೆದು ತಾನು ಪ್ರೀತಿಸಿದ ದಿಲೀಪ್ ಅವರನ್ನು ವರಿಸಿದರು.

ಆಗಸ್ಟ್ 20ರಂದು ಚುರುಕಿನ ಆಟದ ವ್ಯಕ್ತಿತ್ವವುಳ್ಳ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರು ಸ್ಕ್ವಾಷ್ ತಾರೆ ದೀಪಿಕಾ ಪಳ್ಳಿಕಲ್ ಅವರು ಹಿಂದೂ ಹಾಗೂ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾದರು.
ಜುಲೈ 7, 2015ರಂದು ಬಾಲಿವುಡ್ ನಟ ಶಾಹಿದ್‌ ಕಪೂರ್‌ ಅವರು ದೆಹಲಿ ಮೂಲದ ಮೀರಾ ರಜಪೂತ್‌ರನ್ನು ಮಂಗಳವಾರ ವಿವಾಹವಾದರು. ದೆಹಲಿ ಹೊರವಲಯದ ಫಾರ್ಮ್ ಹೌಸ್‌ವೊಂದರಲ್ಲಿ ಸರಳವಾಗಿ ಮದುವೆ ನೆರವೇರಿದ್ದು, ಕೇವಲ ಹತ್ತಿರದ ಸಂಬಂಧಿಗಳು ಮತ್ತು ಸ್ನೇಹಿತರು ಮಾತ್ರ ಭಾಗಿಯಾಗಿದ್ದರು.
ಏಪ್ರಿಲ್ 3, 2015ರಂದು ಕ್ರಿಕೆಟಿಗ ಸುರೇಶ್ ರೈನಾ ಅವರು ತಮ್ಮ ಬಾಲ್ಯದ ಗೆಳತಿ ಪ್ರಿಯಾಂಕಾ ಚೌಧರಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಡಿಸೆಂಬರ್ 13ರಂದು ಕ್ರಿಕೆಟಿಗ, ಡಬಲ್ ಸೆಂಚುರಿ ವೀರ ರೋಹಿತ್ ಶರ್ಮಾ ಅವರು ರಿತಿಕಾ ಸಜ್ ದೇ ಜತೆಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT